ಬೆಳಗಾವಿಯಲ್ಲಿ ವ್ಯಕ್ತಿಯ ರುಂಡ ಚೆಂಡಾಡಿ ಭೀಕರ ಹತ್ಯೆ!
Team Udayavani, Aug 26, 2022, 6:44 PM IST
ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದ ತಾರೀಹಾಳ ಕ್ರಾಸ್ನ ಜೈನ ಬಸದಿ ಬಳಿ ವ್ಯಕ್ತಿಯೋರ್ವನ ರುಂಡ ಚೆಂಡಾಡಿ ಭೀಕರ ಹತ್ಯೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ತಾಲೂಕಿನ ಕೊಂಡಸಕೊಪ್ಪ ಗ್ರಾಮದ ಗದಗಯ್ಯ ಹಿರೇಮಠ(45) ಎಂಬ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ರುಂಡವನ್ನು ಕತ್ತರಿಸಿ ಕೊಲೆ ಮಾಡಲಾಗಿದೆ. ಬೈಕ್ ಮೇಲೆಯೇ ಮೃತದೇಹ ಬಿದ್ದಿದ್ದು, ಇದನ್ನು ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಕೊಂಡಸಕೊಪ್ಪ ಗ್ರಾಮದಿಂದ ಹೊರಟಿದ್ದ ಗದಗಯ್ಯನ ದ್ವಿಚಕ್ರ ವಾಹನ ನಿಲ್ಲಿಸಿದ ಹಂತಕರು ಏಕಾಏಕಿ ಮಾರಕಾಸ್ತ್ರದಿಂದ ಹೊಡೆದಿದ್ದಾರೆ. ರುಂಡ ಚೆಂಡಾಡಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಂತರ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಗದಗಯ್ಯನ ಕೊಲೆ ನಡೆದಿದೆ ಎಂದು ಪೊಲೀಸಕರು ಶಂಕಿಸಿದ್ದಾರೆ.
ಇದನ್ನೂ ಓದಿ: ಧರ್ಮದ ಹೆಸರಿನಲಿ ಬಿಜೆಪಿ ರಾಜಕಾರಣ; ಬಿ.ಕೆ.ಹರಿಪ್ರಸಾದ್
ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.