ಕುತೂಹಲ ಮೂಡಿಸಿದ ವಿಜಯೇಂದ್ರ ನಡೆ ?
Team Udayavani, Nov 23, 2020, 12:35 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಂಪುಟ ಕಸರತ್ತು ನಡೆಯುತ್ತಿರುವಾಗಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ದಿಢೀರ್ ದಿಲ್ಲಿ ಭೇಟಿ ಕುತೂಹಲ ಮೂಡಿಸಿದೆ. ರವಿವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಕೆಲಹೊತ್ತು ಮಾತುಕತೆ ನಡೆಸಿದ್ದ ವಿಜಯೇಂದ್ರ, ದಿಲ್ಲಿಗೆ ತೆರಳುವ ಮಾಹಿತಿ ನೀಡಿದ್ದರು. ಆ ಬಳಿಕ ಅವರು ದಿಲ್ಲಿಗೆ ತೆರಳಿ ವಾಪಸಾಗಿದ್ದಾರೆ ಎನ್ನಲಾಗಿದ್ದು, ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಲ್ಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂಧ ಪ್ರಸ್ತಾವಿಸಿದ್ದರು. ಆದರೆ, ವರಿಷ್ಠರಿಂದ ಯಾವುದೇ ರೀತಿಯಲ್ಲೂ ಹಸುರು ನಿಶಾನೆ ಸಿಕ್ಕಿರಲಿಲ್ಲ. ಶುಕ್ರವಾರ ನೀರಾವರಿ ಸಚಿವ ರಮೇಶ್ ಜಾರಕಿಹೊಳಿಯವರು ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಸೋಮಣ್ಣ-ಸಿಎಂ ಭೇಟಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಸಚಿವ ವಿ. ಸೋಮಣ್ಣ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾ ಚಾರ್ಯ ಕೂಡ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಚಿವಾಕಾಂಕ್ಷಿಗಳು ಈಗಾಗಲೇ ಲಾಬಿ ಆರಂಭಿಸಿದ್ದು, ಮೂಲ ಬಿಜೆಪಿಗರಲ್ಲಿ ಕೆಲವರು ಸಚಿವ ಸ್ಥಾನಕ್ಕಾಗಿ ಪದೇ ಪದೆ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಿದ್ದಾರೆ ಮತ್ತು ಸಂಪುಟದಲ್ಲಿರುವ ಕೆಲವರನ್ನು ಕೈಬಿಡಬೇಕು ಎಂಬ ಆಗ್ರಹವನ್ನು ಮಾಡುತ್ತಿದ್ದಾರೆ. ಹಾಗೆಯೇ ಸಚಿವರಲ್ಲಿ ಕೆಲವರು ಸಚಿವ ಸ್ಥಾನ ಉಳಿಸಿಕೊಳ್ಳುವುದಕ್ಕಾಗಿಯೂ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಉಪಚುನಾವಣೆ ಬಗ್ಗೆ ಚರ್ಚೆ
ಕೆಲವೇ ದಿನದಲ್ಲಿ ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರವಿವಾರ ಬಿಎಸ್‌ವೈ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇತ್ತೀಚಿಗಷ್ಟೇ ಮಸ್ಕಿ ಹಾಗೂ ಬಸವಕಲ್ಯಾಣಕ್ಕೆ ಪ್ರವಾಸ ಬೆಳೆಸಿದ್ದ ವಿಜಯೇಂದ್ರ ಅವರು ಅಲ್ಲಿನ ಪರಿಸ್ಥಿತಿ, ರಾಜಕೀಯ ಲೆಕ್ಕಚಾರಗಳ ಮಾಹಿತಿಯನ್ನು ಯಡಿಯೂರಪ್ಪ ಅವರಿಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ವರಿಷ್ಠರಿಗೆ ಬಿಟ್ಟ ವಿಚಾರ. ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಪ್ರಸ್ತಾವ ಮಾಡಿದ್ದೇವೆ. ಶಾಸಕರ ಭಾವನೆಗಳನ್ನು ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಹಾಗೂ ಬಿ.ಎಲ್.ಸಂತೋಷ್ ಅವರ ಗಮನಕ್ಕೆ ತಂದಿದ್ದೇವೆ.
-ಎಂ.ಪಿ.ರೇಣುಕಾಚಾರ್ಯ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.