Ballari ಬಾಣಂತಿಯರ ಸಾ*ವು: ವಿಪಕ್ಷ ಆಕ್ಷೇಪ, ಸರಕಾರ ಕ್ರಮ


Team Udayavani, Dec 7, 2024, 6:10 AM IST

siddaramaiah

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವು ಸಚಿವ ಸಂಪುಟ ಸಭೆಯಲ್ಲೂ ಪ್ರತಿಧ್ವನಿಸಿದ್ದು, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಕರಣದ ವಿವರಣೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರಲ್ಲದೆ, ರಿಂಗಲ್‌ ಲ್ಯಾಕ್ಟೇಟ್‌ ಪೂರೈಸಿದ ಕಂಪೆನಿಯ ವಿರುದ್ಧ ಕಠಿನ ಕ್ರಮಕ್ಕೆ ಸೂಚಿಸಿದ್ದಾರೆ.

ಸಂಪುಟ ಸಭೆಯ ಆರಂಭದಲ್ಲೇ ಈ ವಿಷಯ ಪ್ರಸ್ತಾವವಾಗಿದ್ದು, ಸಚಿವ ದಿನೇಶ್‌ ಗುಂಡೂರಾವ್‌ ಅವರು ಈವರೆಗಿನ ಬೆಳವಣಿಗೆಗಳ ಬಗ್ಗೆ ಸಂಪುಟ ಸಭೆಗೆ ಮಾಹಿತಿ ನೀಡಿದರು.

ಪಶ್ಚಿಮ ಬಂಗಾಲ ಫಾರ್ಮಾಸುಟಿಕಲ್‌ ಎಂಬ ಕಂಪೆನಿಯು ರಿಂಗಲ್‌ ಲ್ಯಾಕ್ಟೇಟ್‌ ಎಂಬ ದ್ರಾವಣ ಪೂರೈಸಿದ್ದು, ಅದರಲ್ಲಿ ದೋಷ ಕಂಡುಬಂದಿತ್ತು. ನಮ್ಮಿಂದ ಇದಕ್ಕೆ ತಡೆಯೊಡ್ಡಿದ್ದೆವು. ಆದರೆ ಕೇಂದ್ರೀಯ ಔಷಧಿ ಪ್ರಯೋಗಾಲಯದಿಂದ ಗುಣಮಟ್ಟ ಪರೀಕ್ಷೆ ಮಾಡಿಸಿ ಸರಬರಾಜು ಮಾಡಿತ್ತು. ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 9 ಬಾಣಂತಿಯರಿಗೆ ಈ ದ್ರಾವಣವುಳ್ಳ ಚುಚ್ಚುಮದ್ದು ನೀಡಿ ಸಮಸ್ಯೆ ಸೃಷ್ಟಿಯಾಗಿತ್ತು. ಈ ಪೈಕಿ ನಾಲ್ವರು ಮೃತಪಟ್ಟಿದ್ದರು. ಉಳಿದವರು ಚೇತರಿಸಿಕೊಳ್ಳುವ ವಿಶ್ವಾಸವಿತ್ತು. ಆದರೆ ಸುಮಯಾ ಎಂಬಾಕೆಗೆ ಕಿಡ್ನಿ ಸಮಸ್ಯೆಯೂ ಇದ್ದುದರಿಂದ ಉಳಿಸಿಕೊಳ್ಳಲಾಗಲಿಲ್ಲ ಎಂದರು.

ಔಷಧ ಸರಬರಾಜು ನಿಗಮಕ್ಕೆ ಕಾಯಕಲ್ಪ
ಸಂಪುಟ ಸಭೆಯ ಅನಂತರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಔಷಧ ಸರಬರಾಜು ನಿಗಮ (ಕೆಎಸ್‌ಎಂಸಿಎಲ್‌)ಕ್ಕೆ ಕಾಯಕಲ್ಪ ನೀಡುವತ್ತ ಕೆಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ನಿಟ್ಟಿನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಹೇಳಿದರು. ಔಷಧ ಸರಬರಾಜು ನಿಗಮಕ್ಕೂ ಕಾಯಕಲ್ಪ ನೀಡುವ ಅಗತ್ಯ ಇದೆ. ನಿಗಮದ ಟೆಂಡರ್‌ಗಳಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸುವಂತಹ ದೊಡ್ಡ ಕಂಪೆನಿಗಳೂ ಪಾಲ್ಗೊಳ್ಳುವಂತಾಗಬೇಕು. ಇನ್ನಷ್ಟು ಪರಿಣಕಾರಿಯಾಗಿ ಔಷಧ ಗುಣಮಟ್ಟ ಹಾಗೂ ಉತ್ಪಾದನೆ ಕುರಿತಂತೆ ಪರಿಶೀಲನೆ ಆಗಬೇಕಿದೆ. ಈ ನಿಟ್ಟಿನಲ್ಲಿ ಟೆಂಡರ್‌ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಸೂಚಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಿಗಮ ಉತ್ತಮವಾಗಿ ಕಾರ್ಯನಿರ್ವಹಿಸುವತ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧ ನಿಯಂತ್ರಕರನ್ನು ಅಮಾನತುಪಡಿಸಲಾಗಿದೆ. ಯಾವ ಕಾರಣಕ್ಕಾಗಿ ಈ ರೀತಿ ಆಗುತ್ತಿದೆ, ಕಾರಣವೇನು ಎಂಬ ಬಗ್ಗೆ ಪರಿಶೀಲಿಸುತ್ತೇವೆ. ಕಂಪೆನಿಯ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೂ ಸೂಚಿಸಲಾಗಿದೆ. – ಸಿದ್ದರಾಮಯ್ಯ, ಮುಖ್ಯಮಂತ್ರಿ

