ಅಭಿವೃದ್ಧಿ ಆದ್ಯತೆಯಾಗಲಿ ಖಾತೆ ಹಂಚಿಕೆ

Team Udayavani, Aug 28, 2019, 5:57 AM IST

u-19

ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಯಾರಂಭ ಮಾಡಿದೆ. ಯಡಿಯೂರಪ್ಪ ಆವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ 25 ದಿನಗಳ ಬಳಿಕ ಸಂಪುಟ ರಚನೆಯಾಗಿ ಆರು ದಿನದ ನಂತರ ಖಾತೆ ಹಂಚಿಕೆಯಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗಿದೆ.

ಸಮುದಾಯವಾರು ಲೆಕ್ಕಾಚಾರದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಈ ಕಾರ್ಯತಂತ್ರ ಅನುಸರಿಸಲಾಗಿದೆ. ಸುಗಮ ಆಡಳಿತ ನಿರ್ವಹಣೆಗೆ ಇದು ಸಹಕಾರಿಯಾಗಲಿದೆ ಎಂಬ ಸಮರ್ಥನೆಯೂ ಇದೆ.

ಏನೇ ಆದರೂ ಒಂದು ರೀತಿಯಲ್ಲಿ ರಾಜ್ಯದಲ್ಲಿ ಒಂದೆರಡು ತಿಂಗಳಿನಿಂದ ಉಂಟಾಗಿದ್ದ ರಾಜಕೀಯ ಅಸ್ಥಿರತೆ ಒಂದು ಹಂತಕ್ಕೆ ಸರಿಯಾಗುತ್ತಾ ಬಂದಿದೆ. ಸಂಪುಟ ರಚನೆ, ಖಾತೆ ಹಂಚಿಕೆಯಿಂದ ಅಸಮಾಧಾನವೂ ಉಂಟಾಗಿದೆಯಾದರೂ ಅದೆಲ್ಲವೂ ಶಮನಗೊಳ್ಳುವ ವಿಶ್ವಾಸ ಬಿಜೆಪಿಗಿದೆ. ಸದ್ಯದ ಮಟ್ಟಿಗೆ ಯಾರೂ ದೊಡ್ಡ ಪ್ರಮಾಣದಲ್ಲಿ ಬಂಡಾಯ ಏಳುವ ಲಕ್ಷಣಗಳೂ ಇಲ್ಲ.

ಈಗ ರಾಜ್ಯ ಸರ್ಕಾರ ತಡ ಮಾಡದೇ ಆಡಳಿತ ಯಂತ್ರ ಚುರುಕುಗೊಳಿಸಿ ಜನರ ಸಮಸ್ಯೆಗಳತ್ತ ಗಮನಹರಿಸಬೇಕು. ಒಂದೆಡೆ ಬರ ಹಾಗೂ ಮತ್ತೂಂದೆಡೆ ಪ್ರವಾಹದಿಂದ ರಾಜ್ಯದ ಬಹುತೇಕ ಪ್ರದೇಶಗಳ ಜನತೆ ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ನೂತನ ಸರ್ಕಾರದ ಮೇಲೆ ಹೊಣೆಗಾರಿಕೆ ಜಾಸ್ತಿಯೇ ಇದೆ.

ಬರ ಪರಿಹಾರ, ನರೇಗಾ ಬಾಬ್ತಿನ ಬಾಕಿ ಹಣವೇ ಇನ್ನೂ ಪೂರ್ಣ ಪ್ರಮಾಣದಲ್ಲಿ ಕೇಂದ್ರದಿಂದ ಬಂದಿಲ್ಲ. ಪ್ರವಾಹಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡ ಅಧ್ಯಯನ ನಡೆಸಿ ಹೋಗಿದೆ. ಕೇಂದ್ರದಲ್ಲಿ ಬಿಜೆಪಿಯದೇ ಸರ್ಕಾರ ಇದ್ದು ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿರುವುದರಿಂದ ಪ್ರವಾಹ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್‌ ನಿರೀಕ್ಷೆಯೂ ಇದೆ. ಇದಕ್ಕೆ ಕೇಂದ್ರ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಲಿದೆ, ರಾಜ್ಯ ಸರ್ಕಾರ ಯಾವ ಮಟ್ಟಕ್ಕೆ ಪ್ರಭಾವ ಬೀರಿ ಸಹಾಯ ಪಡೆಯಲಿದೆ ಎಂದು ಕಾದು ನೋಡಬೇಕಾಗಿದೆ.

ಪ್ರತಿಪಕ್ಷಗಳು ಸಹ ಇಂತಹ ಸಂದರ್ಭದಲ್ಲಿ ರಾಜಕೀಯ ವಿಚಾರಗಳ ಬಗ್ಗೆ ಹೆಚ್ಚು ಆರೋಪ-ಪ್ರತ್ಯಾರೋಪ ಮಾಡದೆ ಬರ ಹಾಗೂ ಪ್ರವಾಹದಿಂದ ಸಂಕಷ್ಟದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವಿಚಾರದಲ್ಲಿ ರಾಜಕೀಯ ಬಿಟ್ಟು ಪ್ರಾಮಾಣಿಕತೆ, ಬದ್ಧತೆ ಪ್ರದರ್ಶಿಸಬೇಕು. ಬರ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರ ಸಮಸ್ಯೆಗಳ ವಾಸ್ತವಾಂಶ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಾರ್ಯಗಳು ಕೈಗೊಳ್ಳಲು ಒತ್ತಡ ಹೇರಬೇಕು.

ಜತೆಗೆ, ಆರ್ಥಿಕ ಹಿಂಜರಿತದ ಭೀತಿ ಆವರಿಸಿರುವುದರಿಂದ ಉದ್ಯಮ, ಕೈಗಾರಿಕೆ, ಪ್ರವಾಸೋದ್ಯಮ ವಲಯಗಳಲ್ಲಿ ಭರವಸೆ ಮೂಡಿಸುವ ಕ್ರಮಗಳು, ಯೋಜನೆಗಳನ್ನು ರಾಜ್ಯ ಸರ್ಕಾರ ರೂಪಿಸಬೇಕಾಗಿದೆ. ಆ ಮೂಲಕ ಸರ್ಕಾರ, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಎಲ್ಲದಕ್ಕಿಂತ ಹೆಚಾrಗಿ ರಾಜ್ಯದಲ್ಲಿ ಈಗಿನ ಸಂದರ್ಭದಲ್ಲಿ ಆರ್ಥಿಕ ಶಿಸ್ತು ಕಾಪಾಡುವುದು ಮುಖ್ಯ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೇಬೇಕಾದ ಅನಿವಾರ್ಯತೆಯೂ ಇದೆ.

ಸರ್ಕಾರ, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ರಾಜ್ಯದಲ್ಲಿ ಈಗಿನ ಸಂದರ್ಭದಲ್ಲಿ ಆರ್ಥಿಕ ಶಿಸ್ತು ಕಾಪಾಡುವುದು ಮುಖ್ಯ. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೇಬೇಕಿದೆ.

ಟಾಪ್ ನ್ಯೂಸ್

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.