Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?


Team Udayavani, Oct 26, 2024, 4:14 PM IST

Belekeri port scam:

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಯ್ದಿರಿಸಿದ್ದ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಇತರರ ಶಿಕ್ಷೆಯ ಪ್ರಮಾಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ (ಅ.26) ಪ್ರಕಟಿಸಿದೆ.

ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಅವರಿಗೆ ಮೊದಲ ಕೇಸ್‌ ಅಂದರೆ ಒಳಸಂಚು ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ, ವಂಚನೆ ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆ ಪ್ರಕಟವಾಗಿದೆ. ಅಲ್ಲದೆ ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಜೈಲುಶಿಕ್ಷೆ ನೀಡಿ ಕೋರ್ಟ್‌ ಆದೇಶಿಸಿದೆ.

ಒಟ್ಟು ಆರು ಪ್ರಕರಣಗಳಲ್ಲಿ ಈವರೆಗೆ ವಿಧಿಸಿದ ದಂಡದ ಮೊತ್ತ 44 ಕೋಟಿ ರೂಪಾಯಿ ದಾಟಿದೆ. ಈಗ ಕಳೆದಿರುವ ಶಿಕ್ಷೆ ಪ್ರಮಾಣ ಹೊರತುಪಡಿಸಿ ಉಳಿದ ಶಿಕ್ಷೆ ಅನುಭವಿಸಬೇಕಿದೆ. ಸತೀಶ್ ಸೈಲ್‌ ಜತೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಖಾರದಪುಡಿ ಮಹೇಶ್‌, ಮಲ್ಲಿಕಾರ್ಜುನ ಶಿಪ್ಪಿಂಗ್‌ಗೂ ಜೈಲು ಶಿಕ್ಷೆ ವಿಧಿಸಲಾಗಿದೆ.

ಸತೀಶ್‌ ಸೈಲ್‌ ಅವರಿಗೆ ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಪ್ರಕಟವಾದ ಕಾರಣ ಅವರ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆಯಿದೆ.

ಕಾರವಾರದ ಶಾಸಕ ಸತೀಶ್‌ ಸೈಲ್‌ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್‌ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ನ್ಯಾ| ಸಂತೋಷ್‌ ಗಜಾನನ ಭಟ್‌ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ನ್ಯಾಯಾಲಯವು ಹೇಳಿತ್ತು. ಶುಕ್ರವಾರ ಮತ್ತೆ ವಾದ-ಪ್ರತಿವಾದ ನಡೆದ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಶನಿವಾರಕ್ಕೆ ಕಾಯ್ದಿರಿಸಿತ್ತು.

ಸಿಬಿಐ ಪರ ಶುಕ್ರವಾರ ಹಿರಿಯ ಸರಕಾರಿ ಅಭಿಯೋಜಕಿ ಕೆ.ಎಸ್‌. ಹೇಮಾ ವಾದ ಮಂಡಿಸಿ, ಆರೋಪಿಗಳು 3,100 ಮೆಟ್ರಿಕ್‌ ಟನ್‌ ಅದಿರು ಕಳ್ಳ ಸಾಗಣೆಯಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರಕಾರಕ್ಕೆ ಸುಮಾರು 250 ಕೋಟಿ ರೂ.ನಷ್ಟವಾಗಿದೆ. ಪ್ರಕರಣದಲ್ಲಿ ಆರೋಪಿಗಳು ಆರ್ಥಿಕ ಅಪರಾಧ ಎಸಗಿದ್ದಾರೆ. ಹೀಗಾಗಿ ಗರಿಷ್ಠ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನಲ್ಲಿ ಶಾಸಕ ಸತೀಶ್‌ ಸೈಲ್‌ ಬೇಲೆಕೇರಿ ಬಂದರಿನ ಉಪ ಸಂರಕ್ಷಣಾಧಿಕಾರಿ (ಡೆಪ್ಯೂಟಿ ಪೋರ್ಟ್‌ ಕನ್ಸರ್‌ವೇಟರ್‌) ಮಹೇಶ್‌ ಬಿಳಿಯ, ಲಾಲ್‌ವುಹಲ್‌ ಕಂಪೆನಿಯ ಮಾಲಕ ಪ್ರೇಮ್‌ ಚಂದ್‌ ಗರ್ಗ್‌, ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್‌ ಮಾಲಕ ಖಾರದಪುಡಿ ಮಹೇಶ್‌, ಸ್ವಸ್ತಿಕ್‌ ಕಂಪೆನಿ ಮಾಲಕ ಕೆ.ವಿ. ನಾಗರಾಜ್‌, ಗೋವಿಂದರಾಜು, ಆಶಾಪುರ ಕಂಪೆನಿ ಮಾಲಕ ಚೇತನ್‌ ಬಂಧನಕ್ಕೊಳಗಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಇದೀಗ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಿರುವ ಕೋರ್ಟ್‌, ಶಾಸಕ ಸತೀಶ್‌ ಸೈಲ್‌ ಸೇರಿ ಎಲ್ಲ ಆರೋಪಿಗಳು ದೋಷಿ ಎಂದು ಹೇಳಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಐಎಲ್‌ಸಿ ಕಂಪೆನಿಯ ಮಾಲಕ ಸೋಮಶೇಖರ್‌ ಈಗಾಗಲೇ ನಿಧನ ಹೊಂದಿದ್ದಾರೆ.

ಟಾಪ್ ನ್ಯೂಸ್

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

ACT

Mangaluru: ಕೊಕೇನ್‌, ಚರಸ್‌ ಸೇವನೆ; ಮೂವರ ಬಂಧನ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.