ಬಾನಂಗಳದಲ್ಲಿ  ದೇಶಿ ವಿಮಾನಗಳ ಬೆರಗು

Team Udayavani, Feb 15, 2017, 3:45 AM IST

flight.jpg

ಬೆಂಗಳೂರು: ಏಷ್ಯಾದ ಅತಿ ದೊಡ್ಡ ಮತ್ತು ಬೆಂಗಳೂರಿನಲ್ಲಿ ನಡೆಯುತ್ತಿರುವ 11ನೇ ವೈಮಾನಿಕ ಪ್ರದರ್ಶನ “ಏರೋ ಇಂಡಿಯಾ-2017’ಕ್ಕೆ ಯಲಹಂಕದ ವಾಯುನೆಲೆಯಲ್ಲಿ ಮಂಗಳವಾರ ಚಾಲನೆ ದೊರೆಯಿತು. ಕೇಂದ್ರ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ಪ್ರದರ್ಶನಕ್ಕೆ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ನಾಗರಿಕ ವಿಮಾನಯಾನ ಇಲಾಖೆಯ ಸಹಭಾಗಿತ್ವದಲ್ಲಿ, ರಕ್ಷಣಾ ಇಲಾಖೆ ಏರೋ ಇಂಡಿಯಾ ಪ್ರದರ್ಶನ ನಡೆಸುತ್ತಿರುವುದು ವಿಶೇಷ. ಹೀಗಾಗಿ ಏರೋ ಇಂಡಿಯಾವನ್ನು ರಕ್ಷಣಾ ಕ್ಷೇತ್ರದ ಜತೆಗೆ ನಾಗರಿಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಗೆ ಪೂರವಾಗಿ ಆಯೋಜಿಸುವ ಉಪಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ಏರೋ ಇಂಡಿಯಾ-2017ಕ್ಕೆ ಚಾಲನೆ ನೀಡಿ ಮಾತನಾಡಿದ ಪರಿಕ್ಕರ್‌, ಏಷ್ಯಾದ ಅತಿ ದೊಡ್ಡ ಮತ್ತು ವಿಶ್ವದ ಎರಡನೇ ವೈಮಾನಿಕ ಪ್ರದರ್ಶನದಲ್ಲಿ ರಕ್ಷಣಾ ಕ್ಷೇತ್ರ ಮತ್ತು ನಾಗರಿಕ ವಿಮಾನಯಾನ ಕ್ಷೇತ್ರಗಳನ್ನು ಒಂದೇ ವೇದಿಕೆಯಡಿ ತರುವ ಮೂಲಕ ಉತ್ಪಾದನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮುಂದಿನ ವರ್ಷಗಳಲ್ಲಿ ಉತ್ತಮ ಸಾಧನೆ ತೋರುವ ಪ್ರಯತ್ನಕ್ಕೆ ಕೈಹಾಕಲಾಗಿದೆ ಎಂದರು. ಮೇಕ್‌ ಇನ್‌ ಇಂಡಿಯಾದಲ್ಲಿ ವಿದೇಶಿ ಕಂಪನಿಗಳು ಭಾರತದಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿ ಹೂಡಿಕೆ ನೀತಿಯನ್ನು ಸರಳೀಕರಣಗೊಳಿಸಲಾಗಿದ್ದು, ವಿದೇಶಿ ಮತ್ತು ಭಾರತೀಯ ಕಂಪನಿಗಳು ಜತೆಯಾಗಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸ್ಟಾಟ್‌ ìಅಪ್‌ಗ್ಳಲ್ಲೂ ಆವಿಷ್ಕಾರಗಳನ್ನು ಕೈಗೊಳ್ಳುವವರಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.

ರಕ್ಷಣಾ ಕ್ಷೇತ್ರಕ್ಕೆ ಎಚ್‌ಎಎಲ್‌ ಮತ್ತು ಬಿಇಎಲ್‌ನ ಕೊಡುಗೆಗಳು ಅಭಿನಂದನೀಯ. ಇತ್ತೀಚಿನ ದಿನಗಳಲ್ಲಿ ಈ ಕಂಪನಿಗಳು ಆವಿಷ್ಕಾರ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿವೆ ಎಂದು ಶ್ಲಾ ಸಿದರು.

