Ex PM ಇಂದಿರಾಗೆ ಕಪ್ಪು ಬಾವುಟ ತೋರಿಸಿದ್ದ ಬಾಂಡಗೆ ಈಗ ರಾಜ್ಯಸಭೆ ಅಭ್ಯರ್ಥಿ
ಸಂಘ-ಪರಿವಾರದ ಹಿರಿಯ ನಾಯಕನಿಗೆ ಬಂಪರ್ ಗಿಫ್ಟ್ ಕೊಟ್ಟ ಬಿಜೆಪಿ
Team Udayavani, Feb 11, 2024, 9:36 PM IST
ಬಾಗಲಕೋಟೆ : ವಿಧಾನಪರಿಷತ್ ಮಾಜಿ ಸದಸ್ಯ, ಬಿಜೆಪಿ ಜಿಲ್ಲಾ ಕಾರ್ಯಾಧ್ಯಕ್ಷರೂ ಆಗಿರುವ, ಸಂಘ-ಪರಿವಾರದ ಹಿರಿಯ ಮುಖಂಡ ನಾರಾಯಣಸಾ ಕೃಷ್ಣಾಸಾ ಬಾಂಡಗೆ ಅವರಿಗೆ ರಾಜ್ಯಸಭೆ ಸದಸ್ಯ ಸ್ಥಾನದ ಅಭ್ಯರ್ಥಿಯಾಗುವ ಅವಕಾಶ ಒಲಿದು ಬಂದಿದೆ.
ತಮ್ಮ 17ನೇ ವಯಸ್ಸಿನಲ್ಲಿಯೇ ಸಂಘ-ಪರಿವಾರದ ಸಕ್ರಿಯ ಕಾರ್ಯಕರ್ತರಾಗಿ ಸಂಘಟನೆ, ಹಿಂದತ್ವದ ಪರ ಹೋರಾಟಕ್ಕೆ ಧುಮುಕಿದ ನಾರಾಯಣಾಸಾ ಬಾಂಡಗೆ ಅವರಿಗೆ ಈ ಅವಕಾಶ ಅವಕಾಶ ಒಲಿದು ಬಂದಿರುವುದು ಅಚ್ಚರಿ ತಂದಿದ್ದು, ಜತೆಯಲ್ಲೇ ಸಂಭ್ರಮ ಮನೆ ಮಾಡಿದೆ.
ಸಮನ್ವಯ ನಾಯಕ
ಜಿಲ್ಲೆಯ ಬಿಜೆಪಿ ಹಿರಿಯ ನಾಯಕರಾದ ಬಾಂಡಗೆ, ಗುಂಪುಗಾರಿಕೆ ರಾಜಕೀಯದಿಂದ ದೂರ ಇದ್ದವರು. ಎಲ್ಲ ಬಣಗಳೊಂದಿಗೂ ಸಮನ್ವಯತೆ ಸಾಧಿಸಿದ್ದ ಅವರು, ಪ್ರಸ್ತುತ ವಿಜಯಪುರ ಜಿಲ್ಲೆಯ ಬಿಜೆಪಿ ಉಸ್ತುವಾರಿ ಕೂಡಾ ಆಗಿದ್ದಾರೆ. ಅಖಂಡ ವಿಜಯಪುರ ಜಿಲ್ಲೆ ಇದ್ದಾಗಲೇ ಎರಡು ಬಾರಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿದ್ದ ಅವರು, ಬಾಗಲಕೋಟೆ ಪ್ರತ್ಯೇಕ ಜಿಲ್ಲೆ ಆದ ಬಳಿಕ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದರು.ಪಕ್ಷಕ್ಕೆ ಅಧಿಕಾರ ಇರಲಿ, ಅಧಿಕಾರ ಇಲ್ಲದೇ ಇರಲಿ, ಯಾವತ್ತೂ ಪಕ್ಷನಿಷ್ಠೆ ಬಿಡದ ನಾರಾಯಣಸಾ, ತಮ್ಮ ಪ್ರಖರ ಭಾಷಣದ ಮೂಲಕ ಗಮನ ಸೆಳೆದವರು.
