Belagavi; ಬಿಜೆಪಿ ಎಸ್ಸಿ ಮೋರ್ಚಾ ಮುಖಂಡ ಪೃಥ್ವಿಸಿಂಗ್ ಮೇಲೆ ಚಾಕು ಇರಿತ
ರಮೇಶ್ ಜಾರಕಿಹೊಳಿ ಅವರ ಆಪ್ತರಾಗಿರುವ ಸಿಂಗ್...ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Team Udayavani, Dec 4, 2023, 7:33 PM IST
ಬೆಳಗಾವಿ: ಬಿಜೆಪಿ ಎಸ್ಸಿ ಮೋರ್ಚಾ ಸದಸ್ಯ ಪೃಥ್ವಿ ಸಿಂಗ್ ಅವರ ಮೇಲೆ ಗುಂಪೊಂದು ಚಾಕುವಿನಿಂದ ಇರಿದ ಘಟನೆ ಸೋಮವಾರ ಸಂಜೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿಸಿಂಗ್ ಅವರ ಆರೋಗ್ಯ ವಿಚಾರಿಸಲು ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಬೆಳಗಾವಿ ನಗರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಬಿಜೆಪಿ ಮುಖಂಡನ ಮೇಲೆ ದಾಳಿ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಎಲ್ಇ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ವಿರುದ್ಧ ಪೃಥ್ವಿಸಿಂಗ್ ಹಾಗೂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿಸಿಂಗ್ ಅವರನ್ನು ಬಿಜೆಪಿ ಮುಖಂಡರಾದ ಛಲವಾದಿ ನಾರಾಯಣ ಸ್ವಾಮಿ, ಸಂಜಯ ಪಾಟೀಲ ಸೇರಿದಂತೆ ಅನೇಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇನ್ನು ಕೆಲವೇ ಕ್ಷಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ದುರುದ್ದೇಶಪೂರ್ವವಾಗಿ ಆರೋಪ
ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುವುದು ಪತ್ತೆ ಹಚ್ಚಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.