ರಿಂಗರ್ಸ್‌ ಲ್ಯಾಕ್ಟೇಟ್‌ ದ್ರಾವಣ ಸರಬರಾಜು ಮಾಡಿದ ಸಂಸ್ಥೆ ವಿರುದ್ಧ ಕ್ರಮ ಆಗುತ್ತಿದೆ. ಫಾರ್ಮಾಸುÂಟಿಕಲ್‌ ಕಂಪೆನಿಗಳ ವಿರುದ್ಧ ಕ್ರಮ ಜರಗಿಸುವಲ್ಲಿ ನಮ್ಮ ಕಾನೂನುಗಳು ವಿಫಲವಾಗಿವೆ. ನನ್ನ ರಾಜೀನಾಮೆಯಿಂದ ಎಲ್ಲ ಸರಿ ಆಗುವುದಾದರೆ ಅದಕ್ಕೂ ನಾನು ಸಿದ್ಧ.- ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಲೋಕಾಯುಕ್ತರಿಗೆ ಬಿಜೆಪಿ ದೂರು
ಬಳ್ಳಾರಿ ಹಾಗೂ ರಾಜ್ಯದ ವಿವಿಧ ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯ ಬಿಜೆಪಿ ನಿಯೋಗವು ಶುಕ್ರವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌ ಅವರನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಬಿಜೆಪಿ ಬೆಂಗಳೂರು ದಕ್ಷಿಣ ಜಿÇÉಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ| ನಾರಾಯಣ್‌, ಸಹ ಸಂಚಾಲಕ ಡಾ| ಎಂ.ಎಸ್‌. ಸದಾನಂದ, ರಾಜ್ಯ ಸಮಿತಿ ಸದಸ್ಯ ಡಾ| ಲಕ್ಷ್ಮಣ್‌, ಡಾ| ಸಾಯಿ ಆದರ್ಶ್‌ ಅವರ ನಿಯೋಗವು ಈ ಮನವಿ ಸಲ್ಲಿಸಿದೆ.

ಬಾಣಂತಿಯರ ಸಾವು, ಶಿಶುಗಳ ದುರ್ಮರಣದ ಕುರಿತು ಗಮನ ಸೆಳೆಯಿತಲ್ಲದೆ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿತು. ದುರ್ಘ‌ಟನೆಯ ಹೊಣೆ ಹೊತ್ತು ದಿನೇಶ್‌ ಗುಂಡೂರಾವ್‌ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕಿದೆ ಎಂದು ನಿಯೋಗವು ಮನವಿಯಲ್ಲಿ ಕೋರಿದೆ.

ನ್ಯಾಯಾಂಗ ತನಿಖೆ ಆಗಬೇಕು
ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯ ಕಾಂಗ್ರೆಸ್‌ ಸರಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ದುರ್ಘ‌ಟನೆ ಸಂಬಂಧ ಸೂಕ್ತ ನ್ಯಾಯಾಂಗ ತನಿಖೆ ಮಾಡಿಸಬೇಕು ಹಾಗೂ ಮೃತ ಗರ್ಭಿಣಿಯರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಕಪ್ಪು ಪಟ್ಟಿಗೆ ಸೇರಿದ್ದ ಕಂಪೆನಿಯಿಂದ ಇವರು ಐವಿ ಗುÉಕೋಸ್‌ ಖರೀದಿಸಿದ್ದರು. ಬಳ್ಳಾರಿ ಸರಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ದುರ್ಘ‌ಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಇಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಟೀಕಿಸಿದರು. ಜಮೀರ್‌ಅಹ್ಮದ್‌ ಉಸ್ತುವಾರಿ ಸಚಿವರು, ಅವರಿಗೂ ಇದಕ್ಕೂ ಸಂಬಂಧವೇ ಇಲ್ಲ. ಅವರು ವಕ#… ವಿಚಾರದಲ್ಲಿ ವ್ಯಸ್ತರಾಗಿದ್ದಾರೆ. ಸರಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ. ಕಪ್ಪು ಪಟ್ಟಿಗೆ ಸೇರಿದ್ದ ಕಂಪೆನಿಯಿಂದ ಖರೀದಿ ನಡೆದಿರುವುದರಿಂದ ರಾಜ್ಯ ಸರಕಾರವೇ ಈ ದುರ್ಘ‌ಟನೆಗೆ ಹೊಣೆ ಹೊರಬೇಕೆಂದರು.

