ಮೀಸಲಿಗಾಗಿ ಪಂಚಮಸಾಲಿ ಹೋರಾಟ : ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?
ಮೀಸಲಿಗಾಗಿ ಪಂಚಮಸಾಲಿ ಹೋರಾಟ | ತೀವ್ರತೆ ಕಳೆದುಕೊಂಡ ಪ್ರತಿಭಟನೆ
Team Udayavani, Mar 8, 2021, 11:43 AM IST
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಸಮಾ ಧಾನಪಡಿಸಿ ಧರಣಿ ಅಂತ್ಯಗೊಳಿಸುವಂತೆ ಮಾಡಲು ರಾಜ್ಯ ಸರ್ಕಾರ ತೆರೆ ಮರೆ ಯತ್ನ ನಡೆಸುತ್ತಿದೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಧರಣಿ ಅಂತ್ಯಗೊಳಿಸಲು ಪಂಚಮಸಾಲಿ ಸಮುದಾಯದ ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ಬಿಜೆಪಿಯ ಹಾಲಿ ಶಾಸಕರ ಮೂಲಕ ಮನವೊಲಿಕೆ ಪ್ರಯತ್ನ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅರಮನೆ ಮೈದಾನದ ಸಮಾವೇಶದ ನಂತರ ಹೋರಾಟವನ್ನು ಸ್ಥಗಿತಗೊಳಿಸುವಂತೆರಾಜ್ಯ ಸರ್ಕಾರದ ಪರವಾಗಿ ಸಚಿವರಾದಮುರುಗೇಶ್ ನಿರಾಣಿ, ಸಿ.ಸಿ. ಪಾಟೀಲ್ ಹಾಗೂ ಬಸವರಾಜ ಬೊಮ್ಮಾಯಿ ಭೇಟಿಮಾಡಿ ಮನವಿ ಮಾಡಿದ್ದರು. ಆಗ ಮೀಸಲಾತಿ ನೀಡುವ ಕುರಿತು ಸ್ವತಃ ಮುಖ್ಯಮಂತ್ರಿ ಬಂದು ನಿರ್ದಿಷ್ಟ ಸಮಯ ನೀಡಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.
ಆದರೆ, ರಾಜ್ಯ ಸರ್ಕಾರ ಕೇವಲ ಪಂಚಮಸಾಲಿ ಮೀಸಲಾತಿ ಯಷ್ಟೇ ಅಲ್ಲ, ರಾಜ್ಯದಲ್ಲಿ ಬೇರೆ ಸಮುದಾಯದವರೂ ಮೀಸಲಿಗೆ ಬೇಡಿಕೆ ಇಟ್ಟಿರುವುದನ್ನು ಸೇರಿಸಿ ಸಮಗ್ರಅಧ್ಯಯನ ನಡೆಸಿ ವರದಿ ನೀಡಲು ಮೂರು ಜನರ ಸಮಿತಿ ರಚನೆ ಮಾಡಿರುವುದರಿಂದ ಪಂಚಮಸಾಲಿ ಸಮುದಾಯದ ಅನಿರ್ದಿಷ್ಟಾವಧಿ ಹೋರಾಟವನ್ನು ನಿರ್ಲಕ್ಷ್ಯ ಮಾಡಿದಂತಾಗಿದೆ.
ಈಗಿರುವ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ತಕ್ಷಣಕ್ಕೆ ಪಂಚಮಸಾಲಿ ಸಮುದಾಯದಮೀಸಲಾತಿ ವಿಷಯದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗದಕಾರಣ ಸರ್ಕಾರ ಸಮುದಾಯದ ಹಿರಿಯ ಮುಖಂಡರ ಮೂಲಕ ಧರಣಿ ಅಂತ್ಯಗೊಳಿಸುವಂತೆ ಸರ್ಕಾರ ಪ್ರಯತ್ನ ನಡೆಸುತ್ತಿದೆಎಂಬ ಮಾತುಗಳು ಕೇಳಿ ಬರುತ್ತಿವೆ.
ಸಚಿವರ ನಡೆಯ ಬಗ್ಗೆ ಬೇಸರ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಅದೇ ಸಮುದಾಯದ ಸಚಿವರು ಸಮುದಾಯದ ಪರವಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು, ಸರ್ಕಾರದ ಪರವಾಗಿ ಪ್ರತಿಭಟನೆ ಕೈಬಿಡುವಂತೆ ಪರೋಕ್ಷ ಒತ್ತಡ ಹೇರುತ್ತಿದ್ದಾರೆಂಬ ಆರೋಪ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿದೆ.
ವೇಗ ಕಳೆದುಕೊಂಡ ಹೋರಾಟ: ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯು ವವರೆಗೂ ಹೋರಾಟದವೇಗ ಜೋರಾಗಿಯೇ ಇತ್ತು. ಆದರೆ,ಸಮಾವೇಶ ಮುಗಿದ ನಂತರ ಹರಿಹರಪೀಠದ ವಚನಾನಂದ ಸ್ವಾಮೀಜಿಪ್ರತಿಭಟನಾ ಧರಣಿಯಿಂದ ದೂರ ಉಳಿದಿದ್ದು, ಹೋರಾಟ ತನ್ನ ತೀವ್ರತೆ ಕಳೆದುಕೊಳ್ಳುವಂತಾಗಿದೆ ಎಂಬ ಅಭಿ ಪ್ರಾಯ ಕೇಳಿ ಬರುತ್ತಿದೆ.
ಸದನದಲ್ಲಿ ಪ್ರಸ್ತಾಪಕ್ಕೆ ನಿರ್ಧಾರ: ರಾಜ್ಯ ಸರ್ಕಾರ ತಮ್ಮ ಹೋರಾಟಕ್ಕೆ ಸರಿಯಾಗಿ ಸ್ಪಂದಿಸದೇ ಹತ್ತಿಕ್ಕುವ ಯತ್ನ ಮಾಡುತ್ತಿದೆ ಎನ್ನುವ ಕಾರಣಕ್ಕೆ ಮಾ.8ರ ನಂತರ ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲು ಹೋರಾಟದ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ.
ಈ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೋಮವಾರ ಬಜೆಟ್ ಮಂಡನೆಯಾದ ನಂತರ ಮಂಗಳವಾರ ಈ ಕುರಿತು ಸದನದಲ್ಲಿ ಪ್ರಸ್ತಾಪಕ್ಕೆ ಆಗ್ರಹಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಉತ್ತರ ನೋಡಿಕೊಂಡು ಮತ್ತೆ ಮುಂದಿನ ಹೋರಾಟದ ಕುರಿತು ಚರ್ಚಿಸಿ ನಿರ್ಧರಿಸಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.
–ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.