ಹೋರಾಟದ ಹಾದಿ
ನಾರಾಯಣಸಾ ಬಾಂಡಗೆ ಅವರು, ಕೇಂದ್ರದಲ್ಲಿ 1999ರಿಂದ 2004ರ ವರೆಗೆ ಅಟಲ್‌ಬಿಹಾರಿ ವಾಜಪೇಯಿ ಸರ್ಕಾರ ಇದ್ದಾಗ ಗಿರಣಿ ಕಾರ್ಮಿಕರ ಸಂಘದ (ಕಪಾಟ) ಅಧ್ಯಕ್ಷರಾಗಿದ್ದರು. ಬಳಿಕ ರಾಜ್ಯದಲ್ಲಿ 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರು ವರ್ಷಗಳ ಅವಧಿಗೆ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಾಮ ನಿರ್ದೇಶನಗೊಂಡು, ಪರಿಷತ್ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.
17ನೇ ವರ್ಷಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯನಾಗಿ ಸೇರ್ಪಡೆಗೊಂಡ ಅವರು, ಕಳೆದ 40 ವರ್ಷಗಳಿಂದ ಪರಿವಾರದ ಸಂಘಟನೆ, ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಬಾಗಲಕೋಟೆಯಲ್ಲಿ ಎಬಿವಿಪಿ ಸ್ಥಾಪಕ ಸದಸ್ಯರಾಗಿ, ವಿಶ್ವ ಹಿಂದೂ ಪರಿಷತ್‌ನಿಂದ ಶ್ರೀ ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಆರಂಭಿಸಿದ್ದ ಬರ ಪೀಡಿತ ಪ್ರದೇಶಗಳಿಗೆ ಆಹಾರ ಪೂರೈಕೆ ಕೇಂದ್ರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ.
ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಮಶಿಲೆ ಸಂಗ್ರಹಿಸುವ ಸಾಮೂಹಿಕ ಕಾರ್ಯದಲ್ಲಿ ಭಾಗವಹಿಸಿದ್ದ ಅವರು, 1973ರಲ್ಲಿ ಜನಸಂಘದ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದಾಗ, ಇವರನ್ನೂ ಬಂಧಿಸಿ 18 ದಿನಗಳ ಕಾಲ ಜೈಲಿನಲ್ಲಿ ಇಡಲಾಗಿತ್ತು. ಇಂದಿರಾ ಗಾಂಧಿ, ಆಲಮಟ್ಟಿಗೆ ಭೇಟಿ ನೀಡಿದ್ದ ವೇಳೆ ಪ್ರಭಟನೆ ನಡೆಸುತ್ತಿದ್ದ ಬಾಂಡಗೆ ಅವರ ಮೇಲೆ ಲಾಠಿ ಪ್ರಹಾರ ನಡೆದಿತ್ತು.
ತುರ್ತು ಪರಿಸ್ಥಿತಿಯಲ್ಲೂ ಹೋರಾಟ
ತುರ್ತು ಪರಿಸ್ಥಿತಿಯಲ್ಲಿ ದಿ.ಭಾವುರಾವ್ ದೇಶಪಾಂಡ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 1990 ಮತ್ತು 1992ರಲ್ಲಿ ನಡೆದ ಕರ ಸೇವೆಯಲ್ಲಿ ಸುಮಾರು 100 ಜನ ಕರ ಸೇವಕರೊಂದಿಗೆ ತೆರಳಿದ್ದರು.
ಕಾಶ್ಮೀರದ ಲಾಲ್‌ಚೌಕ್‌ನಲ್ಲಿ ರಾಷ್ಟç ಧ್ವಜಾರೋಹಣ ವೇಳೆ 60 ಜನ ಕಾರ್ಯಕರ್ತರೊಂದಿಗೆ ತಿರಂಗ ಯಾತ್ರೆಯಲ್ಲಿ ಇವರೂ ಭಾಗಿಯಾಗಿದ್ದರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಹೋರಾಟದ ವೇಳೆ ಲಾಠಿ ಏಟು ತಿಂದು ಬಂಧನಕ್ಕೊಳಗಾಗಿದ್ದರು. ತಮ್ಮ 40 ವರ್ಷಗಳ ಸಂಘಟನೆ-ಹೋರಾಟದಲ್ಲಿ 15ಕ್ಕೂ ಹೆಚ್ಚು ಬಾರಿ ಬಂಧನಕ್ಕೊಳಗಾಗಿದ್ದರು. ಸುಮಾರು 35ರಿಂದ 40 ಪ್ರಕರಣಗಳು ಇವರ ಮೇಲೆ ದಾಖಲಾಗಿದ್ದವು.
