ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Team Udayavani, Apr 23, 2024, 12:37 PM IST
ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜೈಲಿನಿಂದ ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿರುವ ವಿಡಿಯೋ ವೈರಲ್ ಆಗಿದೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಸಪ್ಪ ನಾಯಕ್ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವ ವೇಳೆ ಹೂಹಾರ ಹಾಕಿ ಸ್ವಾಗತ ಮಾಡಿದ್ದಾರೆ.
ಆರೋಪಿ ಜೈಲಿನಿಂದ ಹೊರ ಬಂದಾಗ ಹೂಹಾರವನ್ನು ಹಾಕಿ, ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಆರೋಪಿಗೆ ಹೂಹಾರ ಹಾಕಿ ವಿವಿಧ ಹಾಡುಗಳನ್ನು ಎಡಿಟ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಪಟಾಕಿ ಹಾಗೂ ಸಿಹಿ ಹಂಚಿ ಆರೋಪಿಗಳ ಬಿಡುಗಡೆಯನ್ನು ಸಂಭ್ರಮವಾಗಿ ಆಚರಿಸಲಾಗಿದೆ.
ಏನಿದು ಘಟನೆ: 2023ರ ಡಿಸೆಂಬರ್ 10 ರಂದು ವಂಟಮೂರಿ ಗ್ರಾಮದಲ್ಲಿ ಪ್ರೀತಿಯ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 13 ಜನ ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಸಿದ್ದರು.
ಹೈಕೋರ್ಟ್ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಹೀಗಾಗಿ ಆರೋಪಿಗಳು ಸೋಮವಾರ (ಏ.22) ರಾತ್ರಿ ಜೈಲಿನಿಂದ ಬಿಡುಗಡೆಯಾದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.