BSYಗೆ ಮುಳುವಾಗುತ್ತಾ 22 ಸೀಟಿನ ಹೇಳಿಕೆ?

Team Udayavani, Feb 28, 2019, 7:54 AM IST

yeddyurappa-b-s-2-700.jpg

ಬೆಂಗಳೂರು: ಒಂದು ಕಡೆಯಿಂದ ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆಯು ಪಾಕ್ ನೆಲದಲ್ಲಿರುವ ಉಗ್ರ ಶಿಬಿರಗಳನ್ನು ನಾಶ ಮಾಡುವ ಮೂಲಕ ದೇಶವಾಸಿಗಳ ಪ್ರಶಂಸೆಗೆ ಕಾರಣವಾಗಿದೆ. ಆದರೆ ಇನ್ನೊಂದು ಕಡೆ ಇದೇ ವಿಷಯವನ್ನು ನಮ್ಮ ರಾಜಕೀಯ ಪಕ್ಷಗಳು ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇದಕ್ಕೆ ಪೂರಕವೆಂಬಂತೆ ಮಾಜೀ ಮುಖ್ಯಮಂತ್ರಿ ಮತ್ತು ಕರ್ನಾಟಕ ರಾಜ್ಯ ಬಿ.ಜೆ.ಪಿ. ಅಧ್ಯಕ್ಷರಾಗಿರುವ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಕೊಟ್ಟಿರುವ ಒಂದು ಹೇಳಿಕೆ ಇದೀಗ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

‘ಉಗ್ರ ಶಿಬಿರಗಳ ಮೇಲೆ ನಮ್ಮ ಸೇನೆ ದಾಳಿ ಮಾಡಿದ ಬಳಿಕ ಇದೀಗ ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 22 ಸೀಟು ಗೆಲ್ಲಲು ಇದು ನೆರವಾಗಲಿದೆ’ ಎಂಬ ಅರ್ಥದಲ್ಲಿ ಆಡಿರುವ ಮಾತು ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಕಂಡುಬರುತ್ತಿದೆ.

ಒಂದು ಕಡೆ ನರೇಂದ್ರ ಮೋದಿ ಅವರು ‘ನಮ್ಮ ಸೇನೆ ಹಾಗೂ ಸೈನಿಕರ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ; ನಾವೂ ಸಹ ಈ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ’ ಎಂದು ಪದೇಪದೇ ಹೇಳುತ್ತಿದ್ದರೂ ಬಿ.ಎಸ್.ವೈ. ಸೇರಿದಂತೆ ಬಿ.ಜೆ.ಪಿ.ಯ ಹಲವು ನಾಯಕರು ಈ ವಿಷಯವನ್ನು ರಾಜಕೀಯ ಲಾಭಕ್ಕೆ ಬಳಸುತ್ತಿರುವ ಅಂಶ ಸ್ಪಷ್ಟವಾಗುತ್ತಿದೆ. ಈ ವಿಷಯ ಇದೀಗ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

‘ನಮ್ಮ ಯೋಧರು ಗಡಿಯಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಪಾಕಿಸ್ಥಾನಕ್ಕೆ ಪ್ರತ್ಯುತ್ತರ ನೀಡುತ್ತಿದ್ದಾರೆ. ಆದರೆ ಈ ಬಿ.ಜೆ.ಪಿ.ಯವರು ತಾವೇ ಗಡಿಯಲ್ಲಿ ಕಾದಾಡಿ ದೇಶವನ್ನು ಕಾಪಾಡುತ್ತಿರುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.
 
ಸೇನಾ ವಿಚಾರವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ರೀತಿಯಲ್ಲಿ ಬಿ.ಎಸ್.ವೈ. ನೀಡಿರುವ ಹೇಳಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ನಿವೃತ್ತ ಭೂ ಸೇನಾ ಮುಖ್ಯಸ್ಥ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯಸಚಿವರಾಗಿರುವ ಜನರಲ್ ವಿ.ಕೆ.ಸಿಂಗ್ ಅವರು ಸೇನಾ ಕಾರ್ಯಾಚರಣೆಯಂತಹ ಸೂಕ್ಷ್ಮ ವಿಚಾರಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳದಂತೆ ಟ್ವೀಟ್ ಮೂಲಕ ಬಿ.ಎಸ್.ವೈ. ಅವರಿಗೆ ಕಿವಿಮಾತು ಹೇಳಿದ್ದಾರೆ. ‘ಯಡಿಯೂರಪ್ಪನವರೇ ನಾನು ನಿಮ್ಮಲ್ಲಿ ಬೇಡಿಕೊಳ್ಳುತ್ತಿದ್ದೇನೆ ದಯವಿಟ್ಟು ಇಂತಹ ಹೇಳಿಕೆಗಳಿಂದ ದೂರವಿರಿ. ನಾವೀಗ ಒಂದಾಗಿದ್ದೇವೆ. ಕೇಂದ್ರ ಸರಕಾರವು ಉಗ್ರ ನಿಗ್ರಹ ಸೇನಾ ಕಾರ್ಯಾಚರಣೆಯನ್ನು ನಡೆಸಿದ್ದು ನಮ್ಮ ದೇಶವನ್ನು ಕಾಪಾಡಲು ಹಾಗೂ ನಮ್ಮ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಲೇ ಹೊರತು ಹೆಚ್ಚಿನ ಸೀಟುಗಳನ್ನು ಗೆಲ್ಲಲು ಅಲ್ಲ’ ಎಂದವರು ಯಡಿಯೂರಪ್ಪನವರನ್ನು ನಯವಾಗಿ ತಿವಿದಿದ್ದಾರೆ.

ಟಾಪ್ ನ್ಯೂಸ್

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.