ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ: ಬಸವರಾಜ ಬೊಮ್ಮಾಯಿ ಘೋಷಣೆ
Team Udayavani, Nov 9, 2021, 11:59 AM IST
ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ . ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದರ ಜತೆ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು.
ಮುಖ್ಯಮಂತ್ರಿ ಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.
ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.