ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಕೋವಿಡ್ ಸೋಂಕಿಗೆ ಬಲಿ
Team Udayavani, Sep 24, 2020, 4:10 PM IST
ಬೆಂಗಳೂರು: ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಕೋವಿಡ್-19 ಪಾಸಿಟಿವ್ ಹಿನ್ನೆಲೆಯಲ್ಲಿ ನಾರಾಯಣ ರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಬುಧವಾರದಿಂದ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು.
65 ವರ್ಷದ ನಾರಾಯಣ ರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಇಂದು ಸಂಜೆ 3.55ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿದ್ದ ನಾರಾಯಣ ರಾವ್ ಅವರು ಮಲ್ಲಿಕಾರ್ಜುನ ಖೂಬಾ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.