ಬಾಬ್ರಿ ಮಸೀದಿ ತೀರ್ಪು ಸತ್ಯಕ್ಕೇ ಜಯ: ಡಿಸಿಎಂ ಸವದಿ ಹರ್ಷ
Team Udayavani, Sep 30, 2020, 3:13 PM IST
ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಮತ್ತು “ಸತ್ಯಕ್ಕೇ ಜಯ” ಎಂಬ ಶ್ರೀ ರಾಮನ ಧ್ಯೇಯವಾಕ್ಯಕ್ಕೆ ಪೂರಕವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಅವರು, ಸತ್ಯ ಎಂದಿಗೂ ಸತ್ಯವೇ, ಬಿಜೆಪಿಯು ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು. ಈಗ ನ್ಯಾಯದೇವತೆಯೂ ನಮ್ಮ ನಂಬಿಕೆಯನ್ನು ಸಾಕ್ಷಾತ್ಕರಿಸಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಹಿರಿಯ ಮುತ್ಸದ್ಧಿ ನಾಯಕರಾದ ಶ್ರೀ ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್‍ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಮುಂತಾದವರನ್ನು ಈ ಪ್ರಕರಣದ ಷಡ್ಯಂತ್ರದಲ್ಲಿ ಸಿಲುಕಿಸುವ ದೊಡ್ಡ ರಾಜಕೀಯ ಹುನ್ನಾರವೇ ನಡೆದಿತ್ತು. ಆದರೆ ಈ ನ್ಯಾಯನಿರ್ಣಯದಿಂದಾಗಿ ಪಟ್ಟಭದ್ರರಿಗೆ ಮುಖಭಂಗವಾಗಿದೆ. ಈ ಎಲ್ಲಾ ಹಿರಿಯ ಮುಖಂಡರಿಗೆ ವಿನಾಕಾರಣ ಮಾನಸಿಕ ಕಿರುಕುಳ ನೀಡುವ ಉದ್ದೇಶ ಹೊಂದಿದ್ದ ಕೆಲವು ರಾಜಕೀಯ ಶಕ್ತಿಗಳಿಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯು ತಕ್ಕ ಶಾಸ್ತಿ ಮಾಡಿದೆ ಎಂದು ಸವದಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಾಬ್ರಿ ಪ್ರಕರಣದ ಆರೋಪಿಗಳು ಖುಲಾಸೆ; ರಾಷ್ಟ್ರೀಯವಾದಿಗಳಿಗೆ ಇಂದು ಸಂತಸದ ದಿನ: ಈಶ್ವರಪ್ಪ
ಪ್ರಾಮಾಣಿಕ ಸೇವೆ ಮತ್ತು ಆದರ್ಶ ನಡೆನುಡಿಗಳ ಉತ್ತಮ ಆಡಳಿತಕ್ಕೆ ನಮ್ಮಲ್ಲಿ “ರಾಮರಾಜ್ಯ” ಎಂದು ಕರೆಯುವುದು ರೂಢಿ. ಅದೇರೀತಿ ಇತ್ತೀಚೆಗೆ ರಾಮಮಂದಿರದ ನಿರ್ಮಾಣಕ್ಕೆ ಅನುಮತಿ ನೀಡಿದ ಮತ್ತು ಈಗ ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿ ನೀಡಲಾದ ತೀರ್ಪುಗಳು “ರಾಮರಾಜ್ಯ”ದ ಪರಿಕಲ್ಪನೆಗೆ ಪೂರಕವಾಗಿಯೇ ಇದೆ ಎಂಬುದು ನನ್ನಂತಹ ಅನೇಕರ ಅನಿಸಿಕೆ.
ಪವಿತ್ರವಾದ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರವನ್ನು ನಿರ್ಮಿಸಬೇಕೆಂಬ ನಿಟ್ಟಿನಲ್ಲಿ ಅನೇಕ ಮುಖಂಡರು, ಸಾಧುಸಂತರು, ಕರಸೇವಕರು, ಶ್ರೀ ರಾಮನ ಭಕ್ತರು ಮತ್ತು ಬಿಜೆಪಿಯ ಸಮಸ್ತರೂ ಹಲವು ವರ್ಷಗಳಿಂದ ಹೋರಾಟ, ತ್ಯಾಗ ಬಲಿದಾನಗಳನ್ನು ಕೈಗೊಂಡಿದ್ದರು. ಈ ಎಲ್ಲಾ ಹೋರಾಟಗಳಿಗೆ ಈ ತೀರ್ಪಿನಿಂದಾಗಿ ಮತ್ತೊಮ್ಮೆ ಮೌಲ್ಯ ಹೆಚ್ಚಿದಂತಾಗಿದೆ. ಅತ್ಯಂತ ಸಹನೆಯಿಂದ, ಅಧ್ಯಯನಗಳಿಂದ ಈ ವಿದ್ವತ್‍ಪೂರ್ಣ ತೀರ್ಪು ಹೊರಹೊಮ್ಮಿದೆ ಎಂದು ಸವದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬಾಬ್ರಿ ಪ್ರಕರಣ ಕುರಿತು ವಿಶೇಷ ನ್ಯಾಯಾಲಯ ನೀಡಿದ ತೀರ್ಪು ಐತಿಹಾಸಿಕವಾಗಿದೆ :BSY
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.