ಸರಳ ಸ್ವಾತಂತ್ರ್ಯ ದಿನಾಚರಣೆಗೆ ತಯಾರಿ: ಸಾರ್ವಜನಿಕ ಪ್ರವೇಶ, ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ
Team Udayavani, Aug 13, 2020, 10:52 AM IST
ಬೆಂಗಳೂರು: ಕೋವಿಡ್ -19 ಹಿನ್ನೆಲೆ ಸುರಕ್ಷತೆ ಮತ್ತು ಸರಳ ರೀತಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಗೆ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಗುರುವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಮಾತನಾಡಿ, ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಶನಿವಾರ ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೈದಾನಕ್ಕೆ ಆಗಮಿಸಲಿದ್ದಾರೆ. 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ಬಳಿಕ ಪರೇಡ್ ವಂದನೆ ಸ್ವೀಕರಿಸಿ ನಾಡ ಜನತೆ ಉದ್ದೇಶಿಸಿ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕ ಪ್ರವೇಶ ಇಲ್ಲ
ಈ ಬಾರಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಜತೆಗೆ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೈಬಿಡಲಾಗಿದೆ. ನಾಡಗೀತೆ, ರೈತಗೀತೆ, ದೇಶ ಭಕ್ತಿ ಗೀತೆ ಮಾತ್ರ ಇರಲಿದೆ. ದೂರದರ್ಶನದಲ್ಲಿ ಕಾರ್ಯಕ್ರಮ ನೇರ ಪ್ರಸಾರವಾಗುತ್ತದೆ ಎಂದು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಹೇಳಿದರು.
ಪರೇಡ್ ನಲ್ಲಿ 16 ತುಕಡಿ ಮಾತ್ರ
ಈ ಹಿಂದೆ 30ಕ್ಕೂ ಹೆಚ್ಚು ತುಕಡಿಗಳಿಂದ ಪಥಸಂಚಲನ (ಪರೇಡ್) ನಡೆಯುತ್ತಿತ್ತು. ಈ ಬಾರಿ 16 ತುಕಡಿಗಳು ಮಾತ್ರ ಇದ್ದು, 350 ಮಂದಿ ಭಾಗವಹಿಸುತ್ತಿದ್ದಾರೆ. ಎಲ್ಲರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಸಿದ್ಧತೆ
ಗುರುವಾರ ಪಥಸಂಚಲನ, ನಾಡಗೀತೆ ಹಾಗೂ ರೈತಗೀತೆಯ ಅಂತಿಮ ಹಂತದ ತಾಲೀಮು ನಡೆಯಿತು. ಸಾರ್ವಜನಿಕ ಪ್ರವೇಶ ನಿರ್ಬಂಧ ಹಿನ್ನೆಲೆ ಅತಿಗಣ್ಯರು, ಗಣ್ಯರು, ವಿಶೇಷ ಆಹ್ವಾನಿತರಿಗಾಗಿ 500 ಆಸನ, ವೇದಿಕೆ ಸಿದ್ಧಪಡಿಸಲಾಗಿದೆ.
ಕೋವಿಡ್ ವಾರಿಯರ್ಸ್ ಭಾಗಿ
ಈ ಬಾರಿ ವಿಶೇಷವಾಗಿ ಕಾರ್ಯಕ್ರಮದಲ್ಲಿ 75 ಮಂದಿ ಕೋವಿಡ್ ವಾರಿಯರ್ಸ್ ಮತ್ತು 25 ಮಂದಿ ಸೋಂಕಿನಿಂದ ಗುಣಮುಖರು ಭಾಗಿಯಾಗುತ್ತಾರೆ.
ಭದ್ರತೆ
ಕೋವಿಡ್-19 ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ಆಚರಣೆ ಮಾಡಲಾಗುತ್ತದೆ. ಭದ್ರತೆಗಾಗಿ 47 ಸಿಸಿ ಕ್ಯಾಮರಾ, 680 ಸಿಬ್ಬಂದಿ ನಿಯೋಜಿಸಲಾಗಿದೆ. ಎಲ್ಲರಿಗೂ ಮಾಸ್ಕ್ ಕಡ್ಡಾಯ. ಪಾಸ್ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.