Bengaluru: ವಿಮಾನದಲ್ಲಿದ್ದವು 10 ಜೀವಂತ ಹಳದಿ ಅನಕೊಂಡಗಳು!!
Team Udayavani, Apr 22, 2024, 9:08 PM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ತಮ್ಮ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪ್ರಯಾಣಿಕನೊಬ್ಬನನ್ನು ಬಂಧಿಸಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬೆಂಗಳೂರು ಕಸ್ಟಮ್ಸ್, ‘ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕರ ಚೆಕ್-ಇನ್ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆಗಾಣಿಕೆ ಮಾಡುವ ಪ್ರಯತ್ನವನ್ನು ತಡೆದಿದ್ದೇವೆ ಎಂದು ತಿಳಿಸಿದ್ದಾರೆ.
“ಪ್ರಯಾಣಿಕನನ್ನು ಬಂಧಿಸಿ ತನಿಖೆ ನಡೆಯುತ್ತಿದೆ. ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸಲಾಗುವುದಿಲ್ಲ”ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ. ಭಾರತೀಯ ಕಾನೂನುಗಳ ಪ್ರಕಾರ ವನ್ಯಜೀವಿ ವ್ಯಾಪಾರ ಮಾಡುವುದು ಕಾನೂನುಬಾಹಿರವಾಗಿದೆ ಮತ್ತು ಕಸ್ಟಮ್ಸ್ ಆಕ್ಟ್, 1962 ವನ್ಯಜೀವಿ ಕಳ್ಳಸಾಗಣೆಯನ್ನು ಎದುರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ.
#Indiancustomsatwork Bengaluru Air #Customs intercepted attempt to smuggle 10 yellow Anacondas concealed in checked-in bag of a pax arriving from Bangkok. Pax arrested and investigation is underway. Wildlife trafficking will not be tolerated. #CITES #WildlifeProtection 🐍✈️ pic.twitter.com/2634Bxk1Hw
— Bengaluru Customs (@blrcustoms) April 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.