ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಬಸವಣ್ಣನ ಭಾವಚಿತ್ರ ಕಡ್ಡಾಯ
Team Udayavani, Apr 27, 2017, 11:08 AM IST
ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣನ ಭಾವಚಿತ್ರ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಬಸವ ಜಯಂತಿ ಪ್ರಯುಕ್ತ ಸಿಎಂ ಈ ಆದೇಶ ಹೊರಡಿಸಿದ್ದಾರೆ.
ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆ ಗೆಲುವಿಗೆ ಮತದಾರರ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ ದಲ್ಲಿ ಮಾತನಾಡುತ್ತ ಸಿಎಂ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾಗೆ ದೂರವಾಣಿ ಮೂಲಕ ಆದೇಶ ನೀಡಿರುವ ಸಿದ್ದರಾಮಯ್ಯ, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಬಸವೇಶ್ವರರ ಭಾವಚಿತ್ರ ಅಳವಡಿಸಲು ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ.
ಮಹಾರಾಷ್ಟ್ರ ಕೂಡ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕುವಂತೆ 2013ರಲ್ಲಿ ಮಾಡಿರುವ ಆದೇಶದ ಪ್ರತಿ ಕೆಲದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿತ್ತು. ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಮನವಿ ಮಾಡಿದ್ದರು.
ಯಾರ್ಯಾರ ಭಾವಚಿತ್ರಗಳಿವೆ?
ರಾಷ್ಟ್ರಪಿತ ಮಹಾತ್ಮ ಗಾಂಧಿ, ರಾಷ್ಟ್ರಪತಿ, ಪ್ರಧಾನಿ, ಅಂಬೇಡ್ಕರ್ ಹಾಗೂ ಮುಖ್ಯಮಂತ್ರಿ ಭಾವಚಿತ್ರಗಳನ್ನು ಕಡ್ಡಾಯವಾಗಿ ಹಾಕಲಾಗಿದೆ. ಈಗ ಅವುಗಳ ಜೊತೆಗೆ ಬಸವೇಶ್ವರರ ಫೋಟೊ ಕೂಡ ಈಗ ಸೇರ್ಪಡೆಯಾದಂತಾ ಗಿದೆ.
ತಕ್ಷಣ ಆದೇಶ: ಸಿದ್ದು ಸೂಚನೆ
ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿಯೂ ಬಸವೇಶ್ವರರ ಭಾವಚಿತ್ರ ಹಾಕುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ಗುರುವಾರ ದುಬೈಗೆ ತೆರಳುವುದರಿಂದ ಇಂದೇ (ಬುಧವಾರ) ಈ ಆದೇಶ ಮಾಡಿದ್ದೇನೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಸವಣ್ಣ ಅವರ ಸಾಮಾಜಿಕ ನ್ಯಾಯದ ಹಿನ್ನೆಲೆ ಒಂದೇ ಆಗಿರುವುದರಿಂದ ಬಸವ ಜಯಂತಿ ವೇಳೆ ಕಡ್ಡಾಯ ವಾಗಿ ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿರುವಂತೆಯೇ ಬಸವಣ್ಣನವರ ಭಾವಚಿತ್ರ ಹಾಕಲು ಸುತ್ತೋಲೆ ಕಳುಹಿಸಲು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.