Ballari; ಬಾಣಂತಿಯರ ಸಾ*ವು: ಔಷಧ ಕಂಪೆನಿ ಕಪ್ಪು ಪಟ್ಟಿಗೆ
ಸಿಎಂ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ... ಡ್ರಗ್ ಕಂಟ್ರೋಲರ್ ಅಮಾನತು ..ತಲಾ 2 ಲಕ್ಷ ಪರಿಹಾರ
Team Udayavani, Dec 1, 2024, 6:30 AM IST
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇರೆಗೆ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ರಾಜ್ಯ ಸರಕಾರ ಅಮಾನತು ಮಾಡಿದೆ. ಜತೆಗೆ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಲದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮೃತ ಬಾಣಂತಿಯರ ಕುಟುಂಬಕ್ಕೆ ಸರಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಔಷಧ ಕಂಪೆನಿಯಿಂದಲೂ ಪರಿಹಾರ ವಸೂಲಿ ಮಾಡಿ, ನೀಡಲು ಸೂಚಿಸಲಾಗಿದೆ. ಈ ಔಷಧದಿಂದ ರಾಜ್ಯದ ಇತರೆಡೆ ಎಲ್ಲಾದರೂ ಸಮಸ್ಯೆ ಆಗಿದೆಯೇ ಎನ್ನುವ ಬಗ್ಗೆ ಸಮಗ್ರ ವರದಿ ತರಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಸಭೆಯ ಬಳಿಕ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಸಭೆಯಲ್ಲೇನು ಚರ್ಚೆ?
ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯ ಇದೆ ಎನ್ನುವ ಅಭಿಪ್ರಾಯ ಸಭೆಯಲ್ಲಿ ಹಲವರಿಂದ ವ್ಯಕ್ತವಾಗಿವೆ. ಮೊದಲಿಗೆ ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುವುದು ಹಾಗೂ ತಮಿಳುನಾಡು ಮಾದರಿಯಲ್ಲಿ ಡ್ರಗ್ ನಿಯಂತ್ರಣಕ್ಕೆ ಹೊಸ ರೂಪುರೇಷೆ, ನಿಯಮಾವಳಿ ರಚಿಸುವ ಬಗ್ಗೆ ಸುದೀರ್ಘವಾಗಿ ಚರ್ಚೆಗಳು ಆಗಿವೆ.
ಏನಿದು ಪ್ರಕರಣ?
ನವೆಂಬರ್ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹಿಮೋಡಯಾಲಿಸಿಸ್ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದರು. ಉಳಿದ ಮೂವರಲ್ಲಿ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ. ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣ ಇದಕ್ಕೆ ಕಾರಣವಾಗಿರಬಹುದು ಎಂದು ಡಾ| ಸವಿತಾ ನೇತೃತ್ವದ ವೈದ್ಯರ ಸಮಿತಿಯು ಶಂಕೆ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ: ದಿನೇಶ್
ಬೆಂಗಳೂರು: ಸರಕಾರಿ ಆಸ್ಪತ್ರೆಯಲ್ಲಿ ಬಳಕೆಯಾಗುವ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐವಿ ರಿಂಗರ್ ಲ್ಯಾಕ್ಟೇಟ್ ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿದೆ. ಈ ಬಾರಿ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್‌ಗಳು ಐವಿ ದ್ರಾವಣ ಪೂರೈಕೆಯಾಗಿವೆ. ಅದರಲ್ಲಿ ಬಳಕೆ ಸಂದರ್ಭ ಎರಡು ಬ್ಯಾಚ್‌ಗಳ ಬಗ್ಗೆ ಕೆಲವು ಅನುಮಾನ ವ್ಯಕ್ತವಾಗಿತ್ತು. ನಮಗೆ ಪ್ರತಿಯೊಂದು ಜೀವವೂ ಮುಖ್ಯ. ಆದ್ದರಿಂದ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್‌ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು ಎಂದರು.
ಕಾಂಗ್ರೆಸ್‌ನಿಂದ ಸ್ತ್ರೀಯರ ಕಗ್ಗೊಲೆ, ಆಸ್ಪತ್ರೆಗೆ ಬಂದ ಮಹಿಳೆಗೆ ಜೀವದ ಗ್ಯಾರಂಟಿ ಕೊಡಿ: ಆಶೋಕ್ : ಬಿಜೆಪಿ ಕಿಡಿ
ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧ ಪೂರೈಕೆಯಿಂದ ಗರ್ಭಿಣಿ ಹಾಗೂ ಬಾಣಂತಿಯರ ಸಾವು ಸಂಭವಿಸುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದ ದಿವ್ಯ ನಿರ್ಲಕ್ಷÂವೇ ಕಾರಣ. ಸರಕಾರವು ಮಹಿಳೆಯರ ಕಗ್ಗೊಲೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಸಂಬಂಧ ಆರ್. ಅಶೋಕ್ “ಎಕ್ಸ್’ನಲ್ಲಿ ಪೋಸ್ಟ್ ಮಾಡಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸ್ವಾಭಿಮಾನಿ ಸಮಾವೇಶ, ಸಂಪುಟ ಪುನಾರಚನೆ ಎಂದು ರಾಜಕೀಯ ದಾಳ ಎಸೆಯುವಲ್ಲಿ ತಾವು ತೋರುತ್ತಿರುವ ಆಸಕ್ತಿಯಲ್ಲಿ ಸ್ವಲ್ಪವಾದರೂ ಆಡಳಿತದಲ್ಲಿ ತೋರಿಸಿ. ಹೆರಿಗೆಗಾಗಿ ಸರಕಾರಿ ಆಸ್ಪತ್ರೆಗಳಿಗೆ ಬರುವ ಬಡ ಕುಟುಂಬದ ಮಹಿಳೆಯರಿಗೆ ಜೀವಂತವಾಗಿ ಮನೆಗೆ ಹೋಗುವ ಗ್ಯಾರಂಟಿ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಕೊರತೆ, ಔಷಧಗಳ ಕೊರತೆ, ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ಭ್ರಷ್ಟಾಚಾರದ ವಿಚಾರಗಳು ಬಯಲಾಗಿದ್ದು, ಭ್ರಷ್ಟ ಕಾಂಗ್ರೆಸ್ ಸರಕಾರದಲ್ಲಿ ಬಡವರ ಆರೋಗ್ಯ ರಕ್ಷಣೆಯ ಗ್ಯಾರಂಟಿಯೂ ಇಲ್ಲದಂತಾಗಿರುವುದು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷವಿಜಯೇಂದ್ರ ಕಿಡಿಕಾರಿದ್ದಾರೆ.
ವರದಿ ಕೇಳಿದ ಉಪಲೋಕಾಯುಕ್ತರು
ಮಹಿಳಾ ಒಳರೋಗಿಗಳು ಮೃತಪಟ್ಟಿರುವ ಪ್ರಕರಣದ ಸಂಬಂಧ ಆಸ್ಪತ್ರೆಗಳಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಬಳ್ಳಾರಿಯ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ಉಪಲೋಕಾಯುಕ್ತ ನ್ಯಾ| ಬಿ. ವೀರಪ್ಪ ಮೌಖೀಕವಾಗಿ ಸೂಚಿಸಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.