ಸಧ್ಯ ಅಖಿಲ ಭಾರತ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿರುವ ಬಾಂಡಗೆ, ದಿ.ಜಗನ್ನಾಥರಾವ್ ಜೋಶಿ, ದಿ.ಭಾವರಾವ್ ದೇಶಪಾಂಡೆ ಮಾರ್ಗದರ್ಶನದಲ್ಲಿ ಪಕ್ಷ ಹಾಗೂ ಸಂಘಟನೆಗಳ ಜವಾಬ್ದಾರಿ ನಿರ್ವಹಿಸಿದ್ದಾರೆ.
ವಿಶ್ವ ಹಿಂದೂಪರಿಷತ್, ಸಂಘ-ಪರಿವಾರದ ಜತೆಗೆ ರಾಜಕೀಯದಲ್ಲಿ ಸಕ್ರಿಯರಾಗಿರುವ ಬಾಂಡಗೆ, ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಎರಡು ಬಾರಿ ರಾಷ್ಟ್ರೀಯ ಸಮಾಲೋಚನೆ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ರಾಜ್ಯ ಉಪಾಧ್ಯಕ್ಷರಾಗಿದ್ದ ವೇಳೆ, ಉತ್ತರಕರ್ನಾಟಕದ 6 ಜಿಲ್ಲೆಗಳ ಉಸ್ತುವಾರಿ ಕೂಡ ಬಾಂಡಗೆ ಅವರಿಗೆ ವಹಿಸಲಾಗಿತ್ತು.
ಪಕ್ಷಕ್ಕೆ ನಿಷ್ಠೆ ಇರುವ, ಅಚಲ-ವಿಚಲ ಮಾತನಾಡದೇ ಇರುವ ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷ ಗುರುತಿಸುತ್ತದೆ ಎಂಬುದಕ್ಕೆ ನಾನು ಸಾಕ್ಷಿ. 40 ವರ್ಷಗಳ ಕಾಲ ಇಡೀ ದೇಶದ ಹಲವೆಡೆ ಪಕ್ಷ ಸಂಘಟನೆ, ಹೋರಾಟದಲ್ಲಿ ಪಾಲ್ಗೊಂಡ ನನಗೆ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಖುಷಿ ತಂದಿದೆ. ಇದು ಪ್ರತಿಯೊಬ್ಬ ಕಾರ್ಯಕರ್ತರಿಗೂ ಸಲ್ಲಬೇಕಾದ ಗೌರವ ಎಂದು ಭಾವಿಸುವೆ ಎಂದು ನಾರಾಯಣಸಾ ಬಾಂಡಗೆ ಹೇಳಿಕೆ ನೀಡಿದ್ದಾರೆ.
ತಮ್ಮ ಇಡೀ ಜೀವನವನ್ನು ಸಂಘ-ಪರಿವಾರ, ಹೋರಾಟ ಹಾಗೂ ಪಕ್ಷಕ್ಕಾಗಿ ಸವೆಸಿದ ನಾರಾಯಣಸಾ ಬಾಂಡಗೆ ಅವರನ್ನು ರಾಜ್ಯಸಭೆ ಸದಸ್ಯ ಸ್ಥಾನದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವುದು ದೊಡ್ಡ ಸಂಭ್ರಮ ತಂದಿದೆ. ನಿಷ್ಠೆ, ಶ್ರದ್ಧೆ ಹಾಗೂ ಪ್ರಾಮಾಣಿಕವಾಗಿ ದುಡಿದವರಿಗೆ ಅವಕಾಶ, ತಾನಾಗಿಯೇ ಒಲಿದು ಬರುತ್ತವೆ ಎಂಬುದಕ್ಕೆ ಬಾಂಡಗೆ ಅವರೇ ನಿದರ್ಶನ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.