ಬಾಣಂತಿಯರ ಜೀವ ಉಳಿಸದೆ ಸಮಾವೇಶ ಏಕೆ?
ಬಿಮ್ಸ್‌ನಲ್ಲಿ ಒಂದೇ ತಿಂಗಳಲ್ಲಿ ಐವರು ಬಾಣಂತಿಯರ ಸಾವು ಸಂಭವಿಸಿವೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡª ದೊಡ್ಡ ಸಮಾವೇಶ ಮಾಡುತ್ತಿದ್ದಾರೆ. ಮಕ್ಕಳು, ಬಾಣಂತಿಯರ ಜೀವ ಉಳಿಸದೆ ಎಷ್ಟು ಸಮಾವೇಶ ಮಾಡಿದರೆ ಏನು ಪ್ರಯೋಜನ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದರು. ಸುದ್ದಿಗಾರರ ಜತೆ ಮಾತನಾಡಿ, ಇಷ್ಟು ದೊಡ್ಡ ದುರಂತ ಸಂಭವಿಸಿದರೂ ಆಸ್ಪತ್ರೆಗೆ ಬರಲು ಅವರ ಸಚಿವರಿಗೆ ಪುರುಸೊತ್ತು ಇಲ್ಲ. ಉಸ್ತುವಾರಿ ಸಚಿವ ಜಮೀರ್‌ ಸಹ ಬಂದಿಲ್ಲ. ಸತ್ತಿರುವ ಬಾಣಂತಿಯರ ಪರ ರಾಜ್ಯ ಸರಕಾರ ನಿಲ್ಲುತ್ತಿಲ್ಲ ಎಂದರು.

ಶಾಪ, ಪಾಪದಿಂದಲೇ ಸರಕಾರ ನಾಶ
ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ ಸರಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ. ಶಾಪ ಮತ್ತು ಪಾಪದಿಂದಲೇ ಈ ಸರಕಾರ ನಾಶವಾಗಲಿದೆ ಎಂದು ವಿಧಾನಸಭೆ ವಿಪಕ್ಷದ ನಾಯಕ ಆರ್‌. ಅಶೋಕ ಆಕ್ರೋಶ ಪತ್ರಿಕಾಗೋಷ್ಠಿಯಲ್ಲಿ ವ್ಯಕ್ತಪಡಿಸಿದರು.

ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ಅನಂತರವೂ ತಾಯಂದಿರು ಸತ್ತಿದ್ದಾರೆ. ಹತ್ತು ತಿಂಗಳಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಆಗ್ರಹಿಸಿದರು.

ಸಿಎಂ ಸಭೆ ಮಾಡಿದ ಅನಂತ ರವೂ ತಾಯಂದಿರು ಸಾಯುತ್ತಿದ್ದಾರೆ ಎಂದರೆ ಮುಖ್ಯಮಂತ್ರಿಗೆ ಸರ ಕಾರದಲ್ಲಿ ಹಿಡಿತವಿಲ್ಲ, ಇವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ನಾಯಕರು ಜನರ ಹಿತ ಅವಗಣಿಸಿ ವಿಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಬಳ್ಳಾರಿ ಜಿಲ್ಲಾಸ್ಪತ್ರೆಯ ನಾಲ್ವರು ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಣಂತಿ ಗುರುವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನ. 10ರಂದು ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ ಮೂಲಕ ಹೆರಿಗೆಯಾಗಿದ್ದ 7 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿ ಇಬ್ಬರು ಜಿಲ್ಲಾಸ್ಪತ್ರೆಯಲ್ಲೇ ಮೃತಪಟ್ಟಿದ್ದು, ಉಳಿದ ಏಳು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್‌ಗೆ ದಾಖಲಿಸಲಾಗಿತ್ತು. ಬಳಿಕ ಬಿಮ್ಸ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು. ಉಳಿದ ಮೂವರಲ್ಲಿ ಕೂಡ್ಲಿಗಿ ಮೂಲದ ಸುಮಯ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಈಚೆಗೆ ಚೇತರಿಸಿಕೊಂಡಿದ್ದಾರೆ ಎನ್ನಲಾಗಿತ್ತಾದರೂ ಗುರುವಾರ ಅಸುನೀಗಿದ್ದಾರೆ.

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.