ದೇಶ ಸೇವೆಗೆ ಹೊರಟ ಬಾವಿಕೇರಿ ನಾಯಿಗಳು
Team Udayavani, Jun 17, 2023, 1:45 PM IST
ಅಂಕೋಲಾ: ತಾಲೂಕಿನ ಬಾವಿಕೇರಿ ಗ್ರಾಮದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಮರಿಗಳು ಈಗ ದೇಶ ಸೇವೆಗೆ ಭಾರತೀಯ ಸೇನೆಗೆ ಹೊರಟಿವೆ!
ಬಾವಿಕೇರಿ ಗ್ರಾಮದ ರಾಘವೇಂದ್ರ ಭಟ್ ಸಾಕಿ ಬೆಳೆಸಿದ ಬೆಲ್ಲಿಯಂ ಮೆಲಿನೋಯ್ಡ ತಳಿಯ 17 ಮರಿಗಳನ್ನು ಸೇನೆಯ ಕಮಾಂಡ್ ಹಾಗೂ ಜವಾನರು ಆಗಮಿಸಿ ಎಸಿ ಬಸ್‌ನಲ್ಲಿ ಅಸ್ಸಾಂಗೆ ಕೊಂಡೊಯ್ದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉದ್ಯೋಗಿಯಾಗಿರುವ ರಾಘವೇಂದ್ರ ಭಟ್ 25 ವರ್ಷಗಳಿಂದ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಿದ್ದಾರೆ. ಈ ಹಿಂದೆ ಸಾಕಿದ್ದ ಬೆಲ್ಲಿಯಂ ಮೆಲಿನೋಯ್ಸ ಜಾತಿಯ ನಾಯಿಗಳು ಬೆಂಗಳೂರಿನ ಪೊಲೀಸ್ ಇಲಾಖೆ, ಕಾರ್ಕಳ, ಎಎನ್‌ಎಫ್, ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿದೆ.
ಇದನ್ನೂ ಓದಿ: ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ: ಇಬ್ಬರ ದುರ್ಮರಣ; ಸ್ವಾಮೀಜಿಗೆ ಗಂಭೀರ ಗಾಯ
ಇವರು ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಗೆ ನೀಡಿದ್ದ ನಾಯಿಯನ್ನು ನೋಡಿ ಹಾಗೂ ಇವರ ಫೇಸ್‌ಬುಕ್ ಪೇಜ್ ವೀಕ್ಷಿಸಿ ಭಾರತೀಯ ಸೇನೆ ಅಧಿಕಾರಿಗಳು ಇವರನ್ನು ಸಂಪರ್ಕಿಸಿದ್ದರು. ಅಲ್ಲದೇ ನಾಯಿಗಳ ವೀಕ್ಷಣೆಗೆ ಇವರ ಮನೆಗೆ ಭೇಟಿ ನೀಡಿ ಪರಿಶೀಲನೆ ಕೂಡಾ ನಡೆಸಿದ್ದರು. ಆ ನಂತರ ಇಂಡಿಯನ್ ಆರ್ಮಿಯ ಜವಾನ್ 45 ದಿನಗಳಿಂದ ಇವರ ಮನೆಯಲ್ಲೇ ತಂಗಿ ನಾಯಿಗಳ ನಡವಳಿಕೆ, ಆಹಾರ ಪದ್ಧತಿ, ಅವುಗಳ ಬುದ್ಧಿಮತ್ತೆ, ಆರೋಗ್ಯ ಪರಿಶೀಲಿಸಿ ದಿನಾಲೂ ಉನ್ನತಾ ಧಿಕಾರಿಗಳಿಗೆ ವರದಿ ನೀಡುತ್ತಿದ್ದರು. ಗುರುವಾರ ಸೇನೆಯ ಅಧಿಕಾರಿಗಳ ತಂಡವೇ ಬಂದು ಬೆಲ್ಲಿಯಂ ಮಲಿನೋಯ್ಡ 17 ನಾಯಿ ಮರಿಗಳನ್ನು ಖಾಸಗಿ ಎಸಿ ಬಸ್‌ನಲ್ಲಿ ಕುಳ್ಳಿರಿಸಿ ಅಸ್ಸಾಂನತ್ತ ಕೊಂಡೊಯ್ದಿದ್ದಾರೆ.
ಈ ನಾಯಿಗಳು ಗುಣಮಟ್ಟದ ಆಧಾರದ ಮೇಲೆ ತಲಾ 80 ಸಾವಿರ ರೂ.ಗಳಿಂದ 2 ಲಕ್ಷ ರೂ.ಗಳ ತನಕ ಬೆಲೆ ಬಾಳುತ್ತವೆ. ಇವರು ಸಾಕಿರುವ ಒಂದು ನಾಯಿ ಕಾರವಾರ, ಶಿವಮೊಗ್ಗ, ಮಂಗಳೂರು, ಉಡುಪಿ, ಗೋವಾ, ಬೆಳಗಾವಿ, ಶಿರಸಿ ಮುಂತಾದೆಡೆ ನಡೆದ ಡಾಗ್ ಶೋಗಳಲ್ಲಿ ಪ್ರಶಸ್ತಿ, ಚಿನ್ನ ಮತ್ತು ಬೆಳ್ಳಿಯ ಪದಕಗಳನ್ನು ಬಾಚಿಕೊಂಡಿದೆ.
ಆಹಾರವೇ ವಿಶಿಷ್ಟ: ಈ ನಾಯಿಗಳಿಗೆ ಅನ್ನ, ಮಜ್ಜಿಗೆ, ಮೊಸರು, ಹಾಲು, ಮೊಟ್ಟೆ, ಸ್ವಲ್ಪ ಚಿಕನ್, ಡ್ರೈಫ್ರುಟ್ಸ್, ಮಲ್ಟಿಗ್ರೆನ್ ಪೌಡರ್‌ಗಳನ್ನು ಬೆರೆಸಿ ನೀಡಲಾಗುತ್ತದೆ. ಇದರೊಂದಿಗೆ ತರಕಾರಿಗಳನ್ನು ಕೂಡಾ ಬೇಯಿಸಿ ನೀಡಲಾಗುತ್ತದೆ. ರಾಘವೇಂದ್ರ ಭಟ್ ಅವರ ಪತ್ನಿ ರಾಜೇಶ್ವರಿ ಹಾಗೂ ಅವರ ತಾಯಿ ನಾಯಿಗಳಿಗೆ ಆಹಾರವನ್ನು ತಯಾರಿಸುತ್ತಾರೆ. ಮಾಂಸಾಹಾರಿ ಆಹಾರವನ್ನು ತಂದು ನೀಡಲು ಒಬ್ಬರನ್ನು ನೇಮಕ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.