Belagavi;ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ...
Team Udayavani, Dec 4, 2023, 8:05 PM IST
ಬೆಳಗಾವಿ: ಬಿಜೆಪಿ ಎಸ್‌ಸಿ ಮೋರ್ಚಾ ಸದಸ್ಯ ಪೃಥ್ವಿ ಸಿಂಗ್ ಎನ್ನುವವರ ಮೇಲಿನ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ರಾತ್ರಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದುರುದ್ದೇಶಪೂರ್ವಕವಾಗಿ ಆತ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾನೆ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Belagavi; ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡ ಪೃಥ್ವಿಸಿಂಗ್ ಮೇಲೆ ಚಾಕು ಇರಿತ
ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ( ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಹೋದರ) ಅವರ ವಿರುದ್ಧ ಪೃಥ್ವಿಸಿಂಗ್ ಹಾಗೂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.