ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
Team Udayavani, Jan 18, 2021, 12:05 PM IST
ಬೆಂಗಳೂರು: ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ರಾಜಕೀಯ ನಾಯಕರು ತಿರುಗೇಟು ನೀಡುತ್ತಿದ್ದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
‘ಬೆಳಗಾವಿ ನಮ್ಮದು’ ಎಂಬ ಹ್ಯಾಷ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದಿದ್ದಾರೆ.
ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಮಹಾ ಸಿಎಂ ರನ್ನು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ
ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.