ರಾಜಕೀಯದಲ್ಲೀಗ ಬಳೆ ಸಮರ ಶುರು

ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿದ್ದರೆ ಬಳೆ ತೊಟ್ಟುಕೊಳ್ಳಿ: ಸಿದ್ದುಗೆ ಶೋಭಾ ಸವಾಲು

Team Udayavani, May 17, 2019, 6:00 AM IST

Shobha-Karandlaje,-Siddaramaiah,

ಬೆಂಗಳೂರು: ‘ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿದ್ದರೆ, ಬಳೆ ತೊಟ್ಟುಕೊಳ್ಳಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.

‘ಆಪರೇಷನ್‌ ಕಮಲ’ದ ವಿಷಯ ಈಗ ಮಹಿಳೆಯರ ಬಳೆ ಕಡೆಗೆ ತಿರುಗಿದ್ದು, ಬಳೆ ತೊಡುವುದರ ಬಗ್ಗೆಯೇ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಶೋಭಾ ಹೇಳಿಕೆಗೆ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಜಾಲತಾಣದಲ್ಲಿಯೂ ಆಕ್ಷೇಪಗಳು ಕೇಳಿ ಬಂದಿವೆ.

ಇದೇ ವೇಳೆ, ಸಿದ್ದರಾಮಯ್ಯ ಅವರು ಶೋಭಾ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ‘ಕುಮಾರಿ ಶೋಭಾ ಅವರೆ, ಹೆಣ್ಣಾಗಿ ನೀವು ಮಹಿಳಾ ಸಂಕುಲವೇ ಅಸಮರ್ಥರು ಎಂಬ ಕೀಳು ಹೇಳಿಕೆ ನೀಡಿ ರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿ ಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡ ಲಾಗದವರು ಎಂದಲ್ಲ. ನೆನಪಿರಲಿ ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು’ ಎಂದು ತಿರುಗೇಟು ನೀಡಿದ್ದಾರೆ.

ಶೋಭಾ ಪ್ರತಿ ಟ್ವೀಟು: ಈ ಮಧ್ಯೆ, ಸಿದ್ದರಾಮಯ್ಯ ಟ್ವೀಟ್‌ಗೆ ತಿರುಗೇಟು ನೀಡಿರುವ ಶೋಭಾ ಕರಂದ್ಲಾಜೆ, ಇಂದಿರಾಗಾಂಧಿಯವರ ಹೆಜ್ಜೆ ಗುರುತುಗಳನ್ನು ಹಿಂಬಾಲಿಸಿ, ನಿರ್ಮಲಾ ಸೀತಾರಾಮನ್‌ ಹಾಗೂ ಸುಷ್ಮಾ ಸ್ವರಾಜ್‌ ಅವರಿಂದ ಸ್ಪೂರ್ತಿ ಪಡೆಯಿರಿ. ಪ್ರತಿ ಸಾರಿಯೂ ನಮ್ಮ ಶಾಸಕರು ಯಡಿಯೂರಪ್ಪ ಅವರೊಂದಿಗೆ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಅಳುತ್ತ ಕೂಡಬೇಡಿ. ಸುಮ್ಮನೆ ಆರೋಪ ಮಾಡುವ ಬದಲು ನಿಮ್ಮ ಶಾಸಕರ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ. ಅಳುಮುಂಜಿ ಆಗಬೇಡಿ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಹರಕು ಬಾಯಿಯ ಶೋಭಾ: ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಶೋಭಾ ಹೇಳಿಕೆಗೆ ತಿರುಗೇಟು ನೀಡಿದ್ದು, ಹರಕು ಬಾಯಿಯ ಶೋಭಾ ಅವರು ಹೆಣ್ಣು ಕುಲಕ್ಕೆ ಗೌರವ ತರುವಂತೆ ಮಾತನಾಡ ಬೇಕು. ಹೆಣ್ಣಿನ ಬಳೆ ದೌರ್ಬಲ್ಯದ ಸಂಕೇತವಲ್ಲ. ಹೆಣ್ಣೂ ಶಕ್ತಿ ಹೀನವಲ್ಲ. ಬಳೆ ಸಂಸ್ಕೃತಿಯ ಸಂಕೇತ ಎನ್ನುವ ಸಾಮಾನ್ಯ ಜ್ಞಾನ ಶೋಭಾಗೆ ಇಲ್ಲ ಎಂದು ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ರಾಠೊಡ್‌ ಕೂಡ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿ ಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿದಾಗ ಮನಮೋಹನ್‌ ಸಿಂಗ್‌ ಅವರಿಗೆ ಬೆಲೆ ಇಳಿಸಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಸ್ಮತಿ ಇರಾನಿ ಹೇಳಿದ್ದರು. ಈಗ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರಿದೆ. ಈಗ ಬಳೆ ತೊಡಲು ಅರ್ಹತೆ ಇರುವುದು ಪ್ರಧಾನಿ ನರೇಂದ್ರ ಮೋದಿಗೆ ಮಾತ್ರ. ಶೋಭಾ ಕರಂದ್ಲಾಜೆ, ಪ್ರಧಾನಿಗೆ ಬಳೆ ಹಾಕಿಕೊಳ್ಳುವಂತೆ ಹೇಳಲಿ ಎಂದರು.

