Bengaluru Bandh: ಸೆ. 11ಕ್ಕೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರು ಬಂದ್
Team Udayavani, Sep 1, 2023, 11:08 PM IST
ಬೆಂಗಳೂರು: ಶಕ್ತಿ ಯೋಜನೆ ಯಿಂದಾಗಿ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ, ಚಾಲಕ ರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ಧನ ನೀಡುವುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.11ರಂದು ಬೆಂಗಳೂರು ಬಂದ್ಗೆ ಕರೆ ನೀಡಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ನಟರಾಜ್ ಶರ್ಮ, ಈಗಾಗಲೇ ಸುಮಾರು 32 ಸಂಘಟನೆಗಳ ಮುಖಂಡರು ಸಭೆ ಸೇರಿ ಚರ್ಚಿಸಲಾಗಿದೆ. ಈ ಹಿಂದೆ ಬೇಡಿಕೆ ಈಡೇರಿಕೆ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆಗ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ಈಡೇರಿಸಲು ಮುಂದಾಗಿಲ್ಲ. ಆ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.