Bangaluru; ಖಾಸಗಿ ಕಂಪನಿ ನಿರ್ದೇಶಕ ಆತ್ಮಹ*ತ್ಯೆ: ಪತ್ನಿ, ಆಕೆಯ ತಾಯಿಗೆ ಶೀಘ್ರ ನೋಟಿಸ್
ಪೊಲೀಸರಿಂದ ವಿಳಾಸ ಸಂಗ್ರಹ... ವರದಕ್ಷಿಣೆ ಕಾನೂನುಗಳ ದುರುಪಯೋಗ?
Team Udayavani, Dec 11, 2024, 8:16 AM IST
ಬೆಂಗಳೂರು: ಖಾಸಗಿ ಕಂಪನಿಯ ನಿರ್ದೇಶಕ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಆತ್ಮಹ*ತ್ಯೆ ಪ್ರಕರಣ
ಸಂಬಂಧ ಮೃತನ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಕಪ್ಪನಿಗೆ ಮಾರತ್ತಹಳ್ಳಿ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆಯಿದೆ.
ಪ್ರಕರಣ ಕುರಿತು ಮೃತನ ಸಹೋದರ ಬಿಕಾಸ್ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಮೃತನ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಮತ್ತೂಂದೆಡೆ ಮರಣೋತ್ತರ ಪರೀಕ್ಷೆ ನಡೆಸಿ ಮಂಗಳವಾರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಈ ಮಧ್ಯೆ ಆರೋಪಿಗಳ ವಿಳಾಸ ಸಂಗ್ರಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಒಂದೆರಡು ದಿನಗಳಲ್ಲಿ ನೋಟಿಸ್ ಜಾರಿಗೊಳಿಸಲಾಗುತ್ತದೆ. ಬಳಿಕ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ಉತ್ತರ ಪ್ರದೇಶದಲ್ಲಿ ಅತುಲ್ ಸುಭಾಷ್ ವಿರುದ್ಧ ದಾಖಲಾಗಿರುವ ದೂರುಗಳು ಹಾಗೂ ವಿಚ್ಛೇದನ ಸಂಬಂಧ ಕೋರ್ಟ್‌ಗಳಲ್ಲಿರುವ ವಿಚಾರಣಾ ಹಂತದಮಾಹಿತಿ ಪಡೆದುಕೊಂಡು ಕಾನೂನು ತಜ್ಞರ ಸಲಹೆ ಪಡೆದು ಮುಂದಿನ
ಕ್ರಮಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದ ಖಾಸಗಿ ಕಂಪನಿಯ ನಿರ್ದೇಶಕ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್, ಸುಮಾರು 26 ಪುಟಗಳ ಡೆತ್‌ನೋಟ್ ಬರೆದು, ಅದನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್, ಕಚೇರಿ, ಸರ್ಕಾರೇತರ ಎಸ್‌ಐಎಫ್ಎಫ್ ಸಂಸ್ಥೆ, ಕುಟುಂಬ ಸದಸ್ಯರಿಗೆ ಇ-ಮೇಲ್ ಕಳುಹಿಸಿದ್ದ. ಬಳಿಕ ಮಾರತ್ತಹಳ್ಳಿಯ ಮಂಜುನಾಥ್ ಲೇಔಟ್‌ನ ಅಪಾರ್ಟ್ ಮೆಂಟ್‌ವೊಂದರಲ್ಲಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾನೂನುಗಳ ದುರುಪಯೋಗ?
ವಕೀಲೆ ಅಭಾ ಸಿಂಗ್, ಪ್ರತಿಕ್ರಿಯಿಸಿ ‘ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸಾಚಾರ ಆರೋಪ ನಿಜವಲ್ಲ ಮತ್ತು ಅತುಲ್ ಸುಭಾಷ್ ತನ್ನ ಪತ್ನಿಗೆ 2 ಲಕ್ಷ ರೂಪಾಯಿ ನೀಡುತ್ತಿದ್ದ. ಆಕೆ ಮಗನನ್ನು ನೋಡಲು ಬಿಡಲಿಲ್ಲ, ಮಗನನ್ನು ಬಳಸಿ ಆತನನ್ನು ಬ್ಲ್ಯಾಕ್‌ಮೇಲ್ ಮಾಡುವ ಸಾಧನ ಮಾಡಿಕೊಂಡಿದ್ದಳು. ಆಕೆ ಮತ್ತು ಆಕೆಯ ಸಂಬಂಧಿಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಬೇಕು. ಅವನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು.ಇದು ಕಾನೂನಿನ ಘೋರ ದುರ್ಬಳಕೆ, ವರದಕ್ಷಿಣೆ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳಬಾರದು” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.