ಆಧಾರ ರಹಿತ ಆರೋಪ; ಮಾನನಷ್ಟ ಮೊಕದ್ದಮೆ ಹೂಡುತ್ತೇನೆ:ಸಚಿವ ಬಿ.ಸಿ.ನಾಗೇಶ್

ರುಪ್ಸಾ ಸಂಘಟನೆಯ ಆರೋಪದ ಕುರಿತು ದಾಖಲೆಗಳನ್ನು ಪಡೆದು ವಿಚಾರಣೆ ನಡೆಸಲು ನಿರ್ದೇಶನ

Team Udayavani, Aug 29, 2022, 8:01 PM IST

B-C-NAgesh

ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರುವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ. ಆದರೆ, ಈ ಕುರಿತು ನಮ್ಮ ಕಚೇರಿಗೆ ಯಾವುದೇ ದೂರುಗಳನ್ನು ನೀಡಿಲ್ಲ. ಆಯುಕ್ತರ ಕಚೇರಿಗೂ ಯಾವುದೇ ದೂರು ನೀಡಿಲ್ಲ. ಸಾಕ್ಷ್ಯಾಧಾರಗಳ ಸಮೇತ ದೂರು ನೀಡಿದರೆ ಈ ಬಗ್ಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಕಚೇರಿಗೆ ದೂರು ನೀಡಲಾಗದಿದ್ದರೆ ತನಿಖಾ ಸಂಸ್ಥೆಗಳು, ನ್ಯಾಯಾಲಯಗಳಿಗೂ ದೂರು ನೀಡಬಹುದು. ಸಾಕ್ಷ್ಯಾಧಾರ ಸಹಿತ ದೂರು ನೀಡುವುದನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಆದರೆ, ಆಧಾರ ರಹಿತ ಆರೋಪ ಮಾಡುವುದು ಬೇಜವಾಬ್ದಾರಿತನದ ಪರಮಾವಧಿ’ ಎಂದು ಸಚಿವರು ನುಡಿದರು.

‘ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ತ್ವರಿತಗೊಳಿಸಲು ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಶಾಲೆಗಳಿಗೆ ತ್ರಿಸದಸ್ಯ ಸಮಿತಿ ಭೇಟಿ ನೀಡಿದಾಗ ಶಾಲೆಯ ಪ್ರತಿನಿಧಿಗಳು ಸ್ಥಳದಲ್ಲಿದ್ದು, ಶಾಲೆಯಲ್ಲಿನ ಮೂಲಸೌಕರ್ಯಗಳ ವಿವರಗಳನ್ನು ನೀಡಬೇಕು. ಬೇರೆ ಯಾವುದೇ ಕಾರಣಗಳಿಗೆ ಶಿಕ್ಷಣ ಇಲಾಖೆಯ ಕಚೇರಿಗೆ ಭೇಟಿ ನೀಡುವ ಅಗತ್ಯತೆ ಇರುವುದಿಲ್ಲ’ ಎಂದು ಸಚಿವರು ನುಡಿದರು.

‘ಹೊಸ ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯಲು ವಿಳಂಬವಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದವು. ಹಿನ್ನೆಲೆಯಲ್ಲಿ ಈ ಸಾಲಿನಲ್ಲಿ ಹೊಸ ಶಾಲೆ ನೋಂದಣಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಒಟ್ಟು ಎಂಟು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.

‘ಇಲಾಖೆಯಿಂದ ಅನುಮತಿ, ಮಾನ್ಯತೆಯನ್ನು ಪಡೆದುಕೊಳ್ಳದೇ ನಿಯಮಬಾಹಿರವಾಗಿ ಹೊಸದಾಗಿ ಆರಂಭಿಸಲಾಗಿರುವ ಶಾಲೆಗಳ ಕುರಿತು ಶಿಕ್ಷಣ ಇಲಾಖೆಯಿಂದ ಪರಿಶೀಲನೆ ನಡೆದಿದೆ. ನಿಯಮ ಪಾಲಿಸದ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗ್ರಾಮೀಣ ವಿದ್ಯಾಭ್ಯಾಸ ಪ್ರಮಾಣಪತ್ರ, ಕನ್ನಡ ಮಾಧ್ಯಮ ಪ್ರಮಾಣಪತ್ರ, ವ್ಯಾಸಂಗ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಪ್ರಮಾಣಪತ್ರಗಳನ್ನು ಪಡೆಯಲು ಭವಿಷ್ಯದಲ್ಲಿ ತೊಂದರೆಯಾಗಬಾರದು ಎಂಬ ಸದುದ್ದೇಶದಿಂದ ಈ ಪರಿಶೀಲನೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕಾಗಿ ಕೈಗೊಳ್ಳಲಾದ ಸರ್ಕಾರದ ಈ ಕ್ರಮವನ್ನು ಸಹಿಸದ ಕೆಲವು ಶಿಕ್ಷಣ ವಿರೋಧಿ ಶಕ್ತಿಗಳು ಈ ಸುಳ್ಳು ಆರೋಪ ಮಾಡುತ್ತಿರಬಹುದು. ಇದರಲ್ಲಿ ಬ್ಲ್ಯಾಕ್‌ಮೇಲ್ ತಂತ್ರವೂ ಅಡಗಿರಬಹುದು.’ ಎಂದು ಸಚಿವ ನಾಗೇಶ್ ಅವರು ಅಭಿಪ್ರಾಯಪಟ್ಟರು.

‘ಯಾವುದೇ ಖಾಸಗಿ ಶಾಲೆ ಮತ್ತು ಆ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಸರ್ಕಾರ ಕ್ರಮ ವಹಿಸಲಿದೆ. ಆದರೆ, ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಸುಪ್ರೀಂಕೋರ್ಟ್ ನಿರ್ದೇಶನಗಳು, ಮಾರ್ಗಸೂಚಿ ಅನುಸಾರ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು’ ಎಂದರು.

‘ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಇಲಾಖೆಗಳ ‌ ಚರ್ಚಿಸಿ ಶಾಲಾ ಕಟ್ಟಡ ಮತ್ತು ಅಗ್ನಿ ಸುರಕ್ಷತೆ ಪರಿಶೀಲನೆ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. ಶಾಲಾ ಕಟ್ಟಡಗಳ ಸುರಕ್ಷತೆ ಕುರಿತು ಪರಿಶೀಲನೆಯನ್ನು ಈ ಹಿಂದೆ ಕಾರ್ಯನಿರ್ವಾಹಕ ಅಭಿಯಂತರರು ಮಾಡುತ್ತಿದ್ದರು. ಇದನ್ನು ಬದಲಾವಣೆ ಮಾಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಅಧಿಕಾರ ವಿಕೇಂದ್ರೀಕರಿಸಲಾಗಿದೆ’ ಎಂದರು.

ಆಯುಕ್ತರಿಗೆ ನಿರ್ದೇಶನ
ವೈಯಕ್ತಿಕವಾಗಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ಆರೋಪ ಮಾಡಿರುವ ವ್ಯಕ್ತಿಯಿಂದ ಮಾಡಿರುವ ಆರೋಪಗಳ ಕುರಿತಂತೆ ದಾಖಲೆಗಳನ್ನು ಪಡೆದು, ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ನಾಗೇಶ್ ತಿಳಿಸಿದರು.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.