BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
ಯತ್ನಾಳ್ ವಿರುದ್ಧ ಕ್ರಮ: ಜಿಲ್ಲಾಧ್ಯಕ್ಷರ ಆಗ್ರಹ
Team Udayavani, Nov 27, 2024, 6:50 AM IST
ಬೆಂಗಳೂರು: “ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಕೆಲವರು ಸ್ವಪ್ರತಿಷ್ಠೆ ಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ತಮ್ಮ ಹೋರಾಟ ಬಿಟ್ಟು ನಮ್ಮ ಜತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು. ಆದರೂ ಅವರು ಕೇಳಿಲ್ಲ. ಈಗಲಾದರೂ ಅವರು ಜಾಗೃತ ರಾಗಿ ಪಕ್ಷ ಬಲಪಡಿಸಲು ಸಹಕಾರ ಕೊಡ ಬೇಕೆಂದು ನಾನು ವಿನಂತಿ ಮಾಡುತ್ತೇನೆ. ಉಳಿದದ್ದು ಅವರಿಗೆ ಹಾಗೂ ಕೇಂದ್ರದ ನಾಯಕರಿಗೆ ಬಿಟ್ಟದ್ದು ಎಂದು ಪರೋಕ್ಷ ಎಚ್ಚರಿಕೆ ನೀಡಿದರು.
ಇದೆಲ್ಲವೂ ವರಿಷ್ಠರ ಗಮನದಲ್ಲಿ ಇದೆ. ಏನು ಮಾಡುತ್ತಾರೆಂಬುದನ್ನು ನೋಡೋಣ. ಉಪ ಚುನಾವಣೆಗಳಲ್ಲಿ ಹಿನ್ನಡೆಗೆ ಏನು ಕಾರಣ ಎಂದು ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ವಿವಾದ ಬಗೆಹರಿಸಿ
ಇನ್ನೊಂದೆಡೆ, ರಾಜ್ಯಾಧ್ಯಕ್ಷ ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪಕ್ಷದ ಸಂಘಟನ ಪರ್ವ ಕಾರ್ಯಾಗಾರದಲ್ಲಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೂಗು ಕೇಳಿಬಂದಿದೆ. ಅವರ ವಿರುದ್ಧ ಒಂದೋ ಶಿಸ್ತುಕ್ರಮ ತೆಗೆದುಕೊಳ್ಳಿ ಅಥವಾ ಆದಷ್ಟು ಬೇಗ ವಿವಾದ ಸರಿಪಡಿಸಿಕೊಳ್ಳಿ. ಇಲ್ಲವಾದರೆ ನಾವೇ ವರಿಷ್ಠರನ್ನು ಭೇಟಿ ಮಾಡಿ ಈ ಬಗ್ಗೆ ದೂರು ನೀಡಬೇಕಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರೆಲ್ಲರೂ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.