Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
ವೇತನ ಹೆಚ್ಚಳದ ಬಗ್ಗೆ ಸಿಎಂ ಜೊತೆ ಚರ್ಚೆ
Team Udayavani, Dec 18, 2024, 5:24 PM IST
ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ ಅಂಗನವಾಡಿ ನೌಕರರ ಬೆಳಗಾವಿ ಚಲೋ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತರಿಗೆ ವಿಮಾ ಯೋಜನೆ ಜಾರಿ, ವೇತನ ಪರಿಷ್ಕರಣೆ, ಮೊಟ್ಟೆ ದರ ಪರಿಷ್ಕರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಗೃಹಲಕ್ಷ್ಮೀ ಯೋಜನೆಯನ್ನು ನಮ್ಮ ಇಲಾಖೆಯಿಂದ ಜಾರಿಗೆ ತರುವ ಮೂಲಕ ಬಲಿಷ್ಠರಾಗಿದ್ದೇವೆ. ವೇತನ ಹೆಚ್ಚಳ ಏರಿಕೆ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಎನ್.ಸಿದ್ದೇಶ್ವರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.