ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
Team Udayavani, Jan 24, 2021, 11:21 PM IST
ಬೆಂಗಳೂರು: ಲಿಂಗಾಯತ ಅಭಿವೃದ್ಧಿ ನಿಗಮ ಸಮುದಾಯದ ಎಎಸ್,ಐಎಎಸ್ ಅಭ್ಯರ್ಥಿಗಳಿಗೆ ಹಾಸ್ಟೆಲ್ ಸೇರಿದಂತೆ ವಿವಿಧ ಸೌಲಭ್ಯ ನೀಡಬೇಕು. ಲಿಂಗಾಯತ ಅಭಿವೃದ್ಧಿ ನಿಗಮ ಅಭ್ಯರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡಲು ಸರ್ಕಾರಕ್ಕೆ ಮನವಿ ಮಾಡಬೇಕು. ಲಿಂಗಾಯತ ಸಮುದಾಯದ ವತಿಯಿಂದ ಕೆಎಎಸ್ ಐಎಎಸ್ ಅಭ್ಯರ್ಥಿಗಳಿಗೆ ಕೋಚಿಂಗ್ ಸೆಂಟರ್ ನಿರ್ಮಾಣ ಮಾಡಬೇಕು.ಇದಕ್ಕೆ ಸಮುದಾಯದ ಸಚಿವರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ವಿಜಯನಗರದಲ್ಲಿ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಘ ವತಿಯಿಂದ ಹಮ್ಮಿಕೊಂಡಿದ್ದ “ಕೆಎಎಸ್‌ನಿಂದ ಐಎಎಸ್‌ಗೆ ಪದೋನ್ನತಿ ಪಡೆದ ಅಧಿಕಾರಿಗಳಿಗೆ ಸನ್ಮಾನ” ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು. ನಮ್ಮ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ತಮ್ಮ ಮಕ್ಕಳು ಅಧಿಕಾರ ಆಡಳಿತದ ಚುಕ್ಕಾಣಿ ಹಿಡಿಯಬೇಕೆಂದು ಮಕ್ಕಳನ್ನು ಪೋಷಕರು ಹೆಚ್ಚಿನ ಶಿಕ್ಷಣಕ್ಕೆ ಒತ್ತು ನೀಡಿ ಪ್ರೋತ್ಸಾಹಿಸಬೇಕು ಎಂದರು.
ಕೃಷಿ ಸಚಿವನಾಗಿ ಭೂಮಿತಾಯಿಯ ಅನ್ನದಾತನ ಸೇವೆ ಮಾಡುವ ಅವಕಾಶ ದೊರೆತಿದೆ. ಕೃಷಿ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿದ್ದೇನೆ. ನಮಗೆ ವೀಕೆಂಡ್ ಪಬ್ ಕಲ್ಚರ್ ಬೇಡ ವೀಕೆಂಡ್ ಅಗ್ರಿಕಲ್ಚರ್ ಸಂಸ್ಕೃತಿ ನಮ್ಮದಾಗಬೇಕು. ಶಾಲಾ ಮಕ್ಕಳಿಗೆ ಅಗ್ರಿ ಟೂರಿಸಂ ಮೂಲಕ ಕೃಷಿ ಬಗ್ಗೆ ಶಾಲಾದಿನಗಳಲ್ಲಿ ಅರಿವು ಮೂಡಿಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಚರ್ಚಿಸಿದ್ದೇನೆ ಎಂದರು.
ವೀರಶೈವ ಅಭಿವೃದ್ಧಿ ನಿಗಮಕ್ಕೆ ಪರಮಶಿವಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆ ಸಿಎಂ ತಮ್ಮನ್ನು ಸೇರಿದಂತೆ ಸುತ್ತೂರು ಶ್ರೀಗಳು ಹಾಗೂ ಸಮುದಾಯದ ಇತರ ಸಚಿವರ ಜೊತೆಗೆ ಚರ್ಚಿಸಿ ನೇಮಕ ಮಾಡಿದರು ಎಂದು ಬಿ.ಸಿ.ಪಾಟೀಲ್ ಸ್ಮರಿಸಿದರು.
ಇದನ್ನೂ ಓದಿ : ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.