ಬಂಡೀಪುರ: ಆನೆ ಹೊಟ್ಟೆಗೆ ಅರೆಕಾಸಿನ ಊಟ
Team Udayavani, Jan 17, 2018, 6:00 AM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದ ಸಾಕಾನೆಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಗುತ್ತಿಗೆಯ ಅವಧಿ ಮುಗಿದಿದ್ದರಿಂದ ಕಳೆದ ಹದಿನೈದು ದಿನಗಳಿಂದ ಸಮರ್ಪಕವಾಗಿ ಪೌಷ್ಟಿಕ ಆಹಾರವಿಲ್ಲದೆ ಸಾಕಾನೆ ಶಿಬಿರದ ಆನೆಗಳು ಸೊರಗಲಾಂಭಿಸಿವೆ. ಆಹಾರಕ್ಕಾಗಿ ಕಾಡನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಬಂಡೀಪುರದ ಶಿಬಿರದಲ್ಲಿ ಸಾಕಾನೆಗಳಾದ ಜಯಪ್ರಕಾಶ್, ಲಕ್ಷ್ಮೀ, ಚೈತ್ರಾ ಹಾಗೂ ಎರಡು ಮರಿಗಳು ಮತ್ತು ಕಲ್ಕೆರೆ ವಲಯದ ರಾಂಪುರ ಸಾಕಾನೆ ಶಿಬಿರದಲ್ಲಿನ 22 ಆನೆಗಳಿಗೆ ಪ್ರತಿನಿತ್ಯವೂ ಪೌಷ್ಟಿಕ ಆಹಾರವಾಗಿ ಭತ್ತದ ಹುಲ್ಲು, ಮೊಳಕೆ ಕಾಳು, ಕಾಯಿ, ಬೆಲ್ಲ, ಹುರುಳಿ ಕಾಳನ್ನು ನಿಗದಿತ ಪ್ರಮಾಣದಲ್ಲಿ ನೀಡಲಾಗುತ್ತಿತ್ತು. ಇವುಗಳಿಗೆ ಆಹಾರ ಸರಬರಾಜು ಮಾಡುವ ಗುತ್ತಿಗೆದಾರ ಕಳೆದ ಬಾರಿ ಸರಿಯಾದ ಪ್ರಮಾಣದಲ್ಲಿ ಆಹಾರ ವಿತರಿಸಿಲ್ಲ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಟೆಂಡರ್ ನೀಡದೆ ಹೊಸದಾಗಿ ಟೆಂಡರ್ ಕರೆಯಲಾಗಿದೆ. ಆದರೆ ಟೆಂಡರ್ ಇನ್ನೂ ಅಂತಿಮವಾಗದೆ ಇರುವುದರಿಂದ ಕಳೆದ ಹದಿನೈದು ದಿನಗಳಿಂದ ಸಾಕಾನೆಗಳಿಗೆ ಪೌಷ್ಟಿಕ ಆಹಾರ ವಿತರಣೆಯಾಗುತ್ತಿಲ್ಲ.
ಬಂಡೀಪುರ ಶಿಬಿರದ 3 ಆನೆಗಳಿಗೆ ಪ್ರತಿ ತಿಂಗಳು ಒಟ್ಟು 600 ಕೆ.ಜಿ.ಭತ್ತದ ಹುಲ್ಲು, 950 ಕೆ.ಜಿ. ಭತ್ತ, 25 ಕೆ.ಜಿ ಬೆಲ್ಲ, 25 ಕೆ.ಜಿ.ಉಪ್ಪು, ಎರಡು ಮರಿಯಾನೆಗಳಿಗೆ 25 ಕೆ.ಜಿ.ಅಕ್ಕಿಯನ್ನು ಒಳಗೊಂಡ ಪೌಷ್ಟಿಕ ಆಹಾರವನ್ನು ನೀಡಬೇಕಾಗಿದೆ. ಆದರೆ ಪೌಷ್ಟಿಕ ಆಹಾರವಿಲ್ಲದ ಕಾರಣ ಆನೆಗಳು ಕಾಡಿನಲ್ಲಿ ಇರುವ ಒಣ ಮೇವು, ಪೊದೆ ಹಾಗೂ ಗಿಡ-ಗಂಟಿಗಳನ್ನೇ ತಿಂದು ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಅಲ್ಲದೆ ಶಿಬಿರದಲ್ಲಿದ್ದ 5 ಸಾಕಾನೆಗಳನ್ನು ಅರಣ್ಯ ಪ್ರದೇಶಕ್ಕೆ ಮೇಯಲು ಬಿಡಲಾಗಿದೆ.
– ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.