ಸಚಿವ ಡಿಕೆಶಿ ಸಂಧಾನ;ಬೆಳಗಾವಿ ರೈತರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಸ್
Team Udayavani, Nov 23, 2018, 12:28 PM IST
ಬೆಳಗಾವಿ : ಕಬ್ಬಿಗೆ ಸೂಕ್ತ ದರ ನಿಗದಿ , ಬಾಕಿ ಹಣ ಕೊಡಿಸುವಂತೆ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಶುಕ್ರವಾರ ಹಿಂಪಡೆಯಲಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 15 ದಿನಗಳೊಳಗೆ ಬಾಕಿ ಹಣ ನೀಡುವಂತೆ ಸೂಚಿಸಿದ ಬೆನ್ನಲ್ಲೇ ಸಚಿವ ಡಿ.ಕೆ.ಶಿವಕುಮಾರ್ ಅವರು ಧರಣಿ ನಿರತ ಸ್ಥಳಕ್ಕೆ ತೆರಳಿ ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಕ್ರಮವೊಂದಕ್ಕಾಗಿ ಆಗಮಿಸಿದ್ದ ಸಚಿವ ಡಿಕೆಶಿ ಅವರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ರೈತರ ಮನವೊಲಿಸಿದರು.
2 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಸಿದ್ದನಗೌಡ ಮೊದಗಿ ಮತ್ತು ಜಯಶ್ರಿ ಅವರಿಗೆ ಮೊದಲು ಎಳನೀರನ್ನು ಕುಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ರೈತರು ನ್ಯಾಯೋಚಿತ ಹೋರಾಟ ನಡೆಸಿದ್ದಾರೆ. ಸರ್ಕಾರದ ಗಮನ ಸೆಳೆದಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುತ್ತೇವೆ.ರೈತರು ನಮ್ಮವರು ,ನಾವು ರೈತರ ಪರ ಇರುವವರು
ಎಂದರು.
15 ದಿನದ ಗಡುವು,ತಾತ್ಕಾಲಿಕ ಅಂತ್ಯ
ಹೋರಾಟ ನಿರತ ರೈತರು 15 ದಿನಗಳ ಗಡುವನ್ನು ಸರ್ಕಾರಕ್ಕೆ ನೀಡಿದ್ದಾರೆ.ಮಾತ್ರವಲ್ಲದೆ ಬೇಡಿಕೆ ಈಡೇರದೆ ಹೊದಲ್ಲಿ ಮತ್ತೆ ಹೋರಾಟ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದರು.
ರಮೇಶ್ ಜಾರಕಿಹೊಳಿ ಸೇರಿ ಪ್ರಮುಖ ನಾಯಕರ ವಿರುದ್ಧ ದೂರು
ರೈತರು ಸಚಿವ ಡಿ.ಕೆ.ಶಿವಕುಮಾರ್ ಅವರ ಬಳಿ ಸಚಿವ ರಮೇಶ್ ಜಾರಕಿಹೊಳಿ ಅವರ ಕಾರ್ಖಾನೆ ಬಾಕಿ ಇರಿಸಿಕೊಂಡಿರುವ ಹಣದ ಕುರಿತಾಗಿ ದಾಖಲೆಗಳನ್ನು ತೋರಿಸಿದ್ದಾರೆ. ಮಾತ್ರವಲ್ಲದೆ ಬಿಜೆಪಿ ನಾಯಕರು ಸೇರಿ ಪ್ರಮುಖ ಕಾರ್ಖಾನೆ ಮಾಲೀಕರು ಬಾಕಿ ಇರಿಸಿಕೊಂಡಿರುವ ಬಗ್ಗೆ ದಾಖಲೆಗಳನ್ನು ತೋರಿಸಿದ್ದಾರೆ ಎಂದು ವರದಿಯಾಗಿದೆ.
ಡಿಸಿಗೆ ಬಿಗಿ ಭದ್ರತೆ
ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನ ಹಳ್ಳಿ ಕಚೇರಿಗೆ ಆಗಮಿಸಿದರು. ಈ ವೇಳೆ ರೈತರು ಧಿಕ್ಕಾರಗಳನ್ನು ಕೂಗಿದರು.
ರೈತರಿಗೆ ಕಳೆದ ವರ್ಷದ ಕಬ್ಬಿನ ಬಾಕಿ ನೀಡಬೇಕಾದ ವಿಚಾರದಲ್ಲಿ ಸಕ್ಕರೆ ಕಾರ್ಖಾನೆ
ಮಾಲೀಕರು ರೈತರೊಂದಿಗೆ ಮಾಡಿಕೊಂಡ ಮೌಖೀಕ ಒಪ್ಪಂದದಂತೆ ಮುಂದಿನ ಹದಿನೈದು ದಿನಗಳೊಳಗೆ ಬಾಕಿ ಹಣ ಕೊಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.