ಬ್ಲಾಕ್‌ವೆುಲ್ ಪ್ರಕರಣಕ್ಕೆ ಬಿ ರಿಪೋರ್ಟ್ : ಶಂಭು ಶರ್ಮಾ
Team Udayavani, Feb 13, 2017, 3:45 AM IST
ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಬ್ಲಾಕ್ ಮೇಲ್ ಮಾಡಿದ ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಸಿಐಡಿ ಪೊಲೀಸರು ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾನೂನು ಸಮರ ಹಾಗೂ ಜನಾಂದೋಲನ ನಡೆಸಲಾಗುವುದು ಎಂದು ಮಠದ ಪರ ವಕೀಲ ಶಂಭು ಶರ್ಮಾ ಹೇಳಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಘವೇಶ್ವರ ಭಾರತೀ ಸ್ವಾಮಿಜಿ ವಿರುದ್ಧ ದಿವಾಕರ ಶಾಸಿŒ
ಮಾಡಿದ್ದ ಬ್ಲಾಕ್‌ವೆುàಲ್ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಿ ರಿಪೋರ್ಟ್ ಹಾಕುವ ಕುರಿತು ಕೆಲವು ಪತ್ರಿಕೆಗಳು ವರದಿ ಮಾಡಿವೆ. ವರದಿಯಲ್ಲಿ ಅಧಿಕಾರಿಗಳ ಅಭಿಪ್ರಾಯ ಉಲ್ಲೇಖೀಸಲಾಗಿದೆ. ಸಿಐಡಿ ಅಧಿಕಾರಿಗಳ ಈ ನಡೆ ಹಲವು ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದ್ದು, ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಅಲ್ಲದೆ, ಜನಾಂದೋಲನ ಕೂಡ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ತನಿಖೆಯಲ್ಲಿ ಬ್ಲಾಕ್‌ವೆುàಲ್‌ಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಸಂಗ್ರಹವಾಗಿದ್ದರೂ ಪ್ರಕರಣಕ್ಕೆ ಇತಿಶ್ರೀ ಹೇಳಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ಸರ್ಕಾರದ ಕೆಲವೊಂದು ಶಕ್ತಿಗಳ ಒತ್ತಡ ಇರುವ ಗುಮಾನಿ ಇದೆ. ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರೆ ರಾಜಕಾರಣಿ, ಅಧಿಕಾರಿಗಳ ಬಣ್ಣ ಬಯಲಾಗುವ ಹೆದರಿಕೆಯಿಂದಾಗಿ
ಪ್ರಕರಣ ಅಂತ್ಯಗೊಳಿಸುವ ತೀರ್ಮಾನಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಆರೋಪಿಸಿದರು.
ಸ್ವಾಮೀಜಿಗೆ ಮತ್ತು ಮಠಕ್ಕೆ ನ್ಯಾಯ ಒದಗಿಸುವಲ್ಲಿ ಸರ್ಕಾರ ಪದೇಪದೆ ವಿಫಲವಾಗುತ್ತಿದೆ. ಸ್ವಾಮೀಜಿ ವಿರುದ್ಧ ಯಾವ ಸಮಯದಲ್ಲಿ ಪ್ರಕರಣ ದಾಖಲಿಸಬಹುದು ಎಂಬುದರ ಬಗ್ಗೆ ದಿವಾಕರ ಶಾಸಿŒ ಜ್ಯೋತಿಷ್ಯರನ್ನು ಇ-ಮೇಲ್ ಮೂಲಕ ಕೇಳಿರುವ ಬಗ್ಗೆ ಹೊನ್ನಾವರ ಪೊಲೀಸರು ಮಾಹಿತಿ ದಾಖಲಿಸಿದ್ದು, ಬಳಿಕ ನ್ಯಾಯಾಲಯಕ್ಕೆ ಮಹಜರು ವರದಿ ಸಲ್ಲಿಸಲಾಗಿದೆ. ಆದರೂ ಸಿಐಡಿ ಅಧಿಕಾರಿಗಳು ಸಾಕ್ಷ್ಯಾಧಾರ ಕೊರತೆ ಎಂಬುದಾಗಿ ಹೇಳುತ್ತಿರುವುದು ಹಲವು
ಶಂಕೆಗೆ ಕಾರಣವಾಗಿದೆ ಎಂದರು.
ತ್ರಿಕಾಗೋಷ್ಠಿಯಲ್ಲಿ ದೂರುದಾರ ಬಿ.ಆರ್. ಚಂದ್ರಶೇಖರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.