ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ಅಧಿಕಾರಿಗಳಿಗೆ ನಿಂದಿಸಿ, ವಾಹನ ಜಖಂ
Team Udayavani, Jul 16, 2022, 1:06 PM IST
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವ್ಯಾಚ್ಚ ಶಬ್ದಗಳಿಂದ ಬೈದಿರುವ ಘಟನೆ ಶನಿವಾರ ಬೆಳಿಗ್ಗೆ ತುಂಬೆ ಎಂಬಲ್ಲಿ ನಡೆದಿದೆ.
ಮಂಗಳೂರು ಜಿ.ಪಂ.ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಎಂಬವರು ಜಿ.ಪಂ.ಇಲಾಖೆಯ ಮೂವರು ಅಧಿಕಾರಗಳನ್ನು ಮಂಗಳೂರಿನಿಂದ ಪುತ್ತೂರಿಗೆ ಮುಖ್ಯವಾದ ಸಭೆಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಲ್ಲಿ ಹೋಗುತ್ತಿದ್ದ ವಾಹನ ಸವಾರನೋರ್ವ ಬ್ರೇಕ್ ಹಾಕಿದ್ದಾರೆ ಎಂಬ ಕಾರಣಕ್ಕೆ ಜಿ.ಪಂ.ಇಲಾಖೆಯ ವಾಹನ ಚಾಲಕ ಜಗದೀಶ್ ಅವರು ಕೂಡ ಬ್ರೇಕ್ ಹಾಕಿದ್ದಾರೆ.
ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಯುವಕ, ಕಾರಿನ ಹಿಂಬದಿಯಲ್ಲಿದ್ದು ಆತ ಕೂಡ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಆತ ಕಾರಿಗೆ ದ್ವಿಚಕ್ರವಾಹನವನ್ನು ಅಡ್ಡ ಇಟ್ಟು, ತಡೆಒಡ್ಡಿ ಬಳಿಕ ಕಾರಿನ ಮಿರರ್ ಅನ್ನು ಪುಡಿಮಾಡಿ, ಚಾಲಕ ಸಹಿತ ಕಾರಿನಲ್ಲಿದ್ದ ಅಧಿಕಾರಿಗಳಿಗೆ ಅವ್ಯಾಚ್ಚ ಶಬ್ದಗಳಿಂದ ಬೈದಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಪೊಲೀಸರೆಡೆಗೆ ಮಚ್ಚು ಬೀಸಿ ಕೊಲೆ ಆರೋಪಿಯ ಎಸ್ಕೇಪ್ ಯತ್ನ: ಪೊಲೀಸರಿಂದ ಗುಂಡಿನ ದಾಳಿ
ಘಟನೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಜಿ.ಪಂ.ಇಲಾಖೆಯ ವಾಹನ ಚಾಲಕ ಜಗದೀಶ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.