ಕರ್ಫ್ಯೂ ಸಂದರ್ಭದಲ್ಲಿ ಜನ ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ
Team Udayavani, Apr 27, 2021, 4:20 PM IST
ಬೆಂಗಳೂರು: ಇಂದು ರಾತ್ರಿಯಿಂದ ಆರಂಭವಾಗಲಿರುವ 14 ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಜನ ತಮ್ಮಷ್ಟಕ್ಕೆ ತಾವೇ ಸ್ವಯಂ ನಿಯಂತ್ರಣ ಮಾಡಿಕೊಂಡರೆ ಸೋಂಕು ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನರ ಸಂಪೂರ್ಣ ಸಹಕಾರವನ್ನು ಬಯಸುತ್ತೇನೆ ಎಂದು ಗೃಹಸಚಿವಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ ಎಂದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೋಂಕು ನಿಯಂತ್ರಿಸಲು ಬಿಗಿ ಕ್ರಮ ಕೈಗೊಳ್ಳುವ ನಿರ್ಧಾರ ಜಾರಿಗೊಳಿಸಲಾಗಿದೆ. ಈ ಬಿಗಿ ಕ್ರಮಕ್ಕೆ ಜನ ಸ್ವಯಂ ಪ್ರೇರಣೆಯಿಂದ ಸ್ಪಂದಿಸಬೇಕಾದ ಅವಶ್ಯಕತೆಯಿದೆ. ಸ್ವಯಂ ನಿಯಂತ್ರಣದಲ್ಲಿಯೇ ಸೋಂಕಿನ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಇದನ್ನೂ ಓದಿ:ಮರೆಯಾದ ‘ಕೋಟಿ’ : ನಿರ್ಮಾಪಕ ರಾಮು ಹುಟ್ಟೂರಲ್ಲೇ ಅಂತ್ಯ ಸಂಸ್ಕಾರ
ಈ 14 ದಿನಗಳ ಕಾಲ ಪ್ರತಿಯೊಬ್ಬರು ಜಾಗೃತರಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಮನಗಾಣಬೇಕು. ಸರ್ಕಾರ ಹೇರಿರುವ ನಿರ್ಬಂಧಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಬಹಳ ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮಹಾರಾಷ್ಟ್ರ ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ಹೀಗಾಗಿ ಆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ನಮ್ಮ ಮುಖ್ಯಮಂತ್ರಿಗಳು ಬಿಗಿ ಕ್ರಮದ ತೀರ್ಮಾನ ಮಾಡಿದ್ದಾರೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕರ್ಫ್ಯೂ ಸಂದರ್ಭದಲ್ಲಿ ವಿನಾಕಾರಣ ಹೊರಗೆ ಓಡಾಡುವ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಉದ್ದೇಶ ಪೂರ್ವಕವಾಗಿ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡುವ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.