Crime: ಬುಕ್ ಮಾಡಿದ ಕ್ಯಾಬ್ ಬಿಟ್ಟು ಬೇರೆ ಕಾರಿಗೆ ಹತ್ತಿದ ಮಹಿಳೆ… ಚಾಲಕನಿಂದ ಕಪಾಳಮೋಕ್ಷ
Team Udayavani, Aug 11, 2023, 10:40 AM IST
ಬೆಂಗಳೂರು: ಬುಕ್ ಮಾಡಿದ ಕ್ಯಾಬ್ ಬದಲು ಬೇರೆ ಕ್ಯಾಬ್ ಹತ್ತಿದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್ವರ ನಿವಾಸಿ ಬಸವರಾಜು(25) ಬಂಧಿತ. ಆರೋಪಿ ಬುಧವಾರ ಬೆಳಗ್ಗೆ ಬೋಗನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿ ವನಿತಾ ಅಗರ್‌ವಾಲ್ ಎಂಬವರಿಗೆ ಹೊಡೆದಿದ್ದರು.
ಗದಗ ಮೂಲದ ಬಸವರಾಜು ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಕ್ಯಾಬ್ ಚಾಲಕನಾಗಿ ದ್ದು, ಬುಧವಾರ ಬೆಳಗ್ಗೆ ಬೆಳ್ಳಂದೂರಿನ ಬೋಗನಹಳ್ಳಿ ಬಳಿ ಕ್ಯಾಬ್ ನಿಲ್ಲಿಸಿಕೊಂಡಿದ್ದರು. ಈ ವೇಳೆ ವನಿತಾ ತಮ್ಮ ಮಗನನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ಯಾಬ್ ಬುಕ್ ಮಾಡಿದ್ದಾರೆ. ಆಗ ಸ್ಥಳಕ್ಕೆ ಬಸವ ರಾಜು ಕ್ಯಾಬ್ ಬಂದಿದೆ. ತಾವು ಬುಕ್ ಮಾಡಿದ ಕ್ಯಾಬ್ ಇದೆ ಎಂದು ವನಿತಾ ಕ್ಯಾಬ್ ಹತ್ತಿದ್ದರು. ಆದರೆ, ಒಟಿಪಿ ಹೇಳಿದಾಗ ಅದು ತಪ್ಪಾಗಿತ್ತು. ಆಗ ಆರೋಪಿ “ನೀವು ಬುಕ್ ಮಾಡಿರುವುದು ಬೇರೆ ಕ್ಯಾಬ್, ಇಳಿಯಿರಿ’ ಎಂದಿದ್ದಾನೆ. ಈ ವಿಚಾರಕ್ಕೆ ಕ್ಯಾಬ್ ಚಾಲಕ ಮತ್ತು ಮಹಿಳೆ ಜತೆ ವಾಗ್ವಾದ ನಡೆದಿದೆ. ಆಗ ಮಹಿಳೆ ಕಾರಿನಿಂದ ಇಳಿದು ಡೋರನ್ನು ಜೋರಾಗಿ ಹಾಕಿದ್ದಾರೆ. ಅದರಿಂದ ಕೋಪಗೊಂಡ ಚಾಲಕ ಇಳಿದು ವನಿತಾಗೆ ಕಪಾಳಮೋಕ್ಷ ಮಾಡಿದ್ದಾನೆ. ಈ ವೇಳೆ ಮಧ್ಯ ಪ್ರವೇಶಿಸಿದ ವನಿತಾ ಮಗ ಮತ್ತು ಸ್ಥಳೀಯರು ಜಗಳ ಬಿಡಿಸಿದ್ದಾರೆ. ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Bike Stunt: ವಿಚಿತ್ರ ವೇಷ ಧರಿಸಿ ಬೈಕ್ ಸ್ಟಂಟ್: “ಮಿಸ್ಟರ್ ಕ್ರೇಜಿವ್ಲಾಗ್ಸ್’ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.