B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ
Team Udayavani, Nov 17, 2024, 11:07 PM IST
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯ ಎಂದಿರುವ ಸಚಿವ ಜಮೀರ ಅಹ್ಮದ್ ಹೇಳಿಕೆ ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಈಗಾಗಲೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸಚಿವ ಜಮೀರ್ ಅಹ್ಮದ್ ಕರಿಯ ಹೇಳಿಕೆ ಕೊಡಬಾರದಿತ್ತು. ಅವರದ್ದು ಏನೇ ಪ್ರೀತಿ, ವಿಶ್ವಾಸ ಇರಲಿ. ಆ ರೀತಿ ಹೇಳಬಾರದಿತ್ತು, ಹೇಳಿದ್ದಾರೆ. ಕುಮಾರಸ್ವಾಮಿ ಕೂಡ ಕೊಚ್ಚೆ ಎಂದು ಹೇಳಿದ್ದಾರೆ. ಅದೂ ಸರಿಯಲ್ಲ ಎಂದರು.
40 ಪರ್ಸೆಂಟ್’ ಲೋಕಾ ವರದಿ ನೋಡಿಲ್ಲ: ಸಿಎಂ
ಬಾಗಲಕೋಟೆ: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಶೇ. 40ರಷ್ಟು ಭ್ರಷ್ಟಾಚಾರ ಇದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು. ಅದರ ಆಧಾರದ ಮೇಲೆ ಲೋಕಾಯುಕ್ತರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ. ನಾನು ಆ ವರದಿಯನ್ನು ಇನ್ನೂ ನೋಡಿಲ್ಲ. ಕೆಲವೊಮ್ಮೆ ಸಾಕ್ಷಿಗಳ ಕೊರತೆಯಿಂದ ಹಿನ್ನಡೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಯಾರದ್ದಾದರೂ ಕೊಲೆ ಆಗಿರುತ್ತದೆ. ಆ ಮೇಲೆ ಅವರು ಆ ಪ್ರಕರಣದಿಂದ ಖುಲಾಸೆ ಆಗುತ್ತಾರೆ. ಹಾಗೆಂದ ಮಾತ್ರಕ್ಕೆ ಕೊಲೆ ಆಗಲೇ ಇಲ್ಲ ಅಂತಲ್ಲ. ನಾನೂ ಒಬ್ಬ ವಕೀಲ ಆಗಿದ್ದವನು. ಅನೇಕ ಕೇಸ್ಗಳು ಸಾಕ್ಷಿ ಇಲ್ಲದೇ ವಜಾ ಆಗಿರುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.