ಕೃಷಿ ಕ್ಷೇತ್ರದ ಪ್ರಗತಿಗೆ ಪೂರಕ ತಂತ್ರಜ್ಞಾನ ಅಭಿವೃದ್ಧಿ ಅಗತ್ಯ
"ಬೆಂಗಳೂರು ಟೆಕ್ ಸಮಿಟ್-2021'ಕ್ಕೆ ಚಾಲನೆ ನೀಡಿ ಉಪ ರಾಷ್ಟ್ರಪತಿ ಆಶಯ
Team Udayavani, Nov 18, 2021, 5:35 AM IST
ಬೆಂಗಳೂರು: ದೇಶದಮೂಲ ಸಂಸ್ಕೃತಿ ಕೃಷಿ ಮತ್ತು ಅವಲಂಬಿತ ರೈತರು ಎದುರಿಸುತ್ತಿರುವ ಹಲವು ರೀತಿಯ ಸವಾಲು ಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಆವಿಷ್ಕಾರಗಳು ಹೆಚ್ಚು ಕೇಂದ್ರೀಕೃತ ವಾಗಬೇಕು. ಇದರಲ್ಲಿ ತಂತ್ರಜ್ಞಾನ ದಿಗ್ಗಜರ ಜವಾಬ್ದಾರಿ ಹೆಚ್ಚಾಗಿದೆ ಎಂಬ ಆಗ್ರಹ ಏಷ್ಯಾದ ಅತಿದೊಡ್ಡ ಮೇಳ “ಬೆಂಗಳೂರು ಟೆಕ್ ಸಮಿಟ್’ನಲ್ಲಿ ಕೇಳಿಬಂತು.
ಮೂರು ದಿನಗಳ “ಬೆಂಗಳೂರು ಟೆಕ್ ಸಮಿಟ್-2021’ಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು, “ತಂತ್ರಜ್ಞಾನಗಳು ಸಾಮಾನ್ಯರ ಬದುಕಿನಲ್ಲಿ ಬದಲಾವಣೆಗೆ ಕಾರಣ ವಾಗಬೇಕು. ಅದರಲ್ಲೂ ನಮ್ಮದು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಆ ಕ್ಷೇತ್ರದ ಸುಧಾರಣೆಗೆ ಪೂರಕವಾದ ತಂತ್ರಜ್ಞಾನಗಳು ಅಭಿವೃದ್ಧಿಗೊಳ್ಳಬೇಕು. ಹಾಗೂ ಅವುಗಳು ರೈತರಿಗೆ ತಲುಪುವಂತಾಗಬೇಕು’ ಎಂದರು.
“ಹವಾಮಾನ ಬದಲಾವಣೆ, ಕೊರೊನಾ ಬಳಿಕ ಹಲವು ಸವಾಲು ಗಳು ಸೃಷ್ಟಿಯಾಗಿವೆ. ಅನುಭವದ ನೆರವಿ ನಿಂದ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಸರಕಾರದ ನೀತಿಗಳು ಎಷ್ಟೇ ಚೆನ್ನಾಗಿದ್ದರೂ ಅಂತಿಮವಾಗಿ ತಂತ್ರಜ್ಞಾನದ ಲಾಭಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕಾದುದು ಮುಖ್ಯ’ ಎಂದು ಹೇಳಿದರು.
ಹೊಣೆಗಾರಿಕೆ ಅಗತ್ಯ: ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, “ಟೆಕ್ ಸಮಿಟ್ ವರ್ಷದಿಂದ ವರ್ಷಕ್ಕೆ ದೊಡ್ಡ ಮಟ್ಟದಲ್ಲಿ ನಡೆಯುವುದರ ಜತೆಗೆ ಯಶಸ್ವಿಯಾಗಿಯೂ ಆಗು ತ್ತಿದೆ. ಇಲ್ಲಿ ಅನಾವರಣಗೊಳ್ಳುವ ತಂತ್ರ ಜ್ಞಾನಗಳು ಮತ್ತು ಆವಿಷ್ಕಾರಗಳು ರೈತರು, ಸಾಮಾನ್ಯ ಜನರ ಬಳಿಗೆ ಕೊಂಡೊಯ್ಯುವ ಮೂಲಕ ಇದ ರಲ್ಲಿ ಮತ್ತಷ್ಟು ಹೊಣೆಗಾರಿಕೆ ತರುವ ಅಗತ್ಯವಿದೆ ಎಂದರು.
ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ಕೋವಿಡ್ ಬಳಿಕ ಅಭಿವೃದ್ಧಿಯ ಮಾನದಂಡಗಳು ಬದಲಾಗಿದ್ದು, ರಾಜ್ಯವು ಈ ಪರಿಸ್ಥಿತಿಯನ್ನು ತಂತ್ರ ಜ್ಞಾನದ ಬಲದಿಂದ ಸಕಾರಾತ್ಮಕವಾಗಿ ಬಳಸಿಕೊಳ್ಳುತ್ತಿದೆ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ ಶೀಘ್ರ ಬರಲಿದೆ “ಆರ್ ಆಂಡ್ ಡಿ ನೀತಿ’: ಸಿಎಂ
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಐಟಿ-ಬಿಟಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಗಳ ಮುಖ್ಯಸ್ಥರಾದ ಕ್ರಮವಾಗಿ ಕ್ರಿಸ್ ಗೋಪಾಲಕೃಷ್ಣನ್, ಕಿರಣ್ ಮಜುಂ ದಾರ್ ಷಾ ಮತ್ತು ಪ್ರಶಾಂತ್ ಪ್ರಕಾಶ್ ಮತ್ತಿತರರಿದ್ದರು. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಕಿಂಡ್ರೆಲ್ ಸಿಇಒ ಮಾರ್ಟಿನ್ ಶ್ರೋಟರ್ ವರ್ಚುವಲ್ ಮೂಲಕ ಮಾತನಾಡಿದರು.
ಬೆಂಗಳೂರಿನಲ್ಲಿ ಆಸ್ಟ್ರೇಲಿಯ ಕಾನ್ಸೊಲೇಟ್ ಕಚೇರಿ
ಬೆಂಗಳೂರಿನಲ್ಲಿ ಶೀಘ್ರ ಆಸ್ಟ್ರೇಲಿಯ ಕಾನ್ಸೋಲೇಟ್ ಜನರಲ್ ಕಚೇರಿ ತೆರೆಯಲಾಗುವುದು ಎಂದು ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮಾರಿಸಸ್ ತಿಳಿಸಿದರು. ಭಾರತದೊಂದಿಗೆ, ಅದರಲ್ಲೂ ವಿಶೇಷವಾಗಿ ಕರ್ನಾಟಕದೊಂದಿಗಿನ ಆಸ್ಟ್ರೇಲಿಯ ಬಾಂಧವ್ಯ ಟೆಕ್ ಸಮಿಟ್‌ನಿಂದ ಗಟ್ಟಿಗೊಳ್ಳುತ್ತಿದೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಆಸ್ಟ್ರೇಲಿಯ ಕಾನ್ಸೊಲೇಟ್ ಜನರಲ್ ಕಚೇರಿಯನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಪುನೀತ್‌ಗೆ ನಾಯ್ಡು ಕಂಬನಿ
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಕಂಬನಿ ಮಿಡಿದರು. ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಸಮಾಜಮುಖೀ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ಅಗಲಿಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದರು.
ಟೆಕ್ ಸಮಿಟ್‌ಗೆ ಮೊದಲ ದಿನವೇ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಬುಧವಾರ ಸುಮಾರು 25 ಸಾವಿರ ಜನ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡಿದ್ದಾರೆ .
-ಡಾ|ಅಶ್ವತ್ಥನಾರಾಯಣ
ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.