Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ರಿಂಗರ್ ಲ್ಯಾಕ್ಟೇಟ್ ದ್ರವ ಕಾರಣ: ತನಿಖಾ ತಂಡ ಶಂಕೆ ನಿರ್ಲಕ್ಷ್ಯ ಇಲ್ಲ: ವೈದ್ಯರ ತಂಡ
Team Udayavani, Nov 29, 2024, 1:41 AM IST
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಬಗ್ಗೆ ತನಿಖೆ ನಡೆಸಿದ ಬೆಂಗಳೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕಿ ಡಾ| ಸವಿತಾ ಸಿ. ನೇತೃತ್ವದ ತಂಡ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವಲ್ಲ, ಬದಲಾಗಿ ಶಸ್ತ್ರಚಿಕಿತ್ಸೆಗೆ ಬಳಕೆಯಾದ ರಿಂಗರ್ ಲ್ಯಾಕ್ಟೇಟ್ ದ್ರವ ಕಾರಣ ಎಂದು ಸಂಶಯ ವ್ಯಕ್ತಪಡಿಸಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನ. 9ರಿಂದ 11ರ ವರೆಗೆ ಒಟ್ಟು 34 ಸಿಜೇರಿಯನ್ ಹೆರಿಗೆಗಳನ್ನು ನಡೆಸಲಾಗಿದೆ. ಅದರಲ್ಲಿ 7 ಪ್ರಕರಣಗಳು ಕ್ಲಿಷ್ಟಕರವಾಗಿದ್ದವು. ನಾಲ್ಕು ಪ್ರಕರಣಗಳಲ್ಲಿ ಬಾಣಂತಿ ಯರು ಸಾವಿಗೀಡಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ. ಓರ್ವ ಬಾಣಂತಿಯ ಚಿಕಿತ್ಸೆ ಮುಂದುವರಿದಿದೆ. ಸಾವಿನ ಪ್ರಕರಣಗಳಿಗೆ ಜಿಲ್ಲಾಸ್ಪತ್ರೆಯ ತಜ್ಞರ ಮತ್ತು ಇತರ ಸಿಬಂದಿಯ ನಿರ್ಲಕ್ಷ್ಯ ಕಂಡು ಬಂದಿಲ್ಲ. ಗುಣಮಟ್ಟದ ಆರೈಕೆ ನೀಡಿದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತಂಡ ಭಾವಿಸಿದೆ.
ಜಮೀರ್‌ಗೆ ಇಂದು ವರದಿ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ನಾಲ್ವರು ಬಾಣಂತಿಯರ ಸಾವು ಮತ್ತು ಬಿಮ್ಸ್‌ನ ಓರ್ವ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿ ಸಿದಂತೆ ಪರಿಶೀಲಿಸಿ, ಪ್ರತ್ಯೇಕ ವರದಿ ನೀಡುವಂತೆ ಬಳ್ಳಾರಿ, ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಸೂಚನೆ ನೀಡಿದ್ದು, ಇಂದು ವರದಿ ಸಲ್ಲಿಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್ ಹೋರಾಟ: ಆರ್. ಅಶೋಕ್
6 ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತನಿಖಾಸ್ತ್ರ ; 3 ತಿಂಗಳಲ್ಲಿ ವರದಿಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.