Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ವಿಶ್ವಗುರು ಬುದ್ಧ ಪೊ›ಡಕ್ಷನ್ಸ್ ನಿಂದ ಸಂವಿಧಾನದ ಅಮೃತ ಮಹೋತ್ಸವ
Team Udayavani, Nov 27, 2024, 11:25 PM IST
ಬೆಂಗಳೂರು: ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿರುವ ನಮ್ಮ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿಶ್ವಗುರು ಬುದ್ಧ ಪೊ›ಡಕ್ಷನ್ಸ್ ಸಂಸ್ಥೆಯವರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸಂವಿಧಾನಕ್ಕೆ 75ನೇ ವರ್ಷ – ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಭಾರತದಲ್ಲಿ ಹುಟ್ಟಿರದಿದ್ದರೆ, ನಮ್ಮ ಸಂವಿಧಾನದಲ್ಲಿರುವ ಪರಿಕಲ್ಪನೆಯೇ ಇರುತ್ತಿರಲಿಲ್ಲ. ಅವರು ನೀಡಿರುವ ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸಿ ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವಗುರು ಬುದ್ಧ ಪೊ›ಡಕ್ಷನ್ಸ್ ಸಂಸ್ಥೆಯಿಂದ ನಿರ್ಮಿಸಿರುವ “ಮನೆ ಮನಕ್ಕೆ ಸಂವಿಧಾನ’ ಡಾಕ್ಯೂ ಡ್ರಾಮಾ ಸಾಕ್ಷ್ಯಚಿತ್ರವನ್ನು ಹೊರಟ್ಟಿ ಅವರು ಬಿಡುಗಡೆಗೊಳಿಸಿದರು. ಅಲ್ಲದೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಪ್ರಸ್ತುತಿಯ ಸಂವಿಧಾನ ಗೀತೆಯನ್ನು ಬಿಡುಗಡೆಗೊಳಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ, ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ ಎಸ್. ನಿರ್ಮಲಾ, ವಿಧಾನಸಭೆ ಸಚಿವಾಲಯದ ಉಪಕಾರ್ಯದರ್ಶಿ ಮೊಹಮ್ಮದ್ ಗೌಸ್ ಕೆ., ವಿಧಾನ ಪರಿಷತ್ತು ಸಚಿವಾಲಯದ ಅಧೀನ ಕಾರ್ಯದರ್ಶಿ ಮೀನಾ ನಾಯಕ್, ವಿಧಾನಸೌಧ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತ ಎಂ.ಎನ್. ಕರಿಬಸವನಗೌಡ ಇತರರಿದ್ದರು. ವಿಶ್ವಗುರು ಬುದ್ಧ ಪೊ›ಡಕ್ಷನ್ ನ ಪ್ರಧಾನ ನಿರ್ದೇಶಕ ಅರುಣ ಕುಮಾರ್ ನಾಗರಾಜ್ ದಿವಾಣಜಿ, ಯೋಜನೆಯ ವ್ಯವಸ್ಥಾಪಕ ಕನ್ನಾಯಕನಹಳ್ಳಿ ಕುಮಾರ್ ರಾಮೇಗೌಡ, ಸಂಚಾಲಕರಾದ ಎಚ್. ಸತೀಶ್ ಕುಮಾರ್, ಸಿದ್ದಲಿಂಗ ಮೂರ್ತಿ, ಬಿ.ಆರ್. ಬೀರೇಶ್, ಸಂಯೋಜಕರುಗಳಾದ ಸುರೇಶ್ ಪಿ.ಬಿ., ಶರಣಕುಮಾರ್ ದಿವಾಣಜಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.