ದಾಖಲೆಯ ಎಂಟನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ
ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು, ವಿಜಯೋತ್ಸವ
Team Udayavani, Jun 15, 2022, 12:45 PM IST
ಬೆಳಗಾವಿ: ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ ಎಂಟನೇ ಬಾರಿಗೆ ಜಯ ದಾಖಲಿಸಿದ್ದಾರೆ.
ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ ನಾಲ್ಕು ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.
ಹೊರಟ್ಟಿ ಅವರು ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. ಒಟ್ಟು 14,360 ಮತಗಳು ಚಲಾವಣೆ ಆಗಿದ್ದು, 1,223 ಮತಗಳು ತಿರಸ್ಕೃತ ಗೊಂಡಿವೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ 9,266 ಮತ ಪಡೆದರೆ, ಕಾಂಗ್ರೆಸ್ ನ ಬಸವರಾಜ ಗುರಿಕಾರ 4,597 ಮತಗಳನ್ನು ಪಡೆದಿದ್ದಾರೆ. ಉಳಿದಂತೆ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ 273, ಪಕ್ಷೇತರರಾದ ಕರಿಬಸಪ್ಪ-60, ಕೃಷ್ಣವಾಣಿ-58, ಪ್ರೊ.ಎಫ್.ವಿ ಕಲ್ಲನಗೌಡರ-27, ಆಮ್ಆದ್ಮಿ ಪಕ್ಷ ಬೆಂಬಲಿತ ಗೋವಿಂದಗೌಡ ವೆಂಕನಗೌಡ 79 ಮತಗಳನ್ನು ಪಡೆದಿದ್ದಾರೆ.
ಅಭಿಮಾನಿಗಳ ವಿಜಯೋತ್ಸವ
ಹೊರಟ್ಟಿ ಗೆಲುವಿನ ನಗೆ ಬೀರಿದ್ದು, ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಕೇಸರಿ ಬಣ್ಣ ಎರಚಿ ಸಂಭ್ರಮಿಸಿದರು.ನಗರದ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳದ ಜ್ಯೋತಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಕ್ಲಬ್ ರಸ್ತೆಯಲ್ಲಿ ಬಸವರಾಜ ಹೊರಟ್ಟಿ ಪುತ್ರ ವಸಂತ ಹೊರಟ್ಟಿ ನೇತೃತ್ವದಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.
ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯ ಶಿಕ್ಷಕರು ಬಂದಿದ್ದು, ಹೊರಟ್ಟಿ ಅವರು ಮುನ್ನಡೆ ಸಾಧಿಸುತ್ತಿದ್ದಂತೆ ಬೆಂಬಲಿಗರು ಅವರ ಪೋಟೊ ಹಿಡಿದುಕೊಂಡು ಕುಣಿದಾಡಿದರು. ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಎಲ್ಲೆಡೆಯೂ ಕೇಸರಿ ಬಣ್ಣವೇ ರಾರಾಜಿಸುತ್ತಿದೆ.
ಇದನ್ನೂ ಓದಿ: ಮುಕ್ತವಾಗಿ ದೂರು ದುಮ್ಮಾನ ಹೇಳಿಕೊಳ್ಳಿ: ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಸಂದರ್ಶನ
1980 ರಿಂದ ಹೊರಟ್ಟಿ ಅವರು ನಿರಂತರವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.