ಟೋಲ್ ಸಂಗ್ರಹ ವಿವರಣೆ ಸಲ್ಲಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿ
Team Udayavani, Mar 16, 2023, 6:30 AM IST
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ವಾಹನ ಸವಾರರಿಂದ ಟೋಲ್ ಸಂಗ್ರಹ ಸಂಬಂಧ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಬಗ್ಗೆ ಮೂರು ವಾರಗಳಲ್ಲಿ ವಿವರಣೆ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶಿಸಿದೆ. ಅಲ್ಲದೇ ವಕೀಲರೊಬ್ಬರನ್ನು ಕೋರ್ಟ್ ಕಮಿಷನರ್ ಆಗಿ ನೇಮಕ ಮಾಡಿದೆ.
ಬೆಂಗಳೂರು-ಕನಕಪುರ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಎಸ್.ಪಿ ಸಂದೀಪ್ ರಾಜು ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಈ ವೇಳೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಸಂಬಂಧ ಮಂಗಳವಾರ (ಮಾರ್ಚ್ 14) ನಡೆದಿದ್ದ ಧರಣಿ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಬೇಕಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಶುಲ್ಕ ವಿಧಿಸಲು ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರ ಮತ್ತು ಸಂಗ್ರಹ ನಿರ್ಧಾರ) ನಿಯಮ- 2008ರ ನಿಯಮ 3ರ ಅಡಿ ಅವಕಾಶವಿದೆ. ಆದರೆ, ಇದಕ್ಕೂ ಮೊದಲು ಅಧಿಸೂಚನೆ ಪ್ರಕಟ ಸೇರಿ ಹಲವು ಪೂರ್ವಾಗತ್ಯಗಳನ್ನು ಪೂರೈಸಬೇಕು. ಆದರೆ, ಸವಾರರಿಂದ ಶುಲ್ಕ ಸಂಗ್ರಹ ಮಾಡಲಾಗುತ್ತಿದ್ದು, ಈ ವಿಷಯವನ್ನು ಪರಿಗಣಿಸಬೇಕಿದೆ. ಆದ್ದರಿಂದ ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಂಬಂಧಪಟ್ಟ ಅಧಿಕಾರಿಗಳು ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ನಿರ್ದೇಶನ ನೀಡಿತು.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ರಾಮನಗರ ಸಮೀಪ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ಆಕ್ಷೇಪಿಸಿ ಧರಣಿ ನಡೆಸಿರುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಏಜೆನ್ಸಿ ಟೋಲ್ ಸಂಗ್ರಹಿಸಲು ಆರಂಭಿಸಿದ್ದು, ಕಾರ್ ಮತ್ತು ವ್ಯಾನ್‌ಗಳಿಗೆ 135-205 ರೂ.ಗಳನ್ನು, ಲಘು ವಾಣಿಜ್ಯ ವಾಹನಗಳಾದ ಮಿನಿ ಬಸ್‌ಗೆ 220-330 ರೂಪಾಯಿ ವಿಧಿಸಲಾಗುತ್ತಿದೆ. ಟ್ರಕ್, ಬಸ್‌ಗಳಿಗೆ 460-690 ರೂಪಾಯಿ, ಭಾರಿ ವಾಣಿಜ್ಯ ವಾಹನಗಳಿಗೆ 500-750 ರೂ. ಬೃಹತ್ ನಿರ್ಮಾಣ ಸಂಬಂಧಿತ ವಾಹನಗಳಿಗೆ 720-1,080 ರೂ. ಅತಿ ಬೃಹತ್ ವಾಹನಗಳಿಗೆ 880-1,315 ರೂಪಾಯಿ ವಿಧಿಸಲಾಗುತ್ತಿದೆ ಎಂದು ಮಾಧ್ಯಮಗಳ ವರದಿಯಲ್ಲಿ ಉಲ್ಲೇಖೀಸಲಾಗಿದೆ. ರಸ್ತೆ ನಿರ್ಮಾಣ ಕೆಲಸ ಮುಗಿಯದಿದ್ದರೂ ಟೋಲ್ ಸಂಗ್ರಹಣೆಯು ಅಸಮರ್ಥನೀಯವಾಗಿದ್ದು, ದೊಡ್ಡ ತಾಂತ್ರಿಕ ಸಮಸ್ಯೆಗಳಿಂದಾಗಿ ವಾಹನಗಳಿಗೆ ಡ್ಯಾಮೇಜ್ ಆಗುತ್ತಿದೆ ಎಂದು ಮಾಧ್ಯಮ ವರದಿಯಲ್ಲಿ ವಿವರಿಸಲಾಗಿದೆ ಎಂಬ ಅಂಶವನ್ನು ನ್ಯಾಯಪೀಠವು ತನ್ನ ಆದೇಶದಲ್ಲಿ ದಾಖಲಿಸಿತು.
ಕೋರ್ಟ್ ಕಮಿಷನರ್ ನೇಮಕ
ಬೆಂಗಳೂರು-ಕನಕಪುರ ರಸ್ತೆ ಅಗಲೀಕರಣ ಕೆಲಸದ ನಿರ್ಮಾಣ, ನಿಗಾ ಮತ್ತು ಮೇಲ್ವಿಚಾರಣೆ ನಡೆಸಲು ವಕೀಲ ಶಿವಪ್ರಸಾದ್ ಶಾಂತನಗೌಡರ್ ಅವರನ್ನು “ಕೋರ್ಟ್ ಕಮಿಷನರ್’ ಆಗಿ ಹೈಕೋರ್ಟ್ ನೇಮಕ ಮಾಡಿತು. ನಿರ್ಮಾಣ ಒಪ್ಪಂದಕ್ಕೆ ಸಂಬಂಧಿಸಿದ ಕೆಲಸದ ಸೂಕ್ತ ನಿಗಾ ಮತ್ತು ಮೇಲ್ವಿಚಾರಣೆಯನ್ನು ಸ್ವತಂತ್ರ ಇಂಜಿನಿಯರ್ ನಡೆಸಬೇಕು. ನ್ಯಾಯಾಲಯ ನೇಮಿಸಿದ ಆಯುಕ್ತರು ಅಗತ್ಯವಾದ ಸಹಾಯ ಪಡೆದುಕೊಳ್ಳಬಹುದು. ನ್ಯಾಯಾಲಯ ನೇಮಿಸಿದ ಆಯುಕ್ತರಿಗೆ ನೆರವಾಗಲು ಸಹಾಯಕ ಇಂಜಿನಿಯರ್ ಅವರನ್ನು ತಾಂತ್ರಿಕ ವಿಚಾರದಲ್ಲಿ ನೆರವಾಗಲು ನೇಮಿಸುವಂತೆ ಲೋಕೋಪಯೋಗಿ ಇಲಾಖೆಯ ರಾಮನಗರ ವಿಭಾಗದ ಕಾರ್ಯಾಕಾರಿ ಎಂಜಿನಿಯರ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.