Beer Price; ಬಜೆಟ್ ಮೊದಲೇ ಮದ್ಯಪ್ರಿಯರಿಗೆ ಶಾಕ್ ನೀಡಿದ ಸರ್ಕಾರ; ಬಿಯರ್ ಬೆಲೆಯಲ್ಲಿ ಏರಿಕೆ
Team Udayavani, Feb 1, 2024, 2:02 PM IST
ಬೆಂಗಳೂರು: ರಾಜ್ಯ ಬಜೆಟ್ ಗೂ ಮೊದಲೇ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ರಾಜ್ಯ ಸರ್ಕಾರವು ಅಬಕಾರಿ ಸುಂಕವನ್ನು ಹೆಚ್ಚಿಸಿದ ಕಾರಣ ಬಿಯರ್ ಗಳ ಬೆಲೆಯಲ್ಲಿ ಏರಿಕೆಯಾಗಿದೆ.
ಸರ್ಕಾರ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.185 ರಿಂದ 195 ಕ್ಕೆ ಹೆಚ್ಚಳ ಮಾಡಿರುವುದರಿಂದ ಬಿಯರ್ ಬೆಲೆ ಏರಿಕೆಯಾಗಿದೆ. ಗುರುವಾರದಿಂದ (ಫೆ.1) ಪ್ರತಿ ಬಾಟಲ್ ಗೆ 5 ರಿಂದ 12 ರೂ. ವರೆಗೆ ಹೆಚ್ಚಳವಾಗಿದೆ. ಬ್ರಾಂಡ್‌ಗಳ ಆಧಾರದ ಮೇಲೆ ದರ ಏರಿಕೆಯಾಗಲಿದೆ. ಸಾಮಾನ್ಯ ಬ್ರಾಂಡ್ ಗಳಿಂದ ಪ್ರೀಮಿಯಂ ಬ್ರಾಂಡ್ ಗಳವರೆಗೆ ಎಲ್ಲಾ ಬಗೆಯ ಬಿಯರ್ ಗಳ ದರದಲ್ಲಿ ಹೆಚ್ಚಳವಾಗಲಿದೆ.
ಮೇ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಚುನಾವಣೆ ಗೆದ್ದ ನಂತರ ಜುಲೈ 7 ರಂದು ಮಂಡಿಸಿದ ಮೊದಲ ಬಜೆಟ್ ನಲ್ಲಿ ಸಿದ್ದರಾಮಯ್ಯ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಿಸಿತ್ತು.
ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇದರ ನಂತರ ಇತರ ಮದ್ಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಬಹುದಾದ ಸಾಧ್ಯತೆಯಿದೆ.
ಬಿಯರ್ ಮಾರಾಟದಲ್ಲಿ ದೊಡ್ಡ ಬೆಳವಣಿಗೆಯಾಗಿರುವುದರಿಂದ ಸರ್ಕಾರವು ಅಬಕಾರಿ ಸುಂಕ ಹೆಚ್ಚಳಕ್ಕೆ ಮಾಡಿದೆ ಎನ್ನಲಾಗಿದೆ.
ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವು ನಿರ್ಣಾಯಕವಾಗಿದೆ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.