ಕೇಂದ್ರ ಸಚಿವ ಪಿ.ಅಶೋಕ್‌ ಗಜಪತಿ ರಾಜು, ರಾಜ್ಯದ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ, ರಕ್ಷಣಾ ಖಾತೆ ರಾಜ್ಯ ಸಚಿವ ಡಾ.ಸುಭಾಷ್‌ ಭಾಂಬ್ರೆ, ವಿಮಾನಯಾನ ಖಾತೆ ರಾಜ್ಯ ಸಚಿವ ಜಯಂತ್‌ ಸಿನ್ಹಾ, ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆ ಮುಖ್ಯಸ್ಥರು ಹಾಜರಿದ್ದರು. 

ಪ್ರದರ್ಶನ ನೀಡಿದ ವಿಮಾನಗಳು
ಎಂಐ-17, ಎಲ್‌ಯುಎಚ್‌ (ಲಘು ಬಹುಪಯೋಗಿ ಹೆಲಿಕಾಪ್ಟರ್‌), ಅವಾಕ್ಸ್‌ ಅಳವಡಿಸಿದ ವಿಮಾನ, ಹಾಕ್‌-1 ಯುದ್ಧ ವಿಮಾನ, ಎಚ್‌ಟಿಟಿ-40 ಯುದ್ಧ ವಿಮಾನ, ತೇಜಸ್‌ ಲಘು ಯುದ್ಧ ವಿಮಾನ, ಅಮೆರಿಕದ ಎಫ್-16, ಸುಖೋಯ್‌
ಸು-30, ಪಿಲಾಟಸ್‌ ಪಿಸಿ-7 ಯುದ್ಧ ವಿಮಾನ, ಎಎಲ್‌ಎಚ್‌, ಧ್ರುವ (ಲಘು ಯುದ್ಧ ಹೆಲಿಕಾಪ್ಟರ್‌), ಸ್ವಿಡನ್‌ನ ಸ್ವಿಂಗ್‌ ರೋಡ್‌ ಫೈಟರ್‌ ಯುದ್ಧ ವಿಮಾನ, ರಫೇಲ್‌, ಸೂರ್ಯಕಿರಣ್‌, ಸಾರಂಗ್‌, ಟೈಗರ್‌ ಮಾತ್‌ ಹೆಲಿಕಾಪ್ಟರ್‌. 

ಪಿಎಂ-ಸಿಎಂ ಗೈರು
ವೈಮಾನಿಕ ಪ್ರದರ್ಶನದ ಉದ್ಘಾಟನೆಯಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರುಹಾಜರಾಗಿದ್ದರು. ಇವರ ಅನುಪಸ್ಥಿತಿ ಉದ್ಘಾಟನಾ ಸಮಾರಂಭದಲ್ಲಿ ಎದ್ದು ಕಾಣುತ್ತಿತ್ತು. ಮುಖ್ಯಮಂತ್ರಿಗಳ ಪರವಾಗಿ ಪ್ರದರ್ಶನಕ್ಕೆ ಆಗಮಿಸಿದ್ದ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ, ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬರಲು ಸಾಧ್ಯವಾಗಿಲ್ಲ ಎಂದರಲ್ಲದೆ, ಮುಖ್ಯಮಂತ್ರಿಗಳ ಸಂದೇಶ ಮತ್ತು ಭಾಷಣವನ್ನು ಓದಿದರು. 

ಕೈಕೊಟ್ಟ ಕರೆಂಟ್‌
ನೂರಾರು ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲೂ ಕರೆಂಟ್‌ ಕೈಕೊಟ್ಟಿದ್ದು ತುಸು ಮುಜುಗರ ಉಂಟಾಯಿತು. ಕಾರ್ಯಕ್ರಮದ ಆರಂಭದಲ್ಲಿ ನಿರೂಪಕರು ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅಶೋಕ್‌ ಗುಪ್ತ ಅವರನ್ನು ಸ್ವಾಗತ ಭಾಷಣಕ್ಕೆ ಆಗಮಿಸುವ ಮೊದಲೇ ಧ್ವನಿವರ್ಧಕ ಸ್ಥಗಿತಗೊಂಡಿತು. ಎರಡು ನಿಮಿಷಗಳ ನಂತರ ಪುನರಾರಂಭಗೊಂಡಿತು. ತಾಂತ್ರಿಕ ದೋಷದಿಂದ ಅಡಚಣೆ ಉಂಟಾಯಿತು ಎಂದು ನಿರೂಪಕರು ಸಮಜಾಯಿಷಿ ನೀಡಿದರು.

– “ಏರೋ ಇಂಡಿಯಾ-2017’ಕ್ಕೆ ಅದ್ದೂರಿ ಚಾಲನೆ
– ಏಷ್ಯಾದ ಅತಿ ದೊಡ್ಡ  ವೈಮಾನಿಕ ಪ್ರದರ್ಶನ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.