ಜಿಎಸ್‌ಟಿ ಸಂಗ್ರಹದಲ್ಲಿ ಬೆಳಗಾವಿ ವಲಯ ದೇಶಕ್ಕೆ ನಂ.2


Team Udayavani, Jun 30, 2022, 9:20 PM IST

ಜಿಎಸ್‌ಟಿ ಸಂಗ್ರಹದಲ್ಲಿ ಬೆಳಗಾವಿ ವಲಯ ದೇಶಕ್ಕೆ ನಂ.2

ಬೆಳಗಾವಿ: ಜಿಎಸ್‌ಟಿ ಸಂಗ್ರಹ ಕಾರ್ಯದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಕರ್ನಾಟಕ ವಲಯವು 48,440 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿ ಮುಂಬೈ ವಲಯದ ನಂತರದ ಎರಡನೇ ಸ್ಥಾನದಲ್ಲಿದೆ. ಅದೇ ರೀತಿ ಕರ್ನಾಟಕದಲ್ಲಿ ಬೆಳಗಾವಿ ಸಿಜಿಎಸ್‌ಟಿ ಆಯುಕ್ತಾಲಯ 2021-22ನೇ ವರ್ಷಕ್ಕೆ 10,172 ಕೋಟಿ ರೂ. ಆದಾಯ ಸಂಗ್ರಹಿಸಿದ್ದು ಇದು ಹಿಂದಿನ ವರ್ಷದ ಸಂಗ್ರಹಕ್ಕಿಂತ ಶೇ.43ರಷ್ಟು ಹೆಚ್ಚಾಗಿದೆ.

ಜೆಎಸ್‌ಡಬ್ಲ್ಯು ಸ್ಟೀಲ್‌ ಕರ್ನಾಟಕದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಪಾವತಿಸುವ ಉದ್ಯಮವಾಗಿದೆ. ಈ ಕಂಪನಿಯು 2021-22ನೇ ಸಾಲಿನಲ್ಲಿ 3,974 ಕೋಟಿ ರೂ. ಜಿಎಸ್‌ಟಿ ಪಾವತಿಸುವ ಮೂಲಕ ಬೆಳಗಾವಿ ಆಯುಕ್ತಾಲಯದಲ್ಲಿ ಹೆಚ್ಚಿನ ಆದಾಯಕ್ಕೆ ಕೊಡುಗೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಆರ್ಥಿಕ ಚಟುವಟಿಕೆಗಳು ಬೆಳಗಾವಿ ಸಿಜಿಎಸ್‌ಟಿ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಒಳಗೊಂಡಿದ್ದು ಬೆಳಗಾವಿ ಸಿಜಿಎಸ್‌ಟಿ ಆಯುಕ್ತಾಲಯ ಕರ್ನಾಟಕ ವಲಯದಲ್ಲಿ ಅತಿ ದೊಡ್ಡ ಆಯುಕ್ತಾಲಯವಾಗಿದೆ

ಜಿಎಸ್‌ಟಿ ದಿನ: ಜಿಎಸ್‌ಟಿ ಜಾರಿಯಾಗಿ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಹಣಕಾಸು ಸಚಿವಾಲಯ, ಕಂದಾಯ ಇಲಾಖೆ, ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು ಜಿಎಸ್‌ಟಿಯನ್ನು ಪರಿಚಯಿಸಿ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ಜು.1ರಂದು ಜಿಎಸ್‌ಟಿ ಐದು ವರ್ಷಗಳ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕೆಎಲ್‌ಇ ಕನ್ವೆನÒನ್‌ ಸೆಂಟರ್‌ನಲ್ಲಿ ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿರುವ ತೆರಿಗೆದಾರರ ಅಸಾಧಾರಣ ಕಾರ್ಯಕ್ಷಮತೆ ಹಾಗೂ ಬೆಳಗಾವಿ ಸಿಜಿಎಸ್‌ಟಿ ಆಯುಕ್ತಾಲಯದ ಅಧಿಕಾರಿಗಳ ಶ್ಲಾಘನೀಯ ಸಾಧನೆಯನ್ನು ಗುರುತಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬೆಳಗಾವಿ ಸಿಜಿಎಸ್‌ಟಿ ಆಯುಕ್ತಾಲಯ ತೆರಿಗೆದಾರರ ಅನುಸರಣೆಗೆ ಅನುಕೂಲವಾಗುವಂತೆ ವಿವಿಧ ಕ್ರಮ ಕೈಗೊಂಡಿದೆ. ವ್ಯಾಪಾರ ಸಂಸ್ಥೆಗಳ ಸದಸ್ಯರೊಂದಿಗೆ ಸಂವಾದ, ಸಮಸ್ಯೆಗಳ ಆಲಿಕೆ, ಮಾರ್ಗದರ್ಶನ ನೀಡುವುದಲ್ಲದೆ ಅವುಗಳಿಗೆ ಪರಿಹಾರ ಕಲ್ಪಿಸಿದೆ. ಜಿಎಸ್‌ಟಿ ಮರುಪಾವತಿ ತ್ವರಿತವಾಗಿ ಮಂಜೂರು ಮಾಡುವ ಮೂಲಕ ಕಾರ್ಯನಿರತ ಬಂಡವಾಳದ ಸಕಾಲಿಕ ಲಭ್ಯತೆಯನ್ನು ಖಾತ್ರಿಪಡಿಸಲಾಗಿದೆ ಎಂದು ಆಯುಕ್ತಾಲಯದ ಸಹಾಯಕ ಆಯಕ್ತ ಸುಂದರ್‌ ರಾಜು ಸಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.