ಡೈರಿ ಎಫೆಕ್ಟ್ ಕೊನೆಗೂ ವಿವಾದಿತ ಸ್ಟೀಲ್ ಫ್ಲೈ ಓವರ್ ಯೋಜನೆ ರದ್ದು?
Team Udayavani, Mar 2, 2017, 11:57 AM IST
ಬೆಂಗಳೂರು : ಕಿಕ್ ಬ್ಯಾಕ್ ಸೇರಿದಂತೆ ಹಲವು ಬಗೆಯ ವಿವಾದಗಳಿಗೆ ಗುರಿಯಾಗಿದ್ದ ಸುಮಾರು 1,800 ಕೋಟಿ ರೂ. ವೆಚ್ಚದ ಸ್ಟೀಲ್ ಫ್ಲೈ ಓವರ್ ಯೋಜನೆಗೆ ಎಳ್ಳು ನೀರು ಬಿಡಲು ರಾಜ್ಯ ಸರಕಾರ ನಿರ್ಧರಿಸಿರುವುದಾಗಿ ವರದಿಯಾಗಿದೆ.
ರಾಜ್ಯ ರಾಜಕೀಯ ರಂಗದಲ್ಲಿ ಹಲವು ಕಂಪನಗಳನ್ನು ಮೂಡಿಸಿದ್ದ ಗೋವಿಂದರಾಜು ಡೈರಿಯಲ್ಲಿ ಈ ಯೋಜನೆಗೆ 65 ಕೋಟಿ ರೂ. ಕಿಕ್ ಬ್ಯಾಕ್ ಸಂದಾಯವಾಗಿರುವುದಾಗಿ ಬರೆಯಲಾಗಿತ್ತು.
ಎಲ್ಲ ಬಗೆಯ ವಿವಾದಗಳಿಂದ ಮುಕ್ತವಾಗಲು ಈಗ ಸ್ಟೀಲ್ ಫ್ಲೈ ಓವರ್ ಯೋಜನೆಯನ್ನೇ ಕೈಬಿಡಲು ಸರಕಾರ ಮುಂದಾಗಿರುವುದಾಗಿ ತಿಳಿದುಬಂದಿದೆ. ಈ ಕುರಿತಾದ ಅಂತಿಮ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದು ಗೊತ್ತಾಗಿದೆ.
ಸ್ಟೀಲ್ ಫ್ಲೈ ಓವರ್ ಯೋಜನೆಗೆ ಬೆಂಗಳೂರಿನ ಪ್ರಜ್ಞಾವಂತ ನಾಗರಿಕರು, ಪರಿಸರ ಪ್ರೇಮಿಗಳು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರು. ಆದರೆ ಈ ಯೋಜನೆಯನ್ನು ತಾನು ಕೈಗೊಂಡೇ ಸಿದ್ಧ ಎಂದು ಸರಕಾರ ಹೇಳಿಕೊಂಡಿತ್ತು. ತದನಂತರದಲ್ಲಿ ಗೋವಿಂದರಾಜು ಡೈರಿಯಲ್ಲಿ 65 ಕೋಟಿ ರೂ. ಹಣ ಈ ಯೋಜನೆಗಾಗಿ ಸಂದಾಯವಾಗಿದೆ ಎಂದು ಬರೆಯಲಾಗಿದ್ದುದು ಕಂಡು ಬಂದಿತ್ತು. ಇದು ನೇರವಾಗಿ ಮುಖ್ಯಮಂತ್ರಿಗೇ ಸಂದಾಯವಾಗಿರುವ ಕಿಕ್ ಬ್ಯಾಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.