B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ!!!
Team Udayavani, Sep 16, 2024, 6:52 PM IST
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನನ್ನು ನಾನೆಂದೂ ಒಪ್ಪುವದಿಲ್ಲ. ಅವನಿಂದಲೇ ಬಿಜೆಪಿ ಗೆ ಭ್ರಷ್ಟ ಎಂಬ ಕಳಂಕ ಬಂದಿದೆ. ಹೀಗಾಗಿ ಪಕ್ಷದ ಮುಂದಿನ ಅಧ್ಯಕ್ಷ ಯಾರು ಎಂಬುದು ವರಿಷ್ಠರು ತೀರ್ಮಾನ ಮಾಡಬೇಕು ಎಂದು ಬಿಜೆಪಿ ಶಾಸಕ ಹಾಗೂ ಪ್ರಭಾವಿ ನಾಯಕ ರಮೇಶ್ ಜಾರಕಿಹೊಳಿ ಸೋಮವಾರ (ಸೆ16)ನೇರವಾಗಿ ಏಕವಚದಲ್ಲಿ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಅಥಣಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ”ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಬಹಳ ಜೂನಿಯರ್. ಅವನಿಗೆ ಏನೂ ಐಡಿಯಾಲಜಿ ಇಲ್ಲ. ಸಿದ್ಧಾಂತ ಗೊತ್ತಿಲ್ಲ. ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್ ಕೊಟ್ಟವನೇ ವಿಜಯೇಂದ್ರ. ಅವನು ಅಧ್ಯಕ್ಷ ಆಗಿರುವುದಕ್ಕೆ ನನ್ನ ವಿರೋಧವಿದೆ ಎಂದು ಏಕವಚನದಲ್ಲೇ ಕಿಡಿ ಕಾರಿದರು.
”ನಾನೆಂದೂ ಯಡಿಯೂರಪ್ಪನವರ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಅನಂತ್ ಕುಮಾರ್ ನಿಧನರಾದ ಮೇಲೆ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕರಾಗಿಲ್ಲ. ಬಿಜೆಪಿಯು ಒಬ್ಬರ ಕೈಯಲ್ಲಿ ಆಡಳಿತ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಸ್ಪಷ್ಟವಾಗಿ ಹೇಳಿದ್ದೇವೆ. ಒಬ್ಬರ ಕಪಿಮುಷ್ಠಿಯಲ್ಲಿ ಪಕ್ಷ ಇರಬಾರದು. ಒಬ್ಬರ ಕೈಗೆ ಪಕ್ಷ ಸಿಕ್ಕರೆ ನಾನು ಕೂಡ ಎರಡನೇ ಯಡಿಯೂರಪ್ಪನಾಗುತ್ತೇನೆ. ಸರ್ವಾಧಿಕಾರಿಯಾಗುತ್ತೇನೆ ಎಂದರು.
”ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಆದರೆ ಪದೇ ಪದೇ ಅವರಿಗೇ ಗಂಟು ಬೀಳುವುದು ಏಕೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಮನೆಯಲ್ಲಿ ಕೂಡಲಿ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ. ಆದರೆ ಯಾವುದೇ ಕಾರಣಕ್ಕೂ ನಾವು ವಿಜಯೇಂದ್ರನನ್ನು ನಮ್ಮ ಅಧ್ಯಕ್ಷ ಎಂದು ಒಪ್ಪಿಕೊಳ್ಳುವ ಮಾತೇ ಇಲ್ಲ” ಎಂದರು.
”ಬೆಂಗಳೂರಿನಲ್ಲಿ ಆರ್‌ಎಸ್ ಎಸ್ ಪ್ರಮುಖ ನಾಯಕರ ಜತೆಗೆ ನಡೆದ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಸಭೆಯಲ್ಲಿ ಏನು ಚರ್ಚೆಯಾಯಿತು ಎಂಬುದನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ. ತಪ್ಪು ಮಾಡಿದವರಿಗೆ ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷವನ್ನು ಮುನ್ನಡೆಸಲಿ ಎಂದು ಈ ಸಭೆಯಲ್ಲಿ ಮನವಿ ಮಾಡಿದ್ದೇವೆ. ವರಿಷ್ಠರು ಪ್ರತಿಯೊಬ್ಬರಿಗೆ ಅವರು ಮಾಡಬೇಕಾದ ಕೆಲಸದ ಟಾಸ್ಕ್ ನೀಡಿದ್ದಾರೆ” ಎಂದರು.
”120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ನೀಡಿದ ಟಾಸ್ಕ್ ನಲ್ಲಿ ನಾನು ವಿಫಲನಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ” ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.