ನಾಳೆ ಸಿಎಂ ಸಭೆಯ ನಂತರ ಲಾಕ್ ಡೌನ್, ಸೀಲ್ ಡೌನ್ ವಿಚಾರ ನಿರ್ಧಾರ: ಗೃಹ ಸಚಿವ ಬೊಮ್ಮಾಯಿ
Team Udayavani, Apr 10, 2020, 5:37 PM IST
ಸಂಗ್ರಹ ಚಿತ್ರ
ಹಾವೇರಿ: ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಕೆ ಅಥವಾ ಸೀಲ್ ಡೌನ್ ಹಾಕುವ ಬಗ್ಗೆ ಹಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದರು.
ಹಾವೇರಿಯಲ್ಲಿ ಮಾತನಾಡಿದ ಗೃಹ ಸಚಿವರು, ಲಾಕ್ ಡೌನ್ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಅಭಿಪ್ರಾಯಗಳು ಕೇಳಿ ಬಂದಿವೆ. ಶನಿವಾರ ಪ್ರಧಾನಿ ಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಂತರ ನಿರ್ಧಾರ ಮಾಡಲಾಗುವುದು ಎಂದರು.
ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಸಾವುಗಳು ಕಡಿಮೆ ಇವೆ. ನಮ್ಮ ಪ್ರಧಾನಿಯವರ ದೂರದೃಷ್ಟಿಯಿಂದ ಅದು ಸಾಧ್ಯವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.