ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ : ಸಚಿವ ಬಸವರಾಜ ಬೊಮ್ಮಾಯಿ
Team Udayavani, Apr 21, 2021, 8:43 PM IST
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆಯಲ್ಲಿ ಅವರು ಈ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೋಂಕು ಹರಡುವಿಕೆ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳುವ ಕ್ರಮಗಳನ್ನು ಪರಾಮರ್ಶಿಸಲು ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಎಡಿಜಿಪಿ ಮಟ್ಟದ ಅಧಿಕಾರಿಗಳನ್ನು ವಲಯವಾರು ನಿಯೋಜಿಸಲಾಗಿದೆ. ಸರ್ಕಾರ ಜಾರಿಗೊಳಿಸಿರುವ ಕಠಿಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ .
ಕೋವಿಡ್ ನಿಯಂತ್ರಣದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕು. ಎಸ್ ಡಿ ಆರ್ ಎಫ್ ಅಡಿ 10 ಕೋಟಿ ರೂಪಾಯಿ ನೆರವು ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.