Belagavi: ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ: ಸಿಎಂ ಸಿದ್ದರಾಮಯ್ಯ
Team Udayavani, Aug 26, 2024, 2:24 PM IST
ಬೆಳಗಾವಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ (ಆ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಈ ಪ್ರಕರಣ ಸಂಬಂಧ ಈಗಾಗಲೇ ತಪ್ಪಿತಸ್ಥ ಏಳು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.
ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಜೈಲಿನ ಒಳಗೆ ದರ್ಶನ್ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಕರ್ತವ್ಯಲೋಪವಾಗಿದೆ. ಈ ವರೆಗೆ 7 ಜನರನ್ನು ಅಮಾನತು ಮಾಡಲಾಗಿದೆ, ಈ ಬಗ್ಗೆ ತನಿಖೆಯನ್ನೂ ಮಾಡಿಸಿ, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಷಾಮೀಲಾಗಿದ್ದರೆ ಅವರನ್ನೂ ಅಮಾನತು… pic.twitter.com/nLN18otbI1
— Siddaramaiah (@siddaramaiah) August 26, 2024
ಇದಲ್ಲದೆ ಗೃಹಸಚಿವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಅವರ ವರದಿ ಆಧರಿಸಿ ಸ್ಥಳಾಂತರಕ್ಕೆ ಕ್ರಮವಹಿಸಲಾಗುವದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.