“ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಪರಿವರ್ತನೆ’: ಆರ್. ಅಶೋಕ್
Team Udayavani, Feb 28, 2022, 6:25 AM IST
ಬೆಂಗಳೂರು: ರಾಜ್ಯದ ಸಾವಿರಾರು ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಪರಿವರ್ತನೆ ಆಗಲಿದ್ದು, ಇದರ ಬೆನ್ನಲ್ಲೇ ಸರಕಾರದ ಅನೇಕ ಸೌಲಭ್ಯಗಳು ಕೂಡ ದೊರೆಯಲಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ರವಿವಾರ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘವು ವಸಂತನಗರದಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ರ 283ನೇ ಜಯಂತಿ, ಬಂಜಾರ ದೀವಿಗೆ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಬಂಜಾರ ಕಲಾಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಸಾವಿರಾರು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ, ಅಗತ್ಯ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಕಾರ್ಯಾದೇಶ ಮಾಡಲಾಗಿದೆ. ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲಿದ್ದು, ಇದರೊಂದಿಗೆ ಶೈಕ್ಷಣಿಕ ಸೇರಿದಂತೆ ಅನೇಕ ಸವಲತ್ತುಗಳು ಈ ಸಮುದಾಯಕ್ಕೆ ಸಿಗಲಿವೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಲಂಬಾಣಿ ತಾಂಡಾಗಳಲ್ಲಿ ವಾಸ್ತವ್ಯ ಮಾಡಿ, ಅವರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.