‘ಅವರೇ ಬಳೆ ಹಾಕಿಕೊಂಡಿಲ್ಲ’

ಹುಬ್ಬಳ್ಳಿ: ಶೋಭಾ ಕರಂದ್ಲಾಜೆ ಅವರು ಒಬ್ಬ ಮಹಿಳೆಯಾಗಿ ಬಳೆ ಹಾಕಿಕೊಂಡಿಲ್ಲ. ಇನ್ನು ನಾವು ಹಾಕಿಕೊಳ್ಳ ಬೇಕಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯರಗುಪ್ಪಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಅವರು ಒಬ್ಬ ಹೆಣ್ಣು ಮಗಳು. ಅವರ ಕೈಯಲ್ಲಿ ಬಳೆ ಇದೆಯೋ ಎಂಬುದನ್ನು ನೀವು ನೋಡಿ ದ್ದೀರಾ?. ಅವರೇ ಬಳೆ ಹಾಕಿಕೊಂಡಿಲ್ಲ ಎಂದ ಮೇಲೆ ಇನ್ನು ನಾನ್ಯಾಕೆ ಬಳೆ ಹಾಕಿಕೊಳ್ಳಲಿ’ ಎಂದು ಟಾಂಗ್‌ ಕೊಟ್ಟರು.

‘ಸಿದ್ದರಾಮಯ್ಯನವರು ಬಳೆ ತೊಟ್ಟುಕೊಳ್ಳಲಿ’

ಹುಬ್ಬಳ್ಳಿ: ಅಸಮಾಧಾನಗೊಂಡಿರುವ ತಮ್ಮ ಪಕ್ಷದ ಶಾಸಕರನ್ನು ಸಮಾಧಾನ ಪಡಿಸಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಬೇಕಾದದ್ದು ಸಿದ್ದರಾಮಯ್ಯ ಅವರ ಕೆಲಸ. ಆದರೆ, ಈ ಕೆಲಸ ಮಾಡಲು ನೀವು ಬಲಹೀನರು. ನಿಮ್ಮ ಶಾಸಕರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದನ್ನು ಅರಿತು, ಅವರನ್ನು ಹಿಡಿತದಲ್ಲಿಟ್ಟುಕೊಳ್ಳಲು ಅಸಾಧ್ಯ ಎನ್ನುವುದಾದರೆ ಬಳೆ ತೊಟ್ಟುಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ಕುಂದಗೋಳ ಉಪ-ಚುನಾವಣಾ ಕ್ಷೇತ್ರದ ಪ್ರಚಾರಕ್ಕೆ ಆಗಮಿಸಿದ್ದ ಅವರು, ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶೋಭಾ ಅವರು ಸಿದ್ದರಾಮಯ್ಯಅವರಿಗೆ ಬಳೆ ಹಾಕಿಕೊಳ್ಳಲು ಹೇಳಿದ್ದಾರಂತೆ. ಸಂತೋಷ, ಶೋಭಕ್ಕಾ ಒಳ್ಳೆ ಬಳೆಗ ಳನ್ನು ಕಳುಹಿಸಿಕೊಡಲಿ ಹಾಕಿಕೊಳ್ಳುತ್ತೇವೆ.
-ಡಿ.ಕೆ ಶಿವಕುಮಾರ್‌ ಸಚಿವ
ಬಳೆ ಹಾಕುವವರೆಲ್ಲರೂ ಅಶಕ್ತರೇ ಎಂಬುದನ್ನು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಲಿ. ಅವರ ಹೇಳಿಕೆ ಮೂರ್ಖ ತನದ ಪರಮಾಧಿಯಲ್ಲದೇ ಮತ್ತಿನ್ನೇನು.
-ಎಚ್.ಕೆ. ಪಾಟೀಲ,ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ.
ಶೋಭಾ ಕರಂದ್ಲಾಜೆ ಮೊದಲು ಸಂಸ್ಕಾರ ಕಲಿಯಲಿ. ಇಂತಹ ಹೇಳಿಕೆಗಳಿಂದ ತಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ಹಚ್ಚಿಕೊಳ್ಳುತ್ತಾರೆ. ಇನ್ನೊಬ್ಬರನ್ನು ಗೌರವಿಸುವುದನ್ನು ಕಲಿಯಬೇಕು.
-ಉಮಾಶ್ರೀ, ಮಾಜಿ ಸಚಿವೆ

ಟಾಪ್ ನ್ಯೂಸ್

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.