Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
Team Udayavani, Nov 2, 2024, 10:43 AM IST
ಬೆಂಗಳೂರು: ದೇಶದಲ್ಲಿ ಮಹಾರಾಷ್ಟ್ರದ ಅನಂತರ ಅತೀ ಹೆಚ್ಚು ತೆರಿಗೆ ನೀಡುತ್ತಿರುವ 2ನೇ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 4 ಲಕ್ಷ ಕೋಟಿ ರೂ.ಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಹಂಚಿಕೆ ಪಾಲು ಕೇವಲ 50 ರಿಂದ 60 ಸಾವಿರ ಕೋಟಿ ರೂ. ಮಾತ್ರ.
ಕನ್ನಡ ನಾಡು ಅಭಿವೃದ್ಧಿಯಲ್ಲಿ ಮುಂದಿ ದೆ ಎಂದು ಅನ್ಯಾಯವೆಸಗುವುದು ಸರಿಯಲ್ಲ. ರಾಜ್ಯದ ನ್ಯಾಯಯುತ ತೆರಿಗೆ ಪಾಲಿಗೆ ಬೇಡಿಕೆ ಇಟ್ಟರೆ ಇದಕ್ಕೆ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಯುತ ನಮ್ಮ ಹಕ್ಕಿಗೆ ಹೋರಾಡಬೇಕಾಗಿದೆ. ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಒಕ್ಕೊರಲಿನಿಂದ ಧ್ವನಿ ಎತ್ತಬೇಕು. ಈ ನಡುವೆ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Karnataka Rajyotsava; ಬಾಬು ಪಿಲಾರ್ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!
Bengaluru: ಕನ್ನಡ ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.