Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
ಖರ್ಗೆ ಮಂಗಳಾರತಿ ಎತ್ತಿದ್ದಾರೆ... ಜನರು ಛೀ... ಥೂ... ಎಂದು ಉಗಿಯುತಿದ್ದಾರೆ
Team Udayavani, Nov 3, 2024, 6:48 PM IST
ಬಳ್ಳಾರಿ: ”ಪ್ರಧಾನಿ ಮೋದಿ, ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆಯಿಂದ ಇರಿ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರವಿವಾರ(ನ3) ಕಿಡಿ ಕಾರಿದ್ದಾರೆ.
ಸಂಡೂರು ಉಪಚುನಾವಣೆ ಪ್ರಚಾರ ನಿಮಿತ್ತ ಆಗಮಿಸಿ ಕ್ಷೇತ್ರದ ಚೋರನೂರು ಗ್ರಾಮದಲ್ಲಿ ಯುವ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಹಿರಿಯರಿದ್ದಾರೆ, ಭಾಷೆಯ ಮೇಲೆ ಹಿಡಿತವಿರಬೇಕು.
ಮೋದಿಯವರನ್ನು ರಾಜಕೀಯ ಪುಡಾರಿ ಎನ್ನುತ್ತಿರಾ? ನಿಮ್ಮ ಭಾಷೆ ಏನಾಗಿದೆ.ಯಡಿಯೂರಪ್ಪ ಮೂರು ನಾಲ್ಕು ದಶಕಗಳಿಂದ ಹೋರಾಟ ಮಾಡಿ ಮುಖ್ಯಮಂತ್ರಿ ಯಾಗಿದ್ದಾರೆ. ಸಿದ್ದರಾಮಯ್ಯನವರೇ ನೀವು ಯಾವ ಹೋರಾಟದಿಂದ ಮುಖ್ಯಮಂತ್ರಿಯಾಗಿದ್ದೀರಿ? ಅದೃಷ್ಟದ ಮುಖ್ಯಮಂತ್ರಿಯಾದ ನಿಮಗೆ ಮೋದಿ ಬಗ್ಗೆ ಮಾತನಾಡೋ ಯೋಗ್ಯತೆ ಇದೆಯಾ? ಎಂದು ಆಕ್ರೋಶ ಹೊರ ಹಾಕಿದರು.
ರಾಜ್ಯದ ಜನರು ಛೀ… ಥೂ… ಎಂದು ಉಗಿಯುತಿದ್ದಾರೆ.ಖರ್ಗೆ ನಿಮ್ಮ ಗ್ಯಾರಂಟಿ ಬಗ್ಗೆ ಮಂಗಳಾರತಿ ಎತ್ತಿದ್ದಾರೆ.
ಬಳ್ಳಾರಿ ಪಾದಯಾತ್ರೆ ಮಾಡಿದ್ದು ನಿಮ್ಮ ಅಧಿಕಾರಕ್ಕಾಗಿ, ಅಹಿಂದ ನಿಮ್ಮ ವೈಯಕ್ತಿಕ ಬೆಳವಣಿಗೆ ಗಾಗಿ ಎಂದರು.
ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿ ‘ಬಿಟ್ಟಿ ಪ್ರಚಾರದ ಬಗ್ಗೆ ಹೆಮ್ಮೆ ಇದ್ರೇ ಬಳಸಿಕೊಳ್ಳಿ.
ಸಂವಿಧಾನದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ.ಮಠಮಂದಿರ ಮತ್ತು ರೈತರ ಭೂಮಿ ಕಬಳಿಸುತ್ತಾರೆ.
ಜವಾಬ್ದಾರಿಯುತ ಸಚಿವ ಮಾಡುವ ಕೆಲಸವೇ ಇದು.ನೋಟಿಸ್ ಹಿಂಪಡೆದರಷ್ಟೇ ಸಾಲುವುದಿಲ್ಲ ಗೆಜೆಟ್ ನೋಟಿಫೀಕೇಷನ್ ಕೂಡ ವಾಪಸ್ ಪಡೆಯಲಿ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.